Advertisement

ಇಂಧನ ಬೆಲೆ ಹೆಚ್ಚಳ ಖಂಡಿಸಿ ಪ್ರತಿಭಟನೆ

10:03 PM Jun 06, 2021 | Team Udayavani |

ಶಿವಮೊಗ್ಗ: ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆ ಏರಿಕೆ ಖಂಡಿಸಿ ಯುವ ಕಾಂಗ್ರೆಸ್‌ ವತಿಯಿಂದ ಜಿಲ್ಲಾ ಧಿಕಾರಿ ಕಛೇರಿ ಎದುರು ಪ್ರತಿಭಟನೆ ನಡೆಸಿದರು. ಕೊರೊನಾ ಎರಡನೇ ಅಲೆಯಿಂದ ದೇಶಾದ್ಯಂತ ಜನ ತತ್ತರಿಸಿದ್ದು ಇಂತಹ ಸಂದರ್ಭದಲ್ಲೂ ಪೆಟ್ರೋಲ್‌ ಮತ್ತು ಡೀಸೆಲ್‌ ದರ ಏರಿಕೆಯಾಗುತ್ತಿದೆ.

Advertisement

ಅಂತಾರಾಷ್ಟಿಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಇಳಿಕೆಯಾಗಿದ್ದರೂ ಕೇಂದ್ರ ಸರ್ಕಾರ ಎಕೈÕಸ್‌ ಸುಂಕವನ್ನು ಹೆಚ್ಚಿಸಿ, ಕೊರೊನಾ ಲಾಕ್‌ಡೌನ್‌ ನಿಂದ ತತ್ತರಿಸಿರುವ ದೇಶದ ಸಾಮಾನ್ಯನ ಮೇಲೆ ಹೊರೆ ಹಾಕುತ್ತಿದೆ. ಸಮರ್ಪಕವಾಗಿ ಕೊರೊನಾ ನಿರ್ವಹಿಸದೇ ಅವೈಜ್ಞಾನಿಕ ಲಾಕ್‌ ಡೌನ್‌ ಘೋಷಣೆ ಮಾಡಿ ಯಾವುದೇ ವಿಶೇಷ ಪ್ಯಾಕೇಜ್‌ ಸಹ ನೀಡದೆ ದೇಶದ ಜನರ ಜೀವ ಹಾಗೂ ಜೀವನದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ದೇಶದ ಎಲ್ಲಾ ರಾಜ್ಯಗಳಲ್ಲಿ ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆ ನೂರು ರೂಪಾಯಿ ಗಡಿಯನ್ನು ದಾಟಿದೆ. ಸರಕು ಸಾಗಾಣಿಕೆ ಮೇಲೆ ಇದರ ಹೊಡೆತ ಬೀಳುವುದರಿಂದ ಅಗತ್ಯ ವಸ್ತುಗಳ ಬೆಲೆ ಹೆಚ್ಚಾಗುತ್ತದೆ ಎಂದರು. ಈ ಕೂಡಲೇ ಕೇಂದ್ರ ಸರ್ಕಾರ ಪೆಟ್ರೋಲ್‌ ಮತ್ತು ಡೀಸೆಲ್‌ ದರ ಇಳಿಕೆ ಮಾಡಬೇಕು. ಇಲ್ಲವಾದಲ್ಲಿ ರಾಷ್ಟಪತಿಗಳು ಮಧ್ಯಪ್ರವೇಶಿಸಿ ಇಂತಹ ಜನವಿರೋಧಿ  ನೀತಿಯ ಸರ್ಕಾರವನ್ನು ವಜಾ ಮಾಡಬೇಕೆಂದು ಯುವ ಕಾಂಗ್ರೆಸ್‌ ಕಾರ್ಯಕರ್ತರು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ರಾಜ್ಯ ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಎಂ ಪ್ರವೀಣ್‌ ಕುಮಾರ್‌, ಯುವ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಎಚ್‌. ಪಿ . ಗಿರೀಶ್‌, ಜಿಲ್ಲಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಕೆ ರಂಗನಾಥ್‌ ಮಹಾನಗರ ಪಾಲಿಕೆ ಸದಸ್ಯ ಎಚ್‌.ಸಿ. ಯೋಗೀಶ್‌ , ಉತ್ತರ ಬ್ಲಾಕ್‌ ಯುವ ಕಾಂಗ್ರೆಸ್‌ ಅಧ್ಯಕ್ಷ ಬಿ ಲೋಕೇಶ್‌ ಗ್ರಾಮಾಂತರ ಅಧ್ಯಕ್ಷ ಈ.ಟಿ. ನಿತಿನ್‌, ದಕ್ಷಿಣ ಬ್ಲಾಕ್‌ ಯುವ ಕಾಂಗ್ರೆಸ್‌ನ ಎಸ್‌ ಕುಮಾರೇಶ್‌, ಪದಾಧಿ ಕಾರಿಗಳಾದ ಎಂ. ರಾಹುಲ್‌, ಗಗನ್‌ ಗೌಡ, ಸಚಿನ್‌ , ರಾಹುಲ್‌ , ವೆಂಕಟೇಶ್‌ ಕಲ್ಲೂರ್‌, ಸಂತೋಷ, ರಾಕೇಶ್‌, ನವೀನ್‌, ನಂದನ್‌ ,ಚೇತನ್‌, ವಿನಯ್‌ ದೇವರಾಜ್‌, ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next