Advertisement

ಇನ್ನೊಂದು ವಾರ ಬೀಳಲಿದೆ ಬಿಗಿ ಬೀಗ

09:49 PM May 18, 2021 | Team Udayavani |

ಶಿವಮೊಗ್ಗ: ನಗರದಲ್ಲಿ ಕಳೆದ ವಾರ ನಾಲ್ಕು ದಿನಗಳ ಕಾಲ ಜಾರಿಗೊಳಿಸಲಾಗಿದ್ದ ಬಿಗಿ ಲಾಕ್‌ಡೌನ್‌ ಭಾನುವಾರದ ತನಕ ಮುಂದುವರೆಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್‌.ಈಶ್ವರಪ್ಪ ತಿಳಿಸಿದರು.

Advertisement

ಅವರು ಸೋಮವಾರ ಜಿಲ್ಲಾ ಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ಸಂಘ ಸಂಸ್ಥೆಗಳ ಪ್ರತಿನಿ ಧಿಗಳ ಸಭೆಯಲ್ಲಿ ಮಾತನಾಡಿದರು. ಕಳೆದ ವಾರ ನಾಲ್ಕುದಿನ ಕೊರೊನಾ ಕಫೂì ಬಿಗಿಗೊಳಿಸಿರುವ ಹಿನ್ನೆಲೆಯಲ್ಲಿ ಸೋಂಕು ಹರಡುವ ಪ್ರಮಾಣ ಸ್ವಲ್ಪಮಟ್ಟಿಗೆ ನಿಯಂತ್ರಣಕ್ಕೆ ಬಂದಿದ್ದು, ಎಲ್ಲರ ಅಭಿಪ್ರಾಯದಂತೆ ಇದನ್ನು ಒಂದು ವಾರ ಕಾಲ ಮುಂದುವರೆ ಸಲಾಗುವುದು.

ಆದರೆ ಈ ಬಾರಿ ಎಪಿಎಂಸಿ ಮಾರುಕಟ್ಟೆ ಬೆಳಿಗ್ಗೆ 7ಗಂಟೆಯವರೆಗೆ ಹಾಗೂ ಸಗಟು ದಿನಸಿ ವ್ಯಾಪಾರಕ್ಕೆ ಬೆಳಗ್ಗೆ 9ಗಂಟೆಯವರೆಗೆ ಅವಕಾಶ ನೀಡಲಾಗುವುದು. ಇನ್ನುಳಿದಂತೆ ಸರ್ಕಾರದ ಮಾರ್ಗಸೂಚಿ ಪ್ರಕಾರ ಅವಶ್ಯಕ ವಸ್ತುಗಳು ಹಾಗೂ ಕೈಗಾರಿಕೆಗಳಿಗೆ ಅನುಮತಿ ನೀಡಲಾಗಿದೆ ಎಂದು ಹೇಳಿದರು.

ಮೂರನೇ ಅಲೆ ಎದುರಿಸಲು ಸಿದ್ಧತೆ: ಅಕ್ಟೋಬರ್‌ ತಿಂಗಳಲ್ಲಿ ಕೋವಿಡ್‌ ಮೂರನೇ ಅಲೆ ಬರುವ ಬಗ್ಗೆ ತಜ್ಞರು ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಮುಂಜಾ ಗ್ರತಾ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಮೆಗ್ಗಾನ್‌ ಆಸ್ಪತ್ರೆಯಲ್ಲಿ ಕೋವಿಡ್‌ ಪೀಡಿತರ ಸಂಬಂ ಧಿಕರಿಗೆ ಯಾವುದೇ ಕಾರಣಕ್ಕೂ ವಾರ್ಡ್‌ ಒಳಗೆ ಪ್ರವೇಶಿಸಲು ಅವಕಾಶ ನೀಡಬಾರದು.

ಕೋವಿಡ್‌ ಪೀಡಿತರ ಅಗತ್ಯಗಳನ್ನು ನೋಡಿ ಕೊಳ್ಳಲು ಬೇಕಾದ ಸಿಬ್ಬಂದಿಯನ್ನು ಸ್ಥಳೀಯವಾಗಿ ನೇಮಕ ಮಾಡಿಕೊಳ್ಳುವಂತೆ ಸಚಿವರು ಜಿಲ್ಲಾಧಿ ಕಾರಿಗಳಿಗೆ ಸೂಚಿಸಿದರು. ಜಿಲ್ಲಾ ಕೋವಿಡ್‌ ನಿರ್ವಹಣಾ ತಜ್ಞ ಸಮಿತಿಯ ಸದಸ್ಯ ಡಾ. ಶ್ರೀಕಾಂತ್‌ ಹೆಗಡೆ ಮಾತನಾಡಿ, ಲಸಿಕೆ ನೀಡುವುದನ್ನು ತೀವ್ರಗೊಳಿಸುವುದೊಂದೇ ಮೂರನೇ ಅಲೆ ತಡೆಯಲು ಇರುವ ಮಾರ್ಗವಾಗಿದೆ.

Advertisement

ಮೂರನೇ ಅಲೆ ತಾಲೂಕು ಹಾಗೂ ಗ್ರಾಮೀಣ ಭಾಗಗಳಲ್ಲಿ ಹೆಚ್ಚಿನ ಪರಿಣಾಮ ಬೀರುವ ಸಾಧ್ಯತೆಯಿದ್ದು, ಅಲ್ಲಿ ವೈದ್ಯಕೀಯ ವ್ಯವಸ್ಥೆ ಉತ್ತಮ ಪಡಿಸಬೇಕು. ಅಗತ್ಯ ಪ್ರಮಾಣದ ವೈದ್ಯರು, ನರ್ಸ್‌, ಸಿಬ್ಬಂದಿ ನೇಮಕ ಮಾಡಬೇಕು. ಗ್ರಾಮೀಣ ಭಾಗದಲ್ಲಿ ಲಸಿಕೆ ನೀಡುವ ಕಾರ್ಯವನ್ನು ತೀವ್ರಗೊಳಿಸಬೇಕು ಎಂದು ಹೇಳಿದರು.

ಸಮಿತಿಯ ಸದಸ್ಯ ಧನಂಜಯ ಸರ್ಜಿ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರಿಗೆ ಆದಷ್ಟು ಬೇಗನೆ ಲಸಿಕೆ ನೀಡಲು ಕ್ರಮ ಕೈಗೊಳ್ಳಬೇಕು. ಗ್ರಾಮೀಣ ಭಾಗದಲ್ಲಿ ಕೋವಿಡ್‌ ಮಾರ್ಗಸೂಚಿಗಳನ್ನು ಬಿಗಿಗೊಳಿಸಬೇಕು ಎಂದರು.

ಸಂಸದ ಬಿ.ವೈ. ರಾಘವೇಂದ್ರ, ಶಾಸಕರಾದ ಅರಗ ಜ್ಞಾನೇಂದ್ರ, ಕುಮಾರ ಬಂಗಾರಪ್ಪ, ವಿಧಾನ ಪರಿಷತ್‌ ಸದಸ್ಯರಾದ ಪ್ರಸನ್ನ ಕುಮಾರ್‌, ರುದ್ರೇಗೌಡ, ಎಸ್ಪಿ ಲಕ್ಷ ಪ್ರಸಾದ್‌, ವಿವಿಧ ಸಂಘ ಸಂಸ್ಥೆಗಳ ಪ್ರತಿನಿ ಧಿಗಳು, ಅ ಧಿಕಾರಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next