ಶಿವಮೊಗ್ಗ: ತುರ್ತು ಸಂದರ್ಭ, ಸಂಕಷ್ಟದ ಸಮಯ, ಪ್ರಕೃತಿ ವಿಕೋಪ, ಕೋವಿಡ್‌ನಂತಹ ವಿಷಮ ಪರಿಸ್ಥಿತಿಯಲ್ಲಿ ಪ್ರತಿಯೊಂದಕ್ಕೂ ಸರ್ಕಾರವನ್ನು ಆಶ್ರಯಿಸದೆ ದಾನಿಗಳು, ಸಂಘ-ಸಂಸ್ಥೆಗಳು ನೆರವು ಹಾಗೂ ಸಹಕಾರ ನೀಡಬೇಕೆಂದು ಆರ್‌ಎಸ್‌ಎಸ್ ದಕ್ಷಿಣ ಪ್ರಾಂತ ಸಹ ಕಾರ್ಯವಾಹ ಪಟ್ಟಾಭಿರಾಮ ಮನವಿ ಮಾಡಿದರು.
ಶಿವಮೊಗ್ಗ ಜಿಲ್ಲಾ ಆಟೋಮೊಬೈಲ್ ಡೀಲರ್ ಅಸೋಸಿಯೇಷನ್ (ಸಾಡ) ವತಿಯಿಂದ ಬುಧವಾರ ಬೆಳಿಗ್ಗೆ ಇಲ್ಲಿನ ಜಿಲ್ಲಾ ಧಿಕಾರಿಗಳ ಕಚೇರಿಯಲ್ಲಿ ಕೋವಿಡ್ ನ ತುರ್ತು ನಿಗಾ ಘಟಕಕ್ಕೆ (ಐಸಿಯು) ಸುಮಾರು 10 ಲಕ್ಷ ರೂ. ಮೌಲ್ಯದ ರೋಗಿಗಳ ಬಹು ಉಸ್ತುವಾರಿ ವ್ಯವಸ್ಥೆ (ಎಂಪಿಎಂಎಸ್)ಗಳನ್ನು ಕೊಡುಗೆಯಾಗಿ ನೀಡುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕೋವಿಡ್‌ನಿಂದ ಉಂಟಾಗಿರುವ ಆರೋಗ್ಯ ತುರ್ತು ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಶಕ್ತಿ ಮೀರಿ ಪ್ರಯತ್ನಿಸುತ್ತಿವೆ.
ಸಾಧ್ಯವಾದಷ್ಟು ಮಟ್ಟಿಗೆ ಲೋಪದೋಷಗಳನ್ನು ಸರಿಪಡಿಸಲಾಗುತ್ತಿದೆ. ಸರ್ಕಾರದೊಂದಿಗೆ ಸಂಘ-ಸಂಸ್ಥೆಗಳೂ ಕೈಜೋಡಿಸಿದಲ್ಲಿ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಬಹುದು ಎಂದರು. ಈ ನಿಟ್ಟಿನಲ್ಲಿ ಸೇವಾ ಭಾರತಿ, ಕೋವಿಡ್ ಸುರûಾ ಪಡೆ, ಜಿಲ್ಲಾ ಆಟೋಮೊಬೈಲ್ ಡೀಲರ್ ಅಸೋಸಿಯೇಷನ್ ಸೇರಿದಂತೆ ಅನೇಕ ಸಂಘ-ಸಂಸ್ಥೆಗಳು ಸಹಾಯ, ನೆರವು ನೀಡಲು ಮುಂದಾಗಿರುವುದು ಶ್ಲಾಘನೀಯ. ಅದರಲ್ಲೂ ಹರ್ಷ ಕಾಮತ್ ಅವರು ಸಾಮಾಜಿಕ ಜವಾಬ್ದಾರಿಯಿಂದ ಮುಂದಾಳತ್ವ ವಹಿಸಿ ಕಾರ್ಯನಿರ್ವಹಿಸುತ್ತಿರುವುದು ಪ್ರಶಂಸನೀಯ.
ಇವರಿಗೆ ಇತರೆ ಪದಾಧಿ ಕಾರಿಗಳು ಬೆಂಬಲವಾಗಿ ನಿಂತಿರುವುದು ಅನುಕರಣೀಯ ಎಂದು ಹೇಳಿದರು. ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಎಸ್.ದತ್ತಾತ್ರಿ ಮಾತನಾಡಿ, ಕಳೆದ ವರ್ಷದ ಲಾಕ್‌ಡೌನ್ ಸಂದರ್ಭದಲ್ಲೂ ಜಿಲ್ಲಾ ಆಟೋಮೊಬೈಲ್ ಡೀಲರ್ ಅಸೋಸಿಯೇಷನ್ ನೂರಾರು ಫುಡ್ ಕಿಟ್‌ಗಳನ್ನು ವಿತರಿಸಿತ್ತು. ಈ ಬಾರಿ ಲಕ್ಷಾಂತರ ರೂ. ಮೌಲ್ಯದ ವೈದ್ಯಕೀಯ ಪರಿಕರ ನೀಡುವ ಮೂಲಕ ಮಾನವೀಯತೆ ಮೆರೆದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಕಳೆದ ವರ್ಷದ ಲಾಕ್‌ಡೌನ್‌ನಿಂದಾಗಿ ಅನೇಕರು ಉದ್ಯೋಗ ಕಳೆದುಕೊಂಡಿದ್ದ ಸಂದರ್ಭದಲ್ಲಿ ಓಂ ಗಣೇಶ್ ಯಮಹಾ ಶೋರೂಂನಲ್ಲಿ ಉದ್ಯೋಗ ಮೇಳ ನಡೆಸಿ ನೂರಾರು ಮಂದಿಗೆ ಉದ್ಯೋಗ ಕಲ್ಪಿಸಿದ್ದನ್ನು ಅವರು ಸ್ಮರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಧಿಕಾರಿ ಕೆ.ಬಿ. ಶಿವಕುಮಾರ್, ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಿ.ಎಸ್. ಅರುಣ್, ಜಿಲ್ಲಾ ಆರೋಗ್ಯಾಧಿ ಕಾರಿ ರಾಜೇಶ್ ಸುರಗಿಹಳ್ಳಿ, ಅಸೋಸಿಯೇಷನ್‌ನ ಪದಾಧಿಕಾರಿಗಳು ಹಾಗೂ ವೈದ್ಯಕೀಯ ಪರಿಕರಗಳ ದಾನಿಗಳಾದ ಹರ್ಷ ಭಾಸ್ಕರ್ ಕಾಮತ್, ಸೋನಾ ಹೋಂಡಾ ಮೋಟಾರ್ನ ಇಕ್ಬಾಲ್ ಶೇಟ್, ರವಿಕುಮಾರ್, ಮಣಿ, ಹುಂಡೈ ಶ್ರೇಯ ರೆನಾಲ್ಟ್ನ ರಾಹುಲ್, ಸುಪ್ರೀಂ ಬಜಾಜ್‌ನ ಪ್ರಭಾಕರ್ ರಾವ್ ಆಮ್ಟೆ, ಝೂನ್ಸಿಕಿಯಾ ಮತ್ತಿತರರು ಉಪಸ್ಥಿತರಿದ್ದರು.