Advertisement

ವಸತಿ ಯೋಜನೆಯ ಕಾಮಗಾರಿ ಶೀಘ್ರ ಪೂರ್ಣ

10:58 PM Jun 10, 2021 | Shreeraj Acharya

ಶಿವಮೊಗ್ಗ: ವಸತಿ ಯೋಜನೆಯಡಿ ಬಾಕಿ ಇರುವ ಬಿಲ್‌ಗ‌ಳ ಬಗ್ಗೆ ಮಾಹಿತಿ ನೀಡಿದರೆ ತಕ್ಷಣ ಹಣ ಪಾವತಿ ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ವಸತಿ ಸಚಿವ ವಿ.ಸೋಮಣ್ಣ ತಿಳಿಸಿದರು. ಬುಧವಾರ ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಜಿಲ್ಲೆಯ ವಿವಿಧ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.

Advertisement

ಬಡವರಿಗೆ ಸೂರು ಕಲ್ಪಿಸುವ ಉದ್ದೇಶದಿಂದ ವಿವಿಧ ವಸತಿ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಆದರೆ ಕಳೆದ ಐದಾರು ವರ್ಷಗಳಿಂದ ಯಾವುದೇ ಯೋಜನೆಗಳು ಸಮರ್ಪಕವಾಗಿ ಪೂರ್ಣಗೊಳ್ಳದೆ ಇರುವುದರಿಂದ ಫಲಾನುಭವಿಗಳಿಗೆ ತೊಂದರೆಯಾಗಿದೆ. ಇದನ್ನು ಮನಗಂಡು ಎಲ್ಲಾ ವಸತಿ ಯೋಜನೆಗಳನ್ನು ಪೂರ್ಣಗೊಳಿಸಲು ಕಳೆದ 2 ವರ್ಷಗಳಿಂದ ಸತತ ಪ್ರಯತ್ನ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ನಗರ ಸ್ಥಳೀಯ ಸಂಸ್ಥೆಗಳಲ್ಲಿ ಈಗಾಗಲೇ ಕೈಗೊಂಡಿರುವ ವಸತಿ ಯೋಜನೆಗಳ ಬಗ್ಗೆ ಆಯಾ ಶಾಸಕರು ಹಾಗೂ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷರು ಗಮನಹರಿಸಿ ಯೋಜನೆಗಳನ್ನು ಪೂರ್ಣಗೊಳಿಸಲು ಮುಂದಾಗಬೇಕು. ಮುಖ್ಯಾ ಧಿಕಾರಿಗಳು ಹಾಗೂ ತಾಲೂಕು ಪಂಚಾಯಿತಿ ಇಒಗಳ ಮೂಲಕ ತಕ್ಷಣವೆ ಬಿಲ್‌ ಕಳುಹಿಸಿಕೊಟ್ಟರೆ ರಾಜೀವ್‌ ಗಾಂ ಧಿ ವಸತಿ ನಿಗಮ ದಿಂದ ಎಲ್ಲವನ್ನು ಪಾವತಿಸಲಾಗುತ್ತದೆ ಎಂದರು.

ಸಚಿವ ಕೆ.ಎಸ್‌. ಈಶ್ವರಪ್ಪ ಮಾತನಾಡಿ, ಸರ್ಕಾರಿ ವಸತಿ ಯೋಜನೆಗಳಲ್ಲಿ ಕೈಗೊಂಡಿರುವ ಬಡಾವಣೆಗಳಲ್ಲಿ ಇದುವರೆಗು ಮೂಲ ಸೌಕರ್ಯ ಕಲ್ಪಿಸಲು ಸಾಧ್ಯವಾಗಿಲ್ಲ. ಸ್ಥಳೀಯ ಸಂಸ್ಥೆಗಳಲ್ಲಿ ಅನುದಾನ ಲಭ್ಯವಿಲ್ಲದೆ ಇರುವುದರಿಂದ ಎಲ್ಲಾ ಸೌಲಭ್ಯ ಕಲ್ಪಿಸಲು ರಾಜ್ಯ ಸರ್ಕಾರದಿಂದಲೆ ಕ್ರಮ ಕೈಗೊಳ್ಳಬೇಕು. ಈ ಸಂಬಂಧ ವಸತಿ ಸಚಿವರು ಇಂದೇ ಒಂದು ನಿರ್ಧಾರ ಪ್ರಕಟಿಸಬೇಕೆಂದು ಪಟ್ಟು ಹಿಡಿದರು.

ಇದಕ್ಕೆ ಸ್ಪಂದಿಸಿದ ಸಚಿವ ವಿ.ಸೋಮಣ್ಣ ಸರ್ಕಾರದಿಂದ ಕೈಗೊಂಡಿರುವ ವಸತಿ ಬಡಾವಣೆಗಳಲ್ಲಿ ಮೂಲ ಸೌಕರ್ಯ ಕಲ್ಪಿಸಲು ಸರ್ಕಾರದಿಂದಲೆ ಕ್ರಮ ಕೈಗೊಳ್ಳಲಾಗುತ್ತದೆ. ವಿದ್ಯುತ್‌, ಬೀದಿ ದೀಪ, ರಸ್ತೆ, ಚರಂಡಿ, ಕುಡಿಯುವ ನೀರು ಮೊದಲಾದ ಸೌಲಭ್ಯ ಕಲ್ಪಿಸಲು ಇದುವರೆಗೂ ಸಾಧ್ಯವಾಗಿಲ್ಲ. ಇದರಿಂದಾಗಿ ಅಲ್ಲಿಯ ಜನರಿಗೆ ಸಮಸ್ಯೆಯಾಗಿದೆ. ಎಷ್ಟು ಅನುದಾನ ಬೇಕೆಂಬುದನ್ನು ಲಿಖೀತವಾಗಿ ಕಳುಹಿಸಿದರೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅನುದಾನ ನೀಡಲಾಗುತ್ತದೆ ಎಂದರು.

Advertisement

ಈಗಾಗಲೇ ಅನೇಕ ಕಾರಣ ನೀಡಿ ಮನೆಗಳನ್ನು ಬ್ಲಾಕ್‌ ಮಾಡಲಾಗಿದೆ. ಇದರಿಂದ ಅನೇಕ ಬಡವರಿಗೆ ಅನ್ಯಾಯವಾಗುತ್ತಿದ್ದು, ಸ್ಥಳೀಯ ಸಂಸ್ಥೆಗಳು ಮತ್ತು ತಾಲೂಕು ಪಂಚಾಯಿತಿಯಿಂದ ಸ್ಥಳ ಪರಿಶೀಲನೆ ನಡೆಸಿ ಅರ್ಹ ಫಲಾನುಭವಿಗಳಿಗೆ ಮನೆ ನೀಡಲು ಕ್ರಮ ಕೈಗೊಳ್ಳಬೇಕು. ಕಳೆದ 6 ವರ್ಷಗಳ ಹಿಂದೆ ಕೈಗೊಂಡ ವಸತಿ ಯೋಜನೆಗಳನ್ನು ಈಗ ಪೂರ್ಣಗೊಳಿಸಲು ಕ್ರಮಕೈಗೊಳ್ಳಲಾಗಿದೆ. ಇದಕ್ಕೆ ಅ ಧಿಕಾರಿಗಳು ಸ್ಪಂದಿಸುವಂತೆ ಸಲಹೆ ನೀಡಿದರು.

ಶಾಸಕ ಹರತಾಳ್‌ ಹಾಲಪ್ಪ ಮಾತನಾಡಿ, ಮಳೆಯಿಂದ ಬಿದ್ದ ಮನೆಗಳ ಕೆಲವು ಮಾಲೀಕರಿಗೆ ಖಾತೆ ಇಲ್ಲದ ಕಾರಣ ಹೊಸದಾಗಿ ಮನೆ ಮಂಜೂರು ಮಾಡಲು ಸಾಧ್ಯವಾಗುತ್ತಿಲ್ಲ. ಇದರಲ್ಲಿ ತಾಂತ್ರಿಕ ಅಡಚಣೆಯಿದ್ದು, ಇದನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿ ಅಂತಹವರಿಗೆ ಮನೆ ನೀಡಲು ಇಲಾಖೆಯಿಂದ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.

ವಿಧಾನ ಪರಿಷತ್‌ ಸದಸ್ಯ ಆರ್‌. ಪ್ರಸನ್ನ ಕುಮಾರ್‌ ಮಾತನಾಡಿ, ಪ್ರತಿ ಪಂಚಾಯಿತಿಗೆ 20 ಮನೆಗಳನ್ನು ನೀಡಿದರೆ ಸಾಕಾಗುವುದಿಲ್ಲ. ಇನ್ನು ಹೆಚ್ಚಿನ ಮನೆಗಳನ್ನು ನೀಡಲು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ಸಭೆಯಲ್ಲಿ ಮೇಯರ್‌ ಸುನಿತಾ ಅಣ್ಣಪ್ಪ, ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್‌, ಜಿ.ಪಂ. ಸಿಇಒ ಎಂ.ಎಲ್‌. ವೈಶಾಲಿ, ವಸತಿ ನಿಗಮದ ಎಂಡಿ ಬಸವರಾಜ್‌, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೆಲ್ವಕುಮಾರ್‌ ಇದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next