ಶಿವಮೊಗ್ಗ: ಶಿವಮೊಗ್ಗ ವೈದ್ಯಕೀಯ ಸಂಸ್ಥೆಯಲ್ಲಿ ಹಾಸಿಗೆ ವ್ಯವಸ್ಥೆ ಉನ್ನತೀಕರಣ ಸೇರಿದಂತೆ ಎಲ್ಲಾ ಮೂಲ ಸೌಕರ್ಯಗಳನ್ನು ಹಂತ-ಹಂತವಾಗಿ ಮೇಲ್ದರ್ಜೆಗೇರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದರು.
ಸೋಮವಾರ ಶಿವಮೊಗ್ಗ ವೈದ್ಯಕೀಯ ಸಂಸ್ಥೆಯಲ್ಲಿ ಜನಪ್ರತಿನಿಧಿ ಗಳ ಹಾಗೂ ಹಿರಿಯ ಅಧಿ ಕಾರಿಗಳ ಸಭೆಯಲ್ಲಿ ಕೋವಿಡ್ ನಿರ್ವಹಣೆಗೆ ಕೈಗೊಳ್ಳಲಾಗಿರುವ ಕ್ರಮಗಳ ಪರಿಶೀಲನೆ ನಡೆಸಿ ಅವರು ಮಾತನಾಡಿದರು. ಮೆಗ್ಗಾನ್ ಆಸ್ಪತ್ರೆಯಲ್ಲಿ ಪ್ರಸ್ತುತ ಕೊರೊನಾ ಸೋಂಕಿತರ ಚಿಕಿತ್ಸೆಗೆ 650 ಹಾಸಿಗೆ ವ್ಯವಸ್ಥೆಯಿದೆ.
ಅದನ್ನು ಹಂತ- ಹಂತವಾಗಿ 1400 ಕ್ಕೆ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು. ಪ್ರಸ್ತುತ 70 ವೆಂಟಿಲೇಟರ್‌ಗಳಿದ್ದು, ವಾರದೊಳಗೆ ಇನ್ನೂ 23 ವೆಂಟಿಲೇಟರ್ ಸಿಗಲಿದೆ. ಇದರ ನಿರ್ವಹಣೆಗೆ ಹೆಚ್ಚುವರಿಯಾಗಿ ಅಗತ್ಯವಿರುವ 10 μಜಿಶಿಯನ್‌ಗಳು ಮತ್ತು 8 ಅರವಳಿಕೆ ತಜ್ಞರನ್ನು ನೇಮಕ ಮಾಡಿಕೊಳ್ಳಲು ಕ್ರಮ ಕೈಗೊಳ್ಳಬೇಕು ಎಂದರು. ಸಿಮ್ಸ್ ನಿರ್ದೇಶಕ ಡಾ| ಸಿದ್ದಪ್ಪ ಅವರು ಸಂಸ್ಥೆಯಲ್ಲಿ ಲಭ್ಯವಿರುವ ಸೌಲಭ್ಯಗಳ ಮಾಹಿತಿ ಒದಗಿಸಿದರು.
ಮೆಗ್ಗಾನ್‌ನಲ್ಲಿ ಒಟ್ಟು 1443 ಹಾಸಿಗೆ ವ್ಯವಸ್ಥೆಯಿದ್ದು, ಇದರಲ್ಲಿ 1095 ಆಕ್ಸಿಜನ್ ಬೆಡ್‌ಗಳು ಹಾಗೂ 202 ಐಸಿಯು ಬೆಡ್‌ಗಳಿವೆ. 16 μಜಿಷಿಯನ್, 15 ಅರವಳಿಕೆ ತಜ್ಞರು, 4 ಪಲ್ಮನಾಲಿಜಿಸ್ಟ್, 4 ರೇಡಿಯಾಲಜಿಸ್ಟ್, 15 ಕೋವಿಡ್ ಡ್ನೂಟಿ ಡಾಕ್ಟರ್ ಮತ್ತು 11 ಗೃಹ ವೈದ್ಯರಿದ್ದಾರೆ. 334 ನಸಿಂಗ್ ಅ ಧಿಕಾರಿಗಳಿದ್ದಾರೆ ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿ ಕಾರಿ ಡಾ| ರಾಜೇಶ ಸುರಗಿಹಳ್ಳಿ ಮಾತನಾಡಿ, ಖಾಸಗಿ ಆಸ್ಪತ್ರೆಗಳಲ್ಲಿ ನಿಗದಿ ಪಡಿಸಲಾಗಿರುವ ಸರ್ಕಾರಿ ಕೋಟಾದ ಹಾಸಿಗೆ ಮತ್ತು ವೆಂಟಿಲೇಟರ್‌ಗಳ ಸೌಲಭ್ಯ ಪಡೆದುಕೊಳ್ಳಲಾಗುತ್ತಿದೆ. ಖಾಸಗಿ ಆಸ್ಪತ್ರೆಗಳ 10 ವೆಂಟಿಲೇಟರ್‌ಗಳನ್ನು ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ಒದಗಿಸಲಾಗಿದೆ. ಲಸಿಕೆ ನೀಡುವ ಕಾರ್ಯಕ್ರಮ ನಿಗದಿತ ಮಾರ್ಗಸೂಚಿಯಂತೆ ಕೈಗೊಳ್ಳಲಾಗುತ್ತಿದೆ ಎಂದರು.
ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ, ಜಿಲ್ಲಾ ಧಿಕಾರಿ ಕೆ.ಬಿ. ಶಿವಕುಮಾರ್, ಜಿಪಂ ಮುಖ್ಯ ಕಾರ್ಯನಿರ್ವಹಣಾ ಧಿಕಾರಿ ಎಂ.ಎಲ್. ವೈಶಾಲಿ, ಪೊಲೀಸ್ ವರಿಷ್ಠಾಧಿಕಾರಿ ಲಕೀÒ$¾ ಪ್ರಸಾದ್, ದತ್ತಾತ್ರೇಯ, ಡಿ.ಎಸ್. ಅರುಣ್, ಸಿಮ್ಸ್ ಆಡಳಿತ ಮಂಡಳಿ ಸದಸ್ಯರಾದ ದಿವಾಕರ್ ಶೆಟ್ಟಿ ಇದ್ದರು.