Advertisement

ಸಿಎಂ ನಿಧಿಗೆ ಡಿಸಿಸಿಬಿಯಿಂದ 50 ಲಕ್ಷ ರೂ. ದೇಣಿಗೆ

09:54 PM Jun 06, 2021 | Shreeraj Acharya |

ಶಿವಮೊಗ್ಗ: ಕೊರೊನಾ 2ನೇ ಅಲೆಯು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸೋಂಕಿಗೆ ಒಳಗಾದ ರಾಜ್ಯದ ನಾಗರಿಕರಿಗೆ ಪರಿಹಾರ ಕಲ್ಪಿಸುವ ಸಲುವಾಗಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ ವತಿಯಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿ ಗೆ 50 ಲಕ್ಷ ರೂ. ದೇಣಿಗೆ ನೀಡಲಾಗಿದೆ ಎಂದು ಬ್ಯಾಂಕ್‌ ಅಧ್ಯಕ್ಷ ಎಂ.ಬಿ. ಚನ್ನವೀರಪ್ಪ ತಿಳಿಸಿದರು.

Advertisement

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಹಕಾರ ಕೇಂದ್ರ ಬ್ಯಾಂಕ್‌ ಜಿಲ್ಲೆಯ ಎಲ್ಲಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು, ಪಟ್ಟಣ ಸಹಕಾರ ಬ್ಯಾಂಕ್‌ಗಳು ಹಾಗೂ ವ್ಯವಸಾಯೇತರ ಪತ್ತಿನ ಸಹಕಾರ ಸಂಘಗಳು, ಇತರೆ ಕೃಷಿ ಉತ್ಪನ್ನ ಮಾರಾಟ ಮತ್ತು ಸಂಸ್ಕರಣಾ ಸಹಕಾರ ಸಂಘಗಳು ಹಾಗೂ ಬ್ಯಾಂಕಿನ ನೌಕರರಿಂದ 50 ಲಕ್ಷ ರೂ. ಸಂಗ್ರಹಣೆ ಮಾಡಿ ಮುಖ್ಯಮಂತ್ರಿಗಳ ಪರಿಹಾರ ನಿ ಧಿಗೆ ನೀಡಲಾಗುತ್ತಿದೆ ಎಂದರು.

ನೀಡಿರುವ ದೇಣಿಗೆಯನ್ನು ಜಿಲ್ಲಾ ವ್ಯಾಪ್ತಿಯಲ್ಲಿ ಸಂಕಷ್ಟಕ್ಕೀಡಾಗಿರುವ ನಾಗರಿಕರ ಅನುಕೂಲಕ್ಕೆ ವಿನಿಯೋಗಿಸುವಂತೆ ಜಿಲ್ಲೆಯ ಎಲ್ಲಾ ಸಹಕಾರಿ ಸಂಸ್ಥೆಗಳ ಪರವಾಗಿ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿಕೊಳ್ಳಲಾಗುತ್ತದೆ ಎಂದರು.

ಕೊರೋನಾ ಸಂಕಷ್ಟದ ಸಂದರ್ಭದಲ್ಲಿಯೂ ಸಹಾ ಗ್ರಾಮೀಣ ಭಾಗದ ರೈತರಿಗೆ, ಹಿಂದುಳಿದ ವರ್ಗ ಹಾಗೂ ಮಹಿಳೆಯರಿಗೆ ಬ್ಯಾಂಕಿನಿಂದ ಒಟ್ಟು 65156 ಸದಸ್ಯರಿಗೆ 656.20 ಕೋಟಿ ರೂ. ಅಲ್ಪಾವ ಧಿ ಕೃಷಿ ಬೆಳೆ ಸಾಲ ಒದಗಿಸಲಾಗಿದೆ. ವಿಶೇಷವಾಗಿ ಹೊಸ 5002 ರೈತ ಸದಸ್ಯರಿಗೆ 50.12ಕೋಟಿ ರೂ. ಅಲ್ಪಾವ ಧಿ ಕೃಷಿ ಬೆಳೆ ಸಾಲ ವಿತರಣೆ ಮಾಡಲಾಗಿದೆ ಎಂದರು.

ಆರ್ಥಿಕವಾಗಿ ಹಿಂದುಳಿದ ಗ್ರಾಮೀಣ ಭಾಗದ ಮಹಿಳೆಯರಿಗೆ ಪ್ರಸಕ್ತ ಸಾಲಿನಲ್ಲಿ ಒಟ್ಟು 870 ಸ್ವ ಸಹಾಯ ಗುಂಪುಗಳಿಗೆ 31.88 ಕೋಟಿ ರೂ. ಸಾಲ ನೀಡಲಾಗಿದೆ ಹಾಗೂ ಸರ್ಕಾರದ ಕಾಯಕ ಯೋಜನೆಯಡಿ 10 ಲಕ್ಷ ರೂ. ವರೆಗೆ ಸಾಲ ನೀಡುತ್ತಿದ್ದು, 44 ಗುಂಪುಗಳಿಗೆ 3.21ಕೋಟಿ ರೂ. ಸಾಲ ನೀಡಲಾಗಿದೆ ಎಂದರು.

Advertisement

ಕೇಂದ್ರ ಸರ್ಕಾರದ ಯೋಜನೆಯಡಿ ಹಾಲು ಉತ್ಪಾದಕರ ಸಹಕಾರ ಸಂಘದ ಸದಸ್ಯರಿಗೆ ಶೂನ್ಯ ಬಡ್ಡಿ ದರದಲ್ಲಿ ಹೈನುಗಾರಿಕೆ ಉದ್ದೇಶಕ್ಕಾಗಿ 678 ಸದಸ್ಯರಿಗೆ 1.10 ಕೋಟಿ ರೂ. ಕೆಸಿಸಿ ಸಾಲ ನೀಡಲಾಗಿದೆ. ಜಿಲ್ಲೆಯ ನಾಗರಿಕರು ಕೊರೊನಾ 2ನೇ ಅಲೆಯಿಂದ ಸಂಕಷ್ಟದಲ್ಲಿರುವ ಕಾರಣ ಬ್ಯಾಂಕಿನಿಂದ ನೀಡಲಾಗುತ್ತಿರುವ ಕೃಷಿಯೇತರ ಸಾಲಗಳ ಬಡ್ಡಿ ದರದಲ್ಲಿ ಕಡಿತಗೊಳಿಸಲಾಗಿದೆ. ಸದರಿ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಮನವಿ ಮಾಡಿಕೊಂಡರು. ಡಿಸಿಸಿ ಬ್ಯಾಂಕ್‌ನ ಎಲ್ಲಾ ನೌಕರರಿಗೆ ಮತ್ತು ಇತರೆ ಆದ್ಯತಾ ವಲಯದ ನೌಕರರಿಗೆ ಬ್ಯಾಂಕಿನ ಪ್ರಧಾನ ಕಚೇರಿಯಲ್ಲಿಯೇ ಕಳೆದ ಗುರುವಾರ ವ್ಯಾಕ್ಸಿನ್‌ ಕೊಡಿಸಲಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಬ್ಯಾಂಕ್‌ನ ಉಪಾಧ್ಯಕ್ಷ ಎಚ್‌.ಎಲ್‌.ಷಡಾಕ್ಷರಿ, ನಿರ್ದೇಶಕರಾದ ಎಸ್‌.ಪಿ. ದಿನೇಶ್‌, ಬಿ.ಡಿ.ಭೂಕಾಂತ್‌, ಜಿ.ಎನ್‌. ಸು ಧೀರ್‌, ಎಂ.ಎಂ.ಪರಮೇಶ್‌, ಅಪೆಕ್ಸ್‌ ಬ್ಯಾಂಕ್‌ನ ಪ್ರತಿನಿಧಿ  ಶ್ರೀಧರ್‌ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next