Advertisement

ಸೇತುವೆ ಕಾಮಗಾರಿ ಆರಂಭಕ್ಕೆ ಸೂಚನೆ

06:31 PM Jan 29, 2021 | Shreeraj Acharya |

ಶಿವಮೊಗ್ಗ: ಸಂಚಾರ ದಟ್ಟಣೆ ತಗ್ಗಿಸುವ ಉದ್ದೇಶದಿಂದ ಶಿವಮೊಗ್ಗ ನಗರ ಮತ್ತು ಭದ್ರಾವತಿಯಲ್ಲಿ ರೈಲ್ವೆ ಮೇಲ್ಸೇತುವೆ ಮತ್ತು ಕೆಳಸೇತುವೆಗಳ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಈಗಾಗಲೇ ಅನುದಾನ ಬಿಡುಗಡೆಗೊಳಿಸಿದ್ದು, ಆದಷ್ಟು ಬೇಗನೆ ಕಾಮಗಾರಿ ಆರಂಭಿಸಲು ಕ್ರಮ ಕೈಗೊಳ್ಳುವಂತೆ ಅ ಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದರು.

Advertisement

ಗುರುವಾರ ಜಿಲ್ಲಾ ಧಿಕಾರಿ ಕಚೇರಿಯಲ್ಲಿ ಈ ಕುರಿತು ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಶಿವಮೊಗ್ಗ ನಗರದ ಸವಳಂಗ ರಸ್ತೆ ಮತ್ತು ಕಾಶಿಪುರದಲ್ಲಿ ಹಾಗೂ ಭದ್ರಾವತಿಯಲ್ಲಿ ಒಟ್ಟು 4 ರೈಲ್ವೆ ಸೇತುವೆಗಳ ನಿರ್ಮಾಣಕ್ಕೆ ಅನುಮೋದನೆ ದೊರೆತಿದೆ. ಸವಳಂಗ ರಸ್ತೆಯಲ್ಲಿ ರೈಲ್ವೆ ಮೇಲ್ಸೇತುವೆ ಮತ್ತು ಕೆಳಸೇತುವೆ ನಿರ್ಮಾಣಕ್ಕೆ ಸರ್ಕಾರ 60.76 ಕೋಟಿ ರೂ. ಬಿಡುಗಡೆ ಮಾಡಿದೆ. ಇಲ್ಲಿ ಭೂ ಸ್ವಾ ಧೀನ ಪ್ರಕ್ರಿಯೆ, ವಿದ್ಯುತ್‌ ಕಂಬಗಳ ಸ್ಥಳಾಂತರ ಇತ್ಯಾದಿ ಕಾರ್ಯಗಳನ್ನು ಆದಷ್ಟು ಬೇಗನೆ ಪೂರ್ಣಗೊಳಿಸಬೇಕು. ಕಾಶಿಪುರ ರೈಲ್ವೆ ಕ್ರಾಸಿಂಗ್‌ ಬಳಿ ಮೇಲ್ಸೇತುವೆ ನಿರ್ಮಾಣಕ್ಕೆ 30 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಭದ್ರಾವತಿಯಲ್ಲಿ ಮೇಲ್ಸೇತುವೆ ನಿರ್ಮಾಣಕ್ಕೆ 49 ಕೋಟಿ ರೂ. ಬಿಡುಗಡೆಯಾಗಿದೆ ಎಂದರು.

ಪರ್ಯಾಯ ರಸ್ತೆ: ಮಾ.1ರಂದು ಎಲ್ಲಾ ಕಾಮಗಾರಿಗಳನ್ನು ಆರಂಭಿಸಲು ಪೂರ್ವಸಿದ್ಧತೆಗಳನ್ನು ಪೂರ್ಣಗೊಳಿಸಬೇಕು. ಎಲ್ಲಾ ರೈಲ್ವೆ ಸೇತುವೆಗಳ ನಿರ್ಮಾಣ ಕಾರ್ಯವನ್ನು ದಾಖಲೆ ಸಮಯದ ಒಳಗಾಗಿ ಪೂರ್ಣಗೊಳಿಸಲು ಸೂಚಿಸಲಾಗಿದೆ.
ಕಾಮಗಾರಿ ಅವಧಿಯಲ್ಲಿ ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗಗಳನ್ನು ಗುರುತಿಸಲಾಗುತ್ತಿದೆ. ಸಾರ್ವಜನಿಕರಿಗೆ ಹೆಚ್ಚಿನ ಅನಾನುಕೂಲತೆಗಳು ಆಗದಂತೆ ಸೂಕ್ತ ಪರ್ಯಾಯ ರಸ್ತೆಗಳನ್ನು ಕಲ್ಪಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಜಿಲ್ಲೆಯಲ್ಲಿ ರೈಲ್ವೆ ಕೋಚಿಂಗ್‌ ಡಿಪೋ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಈಗಾಗಲೇ 60 ಕೋಟಿ ರೂ. ಬಿಡುಗಡೆಗೆ ಅನುಮೋದನೆ ನೀಡಿದೆ. ಶಿಕಾರಿಪುರ- ರಾಣೆಬೆನ್ನೂರು ರೈಲ್ವೇ ಹಳಿ ನಿರ್ಮಾಣ ಕಾಮಗಾರಿಯ ಭೂಸ್ವಾ ಧೀನ ಪ್ರಕ್ರಿಯೆ ನಡೆಯುತ್ತಿದ್ದು, ಪ್ರಥಮ ಹಂತದ ಕಾಮಗಾರಿಗಳಿಗೆ ಟೆಂಡರ್‌ ಕರೆಯುವ ಪ್ರಕ್ರಿಯೆ ಹಂತದಲ್ಲಿದೆ. ರೈತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಭೂಸ್ವಾಧಿಧೀನ ಪ್ರಕ್ರಿಯೆ ಮತ್ತು ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ರಾಜ್ಯ ಸರ್ಕಾರ ತನ್ನ ಪಾಲಿನ ಅನುದಾನವನ್ನು ಈಗಾಗಲೇ
ಬಿಡುಗಡೆ ಮಾಡಿದೆ. ಮುಂದಿನ ಎರಡು ವರ್ಷಗಳ ಅವ ಧಿಯಲ್ಲಿ ಜಿಲ್ಲೆಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಐತಿಹಾಸಿಕ ಬದಲಾವಣೆಗಳನ್ನು
ಕಾಣಬಹುದಾಗಿದೆ ಎಂದರು.

Advertisement

ಕೇಂದ್ರ ರೈಲ್ವೆ ಸಚಿವರ ಆಗಮನ: ಜಿಲ್ಲೆಯಲ್ಲಿ ನಡೆಯುತ್ತಿರುವ ರೈಲ್ವೆ ಯೋಜನೆಗಳಿಗೆ ಚಾಲನೆ ನೀಡಲು ಕೇಂದ್ರ ರೈಲ್ವೆ ಸಚಿವ ಪಿಯೂಷ್‌ ಗೋಯಲ್‌ ಅವರು ಮಾರ್ಚ್‌ ಮೊದಲ ವಾರದಲ್ಲಿ ಶಿವಮೊಗ್ಗ ಆಗಮಿಸುವ ಸಾಧ್ಯತೆಯಿದೆ. ಸಚಿವರು ಆ ಸಂದರ್ಭದಲ್ಲಿ
ರೈಲ್ವೆ ಕಾಮಗಾರಿಗಳ ಭೂಮಿಪೂಜೆ ಮತ್ತು ಉದ್ಘಾಟನೆ ಕಾರ್ಯಗಳನ್ನು ನೆರವೇರಿಸಲಿದ್ದಾರೆ ಎಂದು ಅವರು ತಿಳಿಸಿದರು.

ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್‌, ಮಹಾನಗರ ಪಾಲಿಕೆ ಮೇಯರ್‌ ಸುವರ್ಣಾ ಶಂಕರ್‌, ಸೂಡಾ ಅಧ್ಯಕ್ಷ ಜ್ಯೋತಿಪ್ರಕಾಶ್‌, ಆಯುಕ್ತ ಚಿದಾನಂದ ವಟಾರೆ, ರೈಲ್ವೆ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಇದ್ದರು.

ಓದಿ : ಮರೆಯಾದ ಮನಗೂಳಿ ಮುತ್ಯಾ; ನೀರಾವರಿಗೆ ಚಪ್ಪಲಿ ತ್ಯಜಿಸಿದ್ದ ನಾಯಕ

Advertisement

Udayavani is now on Telegram. Click here to join our channel and stay updated with the latest news.

Next