Advertisement
ಮಂಗಳವಾರ ಜಿಲ್ಲಾ ಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜೋಗ ಜಲಪಾತದ ಅಭಿವೃದ್ಧಿ ಹಾಗೂ ನಗರದ ಸಹ್ಯಾದ್ರಿ ಕಾಲೇಜಿನ ಆವರಣದಲ್ಲಿ ಅಂದಾಜು 65 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಅಂತಾರಾಷ್ಟ್ರೀಯ ಸ್ಥರದ ನೂತನ ಒಳಾಂಗಣ ಮತ್ತು ಹೊರಾಂಗಣ ಕ್ರೀಡಾಂಗಣ ನಿರ್ಮಾಣಕ್ಕೆ ಸಂಬಂಧಿ ಸಿದಂತೆ ಗ್ರಾಮೀಣಾಭಿವೃದ್ಧಿ, ಪಂಚಾಯತ್‌ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಏರ್ಪಡಿಸಲಾಗಿದ್ದ ಸಮಾಲೋಚನಾ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
Related Articles
Advertisement
ಅಂತಾರಾಷ್ಟ್ರೀಯ ಕ್ರೀಡಾಂಗಣ: ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಮಾತನಾಡಿ, ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನ ಆವರಣದಲ್ಲಿ ಅಂದಾಜು 65 ಕೋಟಿ ರೂ. ವೆಚ್ಚದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅನುದಾನದೊಂದಿಗೆ ಸುವ್ಯವಸ್ಥಿತವಾದ ಅಂತಾರಾಷ್ಟ್ರೀಯ ಮಾದರಿಯ ಒಳಾಂಗಣ ಮತ್ತು ಹೊರಾಂಗಣ ಕ್ರೀಡಾಂಗಣ ನಿರ್ಮಿಸಲು ಉದ್ದೇಶಿಸಲಾಗಿದೆ. ಈ ಕ್ರೀಡಾಂಗಣದ ಮಾಲೀಕತ್ವ ಕುವೆಂಪು ವಿಶ್ವವಿದ್ಯಾನಿಲಯದ್ದಾಗಿದ್ದು, ಅವರ ವ್ಯವಸ್ಥಿತ ನಿರ್ವಹಣೆಗೆ ರಾಜ್ಯ ಸರ್ಕಾರ ಅನುದಾನ ಬಿಡುಗಡೆ ಮಾಡುವಂತೆ ಪ್ರಸ್ತಾವನೆ ಸಲ್ಲಿಸಲಾಗುವುದು.
ಅಲ್ಲದೆ ಪ್ರಸ್ತುತ ಸಹ್ಯಾದ್ರಿ ಕಾಲೇಜಿನ ವಾಣಿಜ್ಯ ವಿಭಾಗದ ಚಟುವಟಿಕೆಗಳಿಗೆ ಯಾವುದೇ ಅಡಚಣೆಯಾಗದಂತೆ ಹಾಗೂ ವಸತಿ ನಿಲಯಕ್ಕೆ ಪೂರಕವಾಗಿ ಇನ್ನಷ್ಟು ಅಗತ್ಯ ಕಟ್ಟಡ ಮತ್ತು ಮೂಲ ಸೌಕರ್ಯಗಳನ್ನು ಒದಗಿಸಲು ಕ್ರಮ ವಹಿಸಲಾಗುವುದು. ಈ ಸಂಬಂಧ ಕ್ರಿಯಾ ಯೋಜನೆ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸುವಂತೆ ಸಚಿವರು ಕಾಲೇಜಿನ ಪ್ರಾಂಶುಪಾಲರಿಗೆ ಸೂಚಿಸಿದರು. ಈ ಕ್ರೀಡಾಂಗಣವು ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ಅಧ್ಯಯನ ಮಾಡುತ್ತಿರುವ ಹಾಗೂ ಪ್ರತಿಭಾವಂತ ಕ್ರೀಡಾಪಟುಗಳ ಕ್ರೀಡಾ ಚಟುವಟಿಕೆಗಳಿಗೆ ಅನುಕೂಲವಾಗಲಿದೆ. ಅಲ್ಲದೆ ಅಂತಾರಾಷ್ಟ್ರೀಯ ತರಬೇತಿ ಕಾರ್ಯಾಗಾರಗಳು ನಡೆಯಲಿವೆ ಎಂದರು. ಲಾಕ್‌ಡೌನ್ ಅನ್ನು ಕಠಿಣವಾಗಿ ಜಾರಿಗೊಳಿಸಿದ ನಂತರ ಜಿಲ್ಲೆಯ ನಗರ, ಪಟ್ಟಣ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸಾರ್ವಜನಿಕರ ಸಂಚಾರ ಶೇ.95ಕ್ಕೆ ಕುಸಿದಿದೆ.
ಅಲ್ಲದೆ ರೋಗಿಗಳ ಸಂಖ್ಯೆಯಲ್ಲೂ ಗಣನೀಯ ಸುಧಾರಣೆ ಕಂಡು ಬರುತ್ತಿದೆ ಎಂದ ಅವರು, ಮುಂದಿನ ಕೆಲವು ದಿನಗಳ ಕಾಲ ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಹಾಗೂ ಅನಗತ್ಯವಾಗಿ ಮನೆಯಿಂದ ಹೊರಗೆ ಹೋಗದಂತೆ ಮನವಿ ಮಾಡಿದರು. ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ರುದ್ರೇಗೌಡ, ಜಿಲ್ಲಾ ಧಿಕಾರಿ ಕೆ.ಬಿ. ಶಿವಕುಮಾರ್, ಕುವೆಂಪು ವಿವಿ ಕುಲಪತಿ ಪ್ರೊ| ವೀರಭದ್ರಪ್ಪ, ಮೇಯರ್ ಸುನಿತಾಅಣ್ಣಪ್ಪ, ಸೂಡಾ ಅಧ್ಯಕ್ಷ ಜ್ಯೋತಿಪ್ರಕಾಶ್, ಜಿಪಂ ಮುಖ್ಯ ಕಾರ್ಯ ನಿರ್ವಾಹಕ ಅ ಧಿಕಾರಿ ಎಂ.ಎಲ್. ವೈಶಾಲಿ, ಅಪರ ಜಿಲ್ಲಾ ಧಿಕಾರಿ ಜಿ.ಅನುರಾಧಾ, ಭೂಮಿಪುತ್ರ ಕನ್ಸಲ್ ಟೆನ್ಸಿಯ ವ್ಯವಸ್ಥಾಪಕ ಅಲೋಕ್ ಶೆಟ್ಟಿ ಸೇರಿದಂತೆ ಕುವೆಂಪು ವಿವಿಯ ಸಿಂಡಿಕೇಟ್ ಸದಸ್ಯರು, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ್ ಮುಂತಾದವರು ಇದ್ದರು.
ಇದೇ ಸಂದರ್ಭದಲ್ಲಿ ಆಯುಷ್ ಇಲಾಖೆಯು ಕೊರೊನಾ ಸೋಂಕಿನಿಂದ ಗುಣಮುಖರಾದವರಿಗೆ ದೈಹಿಕ ಕ್ಷಮತೆ ಹೆಚ್ಚಿಸಿಕೊಳ್ಳಲು ಸಾರ್ವಜನಿಕ ವಿತರಣೆಗೆ ಬಿಡುಗಡೆ ಮಾಡಿರುವ ಆಯುರ್ವೆàದ ಔಷಧದ ಕಿಟ್‌ನ್ನು ಸಚಿವ ಕೆ.ಎಸ್. ಈಶ್ವರಪ್ಪ, ಸಂಸದ ಬಿ.ವೈ. ರಾಘವೇಂದ್ರ, ಜಿಲ್ಲಾ ಧಿಕಾರಿ ಕೆ.ಬಿ. ಶಿವಕುಮಾರ್ ಬಿಡುಗಡೆಗೊಳಿಸಿದರು.