Advertisement
ಬೆಂಗಳೂರಿನ ಗೃಹಕಚೇರಿ ಕೃಷ್ಣಾದಿಂದ ವಚ್ಯುವಲ್ ಮೂಲಕ ತಾತ್ಕಾಲಿಕ ಆಸ್ಪತ್ರೆಯನ್ನು ಲೋಕಾರ್ಪಣೆಗೊಳಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಕೋವಿಡ್-19ರ ಎರಡನೇ ಅಲೆಯು ನಮ್ಮ ದೇಶ ಮತ್ತು ನಮ್ಮ ರಾಜ್ಯವನ್ನು ಅತ್ಯಂತ ತೀವ್ರವಾಗಿ ಬಾ ಧಿಸುತ್ತಿದೆ. ಸರ್ಕಾರ ಸೋಂಕಿನ ನಿಯಂತ್ರಣ ಹಾಗೂ ಸೋಂಕಿತರ ಚಿಕಿತ್ಸೆಗಾಗಿ ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಸರ್ಕಾರದ ಈ ಪ್ರಯತ್ನದಲ್ಲಿ ಜಿಂದಾಲ್ ಸಂಸ್ಥೆ ಸೇರಿದಂತೆ ಖಾಸಗಿ ಸಂಸ್ಥೆಗಳೂ ಕೈಜೋಡಿಸಿರುವುದು ಅತ್ಯಂತ ಶ್ಲಾಘನೀಯ ಎಂದರು.
Related Articles
Advertisement
ಪ್ರಸ್ತುತ ಇಲಾಖೆಯ ವ್ಯಾಪ್ತಿಯ ಆರೋಗ್ಯ ಸಂಸ್ಥೆಗಳಲ್ಲಿ 24 ಸಾವಿರ ಆಕ್ಸಿಜನೇಟೆಡ್ ಬೆಡ್‌ಗಳು, 1145 ಐಸಿಯು ಬೆಡ್‌ಗಳು, 2059 ವೆಂಟಿಲೇಟರ್ ಬೆಡ್‌ಗಳು ಹಾಗೂ 1248 ಎಚ್‌ಎಚ್‌ಎಫ್ ಎನ್‌ಸಿ ಸೌಲಭ್ಯಗಳು ಲಭ್ಯವಿದೆ. ವೈದ್ಯಕೀಯ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿ ಆಕ್ಸಿಜನೇಟೆಡ್ ಬೆಡ್ ಗಳ ಸಂಖ್ಯೆಯನ್ನು ದ್ವಿಗುಣಗೊಳಿಸಿ, 4700 ರಿಂದ 9405 ಕ್ಕೆ ಹೆಚ್ಚಿಸಲಾಗಿದೆ. ವೆಂಟೆಲೇಟೆಡ್ ಬೆಡ್‌ಗಳ ಸಂಖ್ಯೆಯನ್ನು 341ರಿಂದ 646ಕ್ಕೆ ಹೆಚ್ಚಿಸಲಾಗಿದೆ. ಎಚ್‌ಎಚ್‌ಎಫ್‌ಎನ್‌ಸಿಗಳ ಸಂಖ್ಯೆಯನ್ನು 15ರಿಂದ 570ಕ್ಕೆ ಹೆಚ್ಚಿಸಲಾಗಿದೆ ಎಂದರು.
ಆಸ್ಪತ್ರೆಗಳ ಮೂಲಸೌಕರ್ಯ ಬಲಪಡಿಸುವ ಪ್ರಕ್ರಿಯೆ ಇನ್ನೂ ಮುಂದುವರೆದಿದೆ. ಹೆಚ್ಚುವರಿ ವೆಂಟೆಲೇಟರುಗಳು ಮತ್ತಿತರ ಸೌಲಭ್ಯಗಳು ನಿರಂತರವಾಗಿ ಸೇರ್ಪಡೆಯಾಗುತ್ತಿವೆ. ಖಾಸಗಿ ಆಸ್ಪತ್ರೆಗಳಿಗೆ ಸುಮಾರು 200 ವೆಂಟಿಲೇಟರುಗಳನ್ನು ನೀಡಿದ್ದೇವೆ ಎಂದರು.
ಆಮ್ಲಜನಕ 1015 ಮೆಟ್ರಿಕ್ ಟನ್‌ಗೆ ಹೆಚ್ಚಳ: ಭಾರತ ಸರ್ಕಾರವು ರಾಜ್ಯಕ್ಕೆ ಆಮ್ಲಜನಕ ಹಂಚಿಕೆಯನ್ನು 965 ಮೆಟ್ರಿಕ್ ಟನ್‌ನಿಂದ 1015 ಮೆಟ್ರಿಕ್ ಟನ್ ಗೆ ಹೆಚ್ಚಿಸಿದೆ. ಇದರಲ್ಲಿ 765 ಮೆಟ್ರಿಕ್ ಟನ್ ಆಮ್ಲಜನಕವು ರಾಜ್ಯದಲ್ಲಿಯೇ ದೊರೆಯುತ್ತಿದೆ. 60 ಟನ್ ಪಿಎಸ್‌ಎ ಪ್ಲಾಂಟ್‌ಗಳಿಂದ ಹಾಗೂ 160 ಟನ್ ಒಡಿಶಾ ಹಾಗೂ 30 ಟನ್ ವಿಶಾಖಪಟ್ಟಣದಿಂದ ದೊರೆಯುತ್ತಿದೆ ಎಂದರು.
ಜಿಂದಾಲ್ ತಾತ್ಕಾಲಿಕ ಆಸ್ಪತ್ರೆ ಆವರಣದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಆನಂದ್‌ಸಿಂಗ್, ರಾಜ್ಯದಲ್ಲಿಯೇ ಅತಿದೊಡ್ಡ ಸುಸಜ್ಜಿತ ಸೌಕರ್ಯಗಳುಳ್ಳ 1 ಸಾವಿರ ಆಕ್ಸಿಜನ್ ಬೆಡ್‌ಗಳ ತಾತ್ಕಾಲಿಕ ಆಸ್ಪತ್ರೆ ಇದಾಗಿದೆ. ಜಿಂದಾಲ್ ಸಂಸ್ಥೆಯ ಮುಖ್ಯಸ್ಥ ಸಜ್ಜನ್ ಜಿಂದಾಲ್ ಅವರು ಈ ಕೊರೊನಾದಂತ ಸಂದಿಗ್ಧ ಸಮಯದಲ್ಲಿ ಜಿಲ್ಲೆಗೆ ಅಮೂಲ್ಯವಾದ ಕೊಡುಗೆಯನ್ನು ನೀಡಿದ್ದಾರೆ ಎಂದರು.
4.8 ಕಿ.ಮೀ ದೂರದಿಂದ ಆಕ್ಸಿಜನ್ ಅನ್ನು ಪೈಪ್ ಲೈನ್ ಮೂಲಕ ಈ ತಾತ್ಕಾಲಿಕ ಆಸ್ಪತ್ರೆಗೆ ತರಲಾಗಿದೆ. 2 ಸಾವಿರ ಮೆಗಾವ್ಯಾಟ್ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. 15 ದಿನಗಳ ಕಾಲ ಜಿಂದಾಲ್ ಹಾಗೂ ಜಿಲ್ಲಾಡಳಿತದ ನಿರಂತರ ಪರಿಶ್ರಮದ ಫಲವಾಗಿ ಈ ಆಸ್ಪತ್ರೆ ತಲೆಎತ್ತಿದೆ. ಕೊರೊನಾ ಸೋಂಕಿತರಾಗಿ ಚಿಕಿತ್ಸೆಗೆ ಈ ತಾತ್ಕಾಲಿಕ ಆಸ್ಪತ್ರೆಗೆ ಆಗಮಿಸುವವರು ಬೇಗ ಗುಣಮುಖರಾಗಿ ನಗುಮೊಗದಿಂದ ಮನೆಗೆ ತೆರಳಲಿ.
ಆದಷ್ಟು ಬೇಗ ಕೊರೊನಾ ನಿಯಂತ್ರಣಕ್ಕೆ ಬರಲಿ ಎಂದ ಸಚಿವ ಆನಂದ್‌ಸಿಂಗ್, ಜಿಲ್ಲೆ ಗೆದ್ದರೆ ದೇಶ ಗೆದ್ದಂತೆ ಎಂಬ ಪ್ರಧಾನಮಂತ್ರಿಗಳು ಹೇಳಿದಂತೆ ಅವರ ನುಡಿಗಳನ್ನು ಅಕ್ಷರಶಃ ಕಾರ್ಯಗತಗೊಳಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿದ್ದೇವೆ ಎಂದರು.
ಜಿಂದಾಲ್ ಸಂಸ್ಥೆಯ ಮುಖ್ಯಸ್ಥ ಸಜ್ಜನ್ ಜಿಂದಾಲ್, ಸಂಡೂರು ಶಾಸಕ ತುಕಾರಾಂ ಮಾತನಾಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಧಿಕಾರಿ ಪವನಕುಮಾರ ಮಾಲಪಾಟಿ, ಜಿಪಂ ಸಿಇಒ ಕೆ.ಆರ್. ನಂದಿನಿ, ಎಸ್ಪಿ ಸೈದುಲು ಅಡಾವತ್, ಎಡಿಸಿ ಮಂಜುನಾಥ್, ಜಿಂದಾಲ್‌ನ ವಿನೋದ ನೋವೆಲ್, ಮಂಜುನಾಥ ಪ್ರಭು ಮತ್ತಿತರರು ಇದ್ದರು.