Advertisement

ರಸಗೊಬ್ಬರ-ಬೀಜ ಕೊರತೆ ಇಲ್ಲ

10:43 PM Jun 07, 2021 | Shreeraj Acharya |

ಶಿವಮೊಗ್ಗ: ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು ಜಿಲ್ಲೆಯ ರೈತರಿಗೆ ಅಗತ್ಯವಿರುವಷ್ಟು ರಸಗೊಬ್ಬರ ಮತ್ತು ಬೀಜ ದಾಸ್ತಾನು ಇದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್‌ ಹೇಳಿದರು.

Advertisement

ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳ ಕುರಿತು ಭಾನುವಾರ ಇಲ್ಲಿನ ಜಿಲ್ಲಾಡಳಿತ ಸಭಾಂಗಣದಲ್ಲಿ ಕೃಷಿ ಸಂಬಂಧಿ ತ ಇಲಾಖೆಗಳ ಅಧಿ  ಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಅವರು ಮಾತನಾಡಿದರು. ಕೊರೊನಾ ಸೋಂಕು ನಿಯಂತ್ರಿಸುವ ಸಂಬಂಧ ರಾಜ್ಯಾದ್ಯಂತ ಲಾಕ್‌ಡೌನ್‌ ಘೋಷಿಸಿರುವ ಹಿನ್ನೆಲೆಯಲ್ಲಿ ರೈತರ ಕೃಷಿ ಚಟುವಟಿಕೆಗಳಿಗೆ ಯಾವುದೇ ಅಡಚಣೆ ಆಗದಂತೆ ನೋಡಿಕೊಳ್ಳಲಾಗಿದೆ.

ಅಲ್ಲದೆ ಪ್ರತಿದಿನ ಬೆಳಗ್ಗೆ 6ರಿಂದ 10ರವರೆಗೆ ರೈತರು ತಮ್ಮ ಕೃಷಿ ಉತ್ಪನ್ನಗಳಾದ ಹೂವು-ಹಣ್ಣು-ತರಕಾರಿಗಳನ್ನು ಮಾರಾಟ ಮಾಡಲು ಹಾಗೂ ಬೀಜ ರಸಗೊಬ್ಬರಗಳನ್ನು ಖರೀದಿಸಲು ಅನುಕೂಲವಾಗುವಂತೆ ಅವಕಾಶ ಕಲ್ಪಿಸಲಾಗಿದೆ. ಜಿಲ್ಲೆಯ ಗಡಿಭಾಗಗಳಲ್ಲಿನ ರೈತರ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗದಂತೆ ಕ್ರಮ ವಹಿಸಲು ಅ ಧಿಕಾರಿಗಳಿಗೆ ಸೂಚಿಸಲಾಗಿದೆ.

ಬೀಜ ಮತ್ತು ರಸಗೊಬ್ಬರಗಳನ್ನು ದಾಸ್ತಾನು ಇರಿಸಿಕೊಂಡು ಕೃತಕ ಅಭಾವ ಸೃಷ್ಟಿಸುವವರ ವಿರುದ್ಧ, ಕಾನೂನು ರೀತ್ಯ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು. ರೈತರು ಯಾವುದೋ ಒಂದೇ ಒಂದು ಬೆಳೆಯನ್ನು ಆಶ್ರಯಿಸದೆ ತಮ್ಮ ಹೊಲಗಳಲ್ಲಿ ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಳ್ಳಬೇಕು.

ಜಿಲ್ಲೆಯ ಕೆಲವು ಭಾಗಗಳಲ್ಲಿ ನಕಲಿ ಸಾವಯವ ಗೊಬ್ಬರಗಳನ್ನು ರೈತರಿಗೆ ಮಾರಾಟ ಮಾಡಿ ವಂಚಿಸುತ್ತಿರುವ ಬಗ್ಗೆ ಸಾಕಷ್ಟು ದೂರುಗಳು ಬರುತ್ತಿದ್ದು ಸರ್ಕಾರವು ಇದನ್ನು ಗಂಭೀರವಾಗಿ ಪರಿಗಣಿಸಿದೆ. ಮುಂದಿನ ದಿನಗಳಲ್ಲಿ ನಕಲಿ ಸಾವಯವ ಗೊಬ್ಬರ ಮಾರಾಟ ಮಾಡುವವರನ್ನು ಗುರುತಿಸಿ ದಂಡನೆಗೆ ಗುರಿಪಡಿಸಲಾಗುವುದು ಎಂದರು.

Advertisement

ಕಳೆದ ಸಾಲಿನಲ್ಲಿ ಕ್ರಾಪ್‌ ಸರ್ವೇ ತಂತ್ರಾಂಶ ಅಭಿವೃದ್ಧಿ ಪಡಿಸಿದ ನಂತರ ರೈತರಿಗೆ ಬಹು ಉಪಯುಕ್ತವಾಗಿದೆ. ಕಳೆದ ಸಾಲಿನಲ್ಲಿ ಕೋಟಿಗೂ ಹೆಚ್ಚು ಜನ ರೈತರು ಕ್ರಾಪ್‌ ಸರ್ವೇಯಲ್ಲಿ ಬೆಳೆ ನಮೂದಿಸಿದ್ದರು. ಪ್ರಸ್ತುತ ರೈತರಿಗೆ ಉಪಯುಕ್ತವಾಗಿರುವ ಭೂಮಿ ತಂತ್ರಾಂಶ ವನ್ನು ಇನ್ನಷ್ಟು ಅಭಿವೃದ್ಧಿ ಪಡಿಸಲು ಸೂಚಿಸಲಾಗಿದೆ ಎಂದರು.

ಸಭೆಯಲ್ಲಿ ಉಪಸ್ಥಿತರಿದ್ದ ಸಂಸದ ಬಿ.ವೈ. ರಾಘವೇಂದ್ರ ಮಾತನಾಡಿ, ಕಳೆದ ಸಾಲಿನಲ್ಲಿ ಜಿಲ್ಲೆಯ 43 ಸಾವಿರಕ್ಕೂ ಹೆಚ್ಚಿನ ರೈತರಿಗೆ ಗುಣಮಟ್ಟದ ತಾಡಪಾಲು ಗಳನ್ನು ವಿತರಿಸಿರುವುದು ಹರ್ಷದ ಸಂಗತಿ. ಅಲ್ಲದೆ ಮೊಬೈಲ್‌ ಆ್ಯಪ್‌ ವಿನ್ಯಾಸಗೊಳಿಸಿ ಬಳಕೆಗೆ ಅನುಕೂಲ ಮಾಡಿಕೊಟ್ಟದ್ದು ರೈತರಿಗೆ ಉಪಯುಕ್ತವಾಗಿದೆ. ರೈತರಿಗೆ ಅನುಕೂಲವಾಗುವಂತೆ ಪಹಣಿ ಡಾಟಾ ಎಂಟ್ರಿ ಕಾರ್ಯ ತ್ವರಿತವಾಗಿ ಮುಗಿಸಬೇಕಿದೆ. ಔಷಧ ಮತ್ತು ರಸಗೊಬ್ಬರಗಳನ್ನು ಸರಿಯಾದ ಪ್ರಮಾಣದಲ್ಲಿ ಬಳಕೆ ಮಾಡಲು ರೈತರಿಗೆ ತರಬೇತಿ ನೀಡುವ ಅಗತ್ಯವಿದೆ ಎಂದರು.

ಸಭೆಯಲ್ಲಿ ಜಿಲ್ಲೆಯ ಶಾಸಕರು, ವಿಧಾನಪರಿಷತ್‌ ಸದಸ್ಯರು ಅಧಿಕಾರಿಗಳು ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next