Advertisement
ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಅವರನ್ನೇ ಗುರಿಯನ್ನಾಗಿಸಿಕೊಂಡು ತಮ್ಮ ಹುಳುಕು ಮುಚ್ಚಿಕೊಳ್ಳುತ್ತಿದ್ದಾರೆ. ಇನ್ನು ಮುಂದಾದರೂ ಕಾಂಗ್ರೆಸ್ ಬಗ್ಗೆ ಬಾಯಿಗೆ ಬಂದಂತೆ ಮಾತನಾಡುವುದನ್ನು ನಿಲ್ಲಿಸಬೇಕು ಎಂದರು. ದೇಶದಲ್ಲಿ ಕೊರೊನಾ ಎರಡನೇ ಅಲೆ ಹೆಚ್ಚಾಗುತ್ತಿದ್ದರೂ ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೇಲೆ ಒತ್ತಡ ಹೇರಿ 5 ರಾಜ್ಯಗಳಲ್ಲಿ ಚುನಾವಣೆ ನಡೆಸಿತು. ರಾಜ್ಯದಲ್ಲಿಯೂ ಕೂಡ ಉಪ ಚುನಾವಣೆ ನಡೆಸಲಾಯಿತು. ಹೀಗೆ ಚುನಾವಣೆ ಮೇಲೆ ಚುನಾವಣೆ ಮಾಡಿ, ಕೊರೊನಾ ಸೋಂಕು ಹೆಚ್ಚಾಗಲು ಕಾರಣವಾಗಿದ್ದು ಬಿಜೆಪಿ ಸರ್ಕಾರ. ಜೊತೆಗೆ ಕರ್ನಾಟಕದಲ್ಲಿ ಕರ್ಫ್ಯೂ ಘೋಷಿಸುವ ಮುನ್ನ ಬೆಂಗಳೂರಿಂದ ಸುಮಾರು 12 ಸಾವಿರ ಬಸ್‌ಗಳನ್ನು ಗ್ರಾಮೀಣ ಪ್ರದೇಶಗಳಿಗೆ ಬಿಟ್ಟು ಸೋಂಕು ಹರಡಲು ನೇರ ಕಾರಣವಾಗಿದೆ.
Related Articles
Advertisement
ಕೊರೊನಾ ನಿಯಂತ್ರಿಸಲು ಸರ್ಕಾರ ವಿಫಲವಾಗಿದೆ. ಸರ್ಕಾರ ದಿವಾಳಿಯಾಗಿದೆ. ಯಾವುದೇ ಆಸ್ಪತ್ರೆಗಳಿಗೆ ಹೋದರೂ ಆಮ್ಲಜನಕ, ವೆಂಟಿಲೇಟರ್, ಬೆಡ್‌ಗಳು ಇಲ್ಲ. ಇದರ ನಡುವೆ ಶಿಲೀಂದ್ರ ರೋಗ (ಬ್ಲಾಕ್ ಫಂಗಸ್) ಕೂಡ ತಡೆಯುವಲ್ಲಿ ಸರ್ಕಾರ ವಿಫಲವಾಗಿದೆ ಎಂದರು.
ಕೊರೊನಾ ತಡೆಯಲು ಸರ್ಕಾರ ಕೋಟ್ಯಂತರ ರೂ. ಖರ್ಚು ಮಾಡಿದೆ ಎಂದು ಹೇಳುತ್ತಿದೆ. ಆದರೆ, ಆ ಹಣ ಎಲ್ಲಿ ಹೋಗಿದೆ? ಲಸಿಕೆ, ಆಮ್ಲಜನಕ, ವೆಂಟಿಲೇಟರ್, ಔಷಧಗಳ ಖರೀದಿ, ಮಾಸ್ಕ್ ಖರೀದಿ ಎಲ್ಲವುದರಲ್ಲೂ ಭ್ರಷ್ಟಾಚಾರ ನಡೆದಿದ್ದು ತನಿಖೆಯಾಗಬೇಕು ಎಂದು ಆಗ್ರಹಿಸಿದರು. ಚಾಮರಾಜನಗರದಲ್ಲಿ ಆಕ್ಸಿಜನ್ ಇಲ್ಲದೇ ಮೃತಪಟ್ಟ 24 ಜನರಿಗೆ ಕೇವಲ 2 ಲಕ್ಷ ರೂ. ಪರಿಹಾರ ನೀಡಲಾಗಿದೆ. ಇದು ಯಾವುದಕ್ಕೂ ಸಾಲದು, ಕನಿಷ್ಠ 10 ಲಕ್ಷ ರೂ. ಪರಿಹಾರ ನೀಡಬೇಕು. ಇದಲ್ಲದೆ ಕೊರೊನಾದಿಂದ ಮೃತಪಟ್ಟ ಎಲ್ಲಾ ಕುಟುಂಬಗಳಿಗೂ ತಲಾ 10 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.
ಎರಡನೇ ಅಲೆಯನ್ನೇ ಸಮರ್ಪಕವಾಗಿ ನಿರ್ವಹಿಸದ ಸರ್ಕಾರ ಕೊರೊನಾ ಮೂರನೇ ಅಲೆ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಹಸಿ ಸುಳ್ಳು ಹೇಳುತ್ತಿದೆ. ಹೀಗೆ ಸುಳ್ಳು ಮಾಹಿತಿ ನೀಡುತ್ತಾ ಜನರ ದಿಕ್ಕು ತಪ್ಪಿಸಲಾಗುತ್ತಿದೆ. ಕಾಯಿಲೆಗಿಂತ ಇವರಿಗೆ ಪ್ರತಿಷ್ಠೆ ಪಕ್ಷದ ಬೆಳವಣಿಗೆ ಮುಖ್ಯವಾಗಿದೆ. ಇನ್ನಾದರೂ ಬಾಯಿಗೆ ಬಂದಂತೆ ಮಾತನಾಡುವುದನ್ನು ಬಿಟ್ಟು ಕೊರೊನಾ ನಿಯಂತ್ರಿಸಲು ಗಮನಹರಿಸಬೇಕು. ಇಲ್ಲದಿದ್ದರೆ ಕಾಂಗ್ರೆಸ್ ಹೋರಾಟ ಆರಂಭಿಸಬೇಕಾದೀತು ಎಂದು ಎಚ್ಚರಿಸಿದರು.
ಗೋಷ್ಠಿಯಲ್ಲಿ ಪ್ರಮುಖರಾದ ಎಚ್.ಸಿ.ಯೋಗೀಶ್, ನಾಗರಾಜ್, ಎಂ.ಚಂದನ್, ಎಚ್.ಪಿ. ಗಿರೀಶ್, ಯು. ಶಿವಾನಂದ್, ನಟರಾಜ್, ಚಂದ್ರಶೇಖರ್, ಪ್ರಮೋದ್, ಪ್ರಭಾಕರ್, ಮೂರ್ತಿ ಮುಂತಾದವರಿದ್ದರು.