Advertisement

ಸೋಂಕು ನಿಯಂತ್ರಣಕ್ಕೆ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರು ಸಹಕರಿಸಿ

09:43 PM May 30, 2021 | Shreeraj Acharya |

ಶಿವಮೊಗ್ಗ: ಜಿಲ್ಲೆಯಲ್ಲಿ ಕೊರೊನಾ ಸೋಂಕು ನಿಯಂತ್ರಿಸುವಲ್ಲಿ ಸರ್ಕಾರದ ಆದೇಶದಂತೆ ಜಿಲ್ಲಾಡಳಿತ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಂಡಿದ್ದು ಜಿಲ್ಲೆಯ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರು ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ರಾಜೇಶ್‌ ಸುರಗೀಹಳ್ಳಿ ಹೇಳಿದರು. ಶನಿವಾರ ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ನಗರದ ಖಾಸಗಿ ವೈದ್ಯರು ಹಾಗೂ ಆಸ್ಪತ್ರೆಗಳ ಆಡಳಿತ ಸಂಸ್ಥೆಯ ಮುಖ್ಯಸ್ಥರೊಂದಿಗೆ ಕೊರೊನಾ ನಿಯಂತ್ರಣದಲ್ಲಿ ಕೈಗೊಳ್ಳಬಹುದಾದ ಜನಸ್ನೇಹಿ ಕ್ರಮಗಳ ಕುರಿತು ಸಮಾಲೋಚನೆ ನಡೆಸಿ ಅವರು ಮಾತನಾಡಿದರು.

Advertisement

ನಗರದ ಪ್ರತಿಷ್ಠಿತ ಆಸ್ಪತ್ರೆಗಳಲ್ಲಿಯೂ ಬೆಡ್‌ ಬ್ಲಾಕ್‌ ಮಾಡುತ್ತಿರುವ ಕುರಿತು ಸಾರ್ವಜನಿಕರಿಂದ ದೂರುಗಳು ಬರುತ್ತಿವೆ. ಜಿಲ್ಲಾಡಳಿತ ಇದನ್ನು ಗಂಭೀರವಾಗಿ ಪರಿಗಣಿಸಿದೆ. ತ್ರಯಾಜ್‌ ಕೇಂದ್ರದಲ್ಲಿ ವೈದ್ಯರ ಸಲಹೆ ಪಡೆದು ಹೊರಬರುವ ಸೋಂಕಿತರಿಗೆ ಅವರು ಬಯಸುವ ಆಸ್ಪತ್ರೆಗಳಲ್ಲಿ ಶೇ. 50ರಷ್ಟು ಹಾಸಿಗೆಗಳನ್ನು ಕಾಯ್ದಿರಿಸುವಂತೆ ಸೂಚಿಸಿದ ಅವರು, ಇದರ ವ್ಯವಸ್ಥಿತ ನಿರ್ವಹಣೆಗಾಗಿ ಮೆಗ್ಗಾನ್‌ ಅ ಧೀಕ್ಷಕ ಡಾ| ಶ್ರೀಧರ್‌ ಮತ್ತು ಡಾ| ಮಂಜುನಾಥ ನಾಗಲೀಕರ್‌ ಅವರನ್ನು ನಿಯೋಜಿಸಲಾಗಿದೆ ಎಂದರು. ಕೆಲವು ಸಂದರ್ಭಗಳಲ್ಲಿ ಜಿಲ್ಲಾ  ಧಿಕಾರಿಗಳು ಸೇರಿದಂತೆ ಆರೋಗ್ಯ ಇಲಾಖೆ ಅ ಧಿಕಾರಿಗಳು ಚಿಕಿತ್ಸಾಲಯಕ್ಕೆ ಭೇಟಿ ನೀಡಿ, ರೋಗಿಗಳ ದಾಖಲಾತಿ, ಅಲ್ಲಿನ ವ್ಯವಸ್ಥೆ ಮುಂತಾದ ವಿಷಯಗಳ ಕುರಿತು ವಾಸ್ತವ ಪರಿಶೀಲಿಸಿ ಕ್ರಮ ವಹಿಸುವರು.

ಜಿಲ್ಲಾಡಳಿತಕ್ಕೆ ತಪ್ಪು ಮಾಹಿತಿ ನೀಡಿದಲ್ಲಿ ಅಂತಹ ಆಸ್ಪತ್ರೆಯ ಆಡಳಿತಾಧಿ ಕಾರಿಗಳ ವಿರುದ್ಧ ಕ್ರಮ ಅನಿವಾರ್ಯವಾಗಲಿದೆ ಎಂದರು. ಹೆಚ್ಚಿನ ಚಿಕಿತ್ಸೆಗಾಗಿ ದೂರದ ಹೊರ ಊರುಗಳಿಗೆ ಶಿಫಾರಸ್ಸು ಮಾಡುವಾಗ ಜಿಲ್ಲಾ ಆರೋಗ್ಯಾಧಿಕಾರಿಗಳ ಗಮನಕ್ಕೆ ತರಬೇಕು. ರೋಗಿಯು ಪ್ರಯಾಣ ಆರಂಭಿಸುವ ಪೂರ್ವದಲ್ಲಿ ರೋಗಿಯ ಆರೋಗ್ಯ ಸ್ಥಿರತೆ ಹಾಗೂ ಆತನ ದೈಹಿಕ ಕ್ಷಮತೆ ಬಗ್ಗೆ ಸರಿಯಾದ ಮಾಹಿತಿ ಇರಬೇಕು. ಒಂದು ವೇಳೆ ಪ್ರಯಾಣದ ನಡುವೆ ರೋಗಿಯ ಆರೋಗ್ಯದಲ್ಲಿ ಏರುಪೇರಾದಲ್ಲಿ ಮುಂದಿನ ಆಗುಹೋಗುಗಳಿಗೆ ತಮ್ಮನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದರು.

ಆರೋಗ್ಯ ಇಲಾಖೆಗೆ ನೀಡಿದ ಮಾಹಿತಿಯಂತೆ ಆಸ್ಪತ್ರೆಗಳಲ್ಲಿ ಕಲ್ಪಿಸಲಾಗಿರುವ ಹಾಸಿಗೆಗಳ ಬಗ್ಗೆ ಸೂಕ್ತ ಮಾಹಿತಿ ನೀಡಬೇಕು. ಸಾಮರ್ಥ್ಯಕ್ಕಿಂತ ಹೆಚ್ಚಿನ ಹಾಸಿಗೆಗಳನ್ನು ಕಲ್ಪಿಸಿದಲ್ಲಿ ಆರೋಗ್ಯ ಇಲಾಖೆಗೆ ಸೂಕ್ತ ಮಾಹಿತಿ ನೀಡಬೇಕು. ತಪ್ಪು ಮಾಹಿತಿ ನೀಡಿ ಸಾಮರ್ಥ್ಯಕ್ಕಿಂತ ಹೆಚ್ಚಿನ ಹಾಸಿಗೆಗಳನ್ನು ಕಲ್ಪಿಸಿಕೊಂಡು ಸೋಂಕಿತರಿಗೆ ಚಿಕಿತ್ಸೆ ನೀಡುವಲ್ಲಿ ಅಡಚಣೆ ಅಥವಾ ವ್ಯತ್ಯಯಗಳುಂಟಾದಲ್ಲಿ ಆಸ್ಪತ್ರೆಯ ವಿರುದ್ಧ ನಿಯಮಾನುಸಾರ ಕ್ರಮ ಅನಿವಾರ್ಯವಾಗಲಿದೆ ಎಂದ ಅವರು, ನಿಯಮ ಉಲ್ಲಂಘಿಸಿದ ನಗರದ ಎರಡು ಪ್ರತಿಷ್ಠಿತ ಆಸ್ಪತ್ರೆಗಳಿಗೆ ನೊಟೀಸ್‌ ನೀಡುವಂತೆ ಇಲಾಖೆಯ ಅಧಿ ಕಾರಿಗಳಿಗೆ ಸೂಚಿಸಿದರು. ಸಭೆಯಲ್ಲಿ ಜಿಲ್ಲಾ ಮೆಗ್ಗಾನ್‌ ಆಸ್ಪತ್ರೆಯ ಅ ಧೀಕ್ಷಕ ಡಾ| ಶ್ರೀಧರ್‌, ಡಾ| ಮಂಜುನಾಥ್‌ ನಾಗಲೀಕರ್‌ ಸೇರಿದಂತೆ ಸ್ಥಳೀಯ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರು, ವೈದ್ಯಾಧಿಕಾರಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next