Advertisement

ಮುಂದಿನ ಜೂನ್‌ ಒಳಗೆ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣ

09:48 PM Jun 13, 2021 | Shreeraj Acharya |

ಶಿವಮೊಗ್ಗ: ಜನರ ಬಹುನಿರೀಕ್ಷಿತ ವಿಮಾನ ನಿಲ್ದಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಮುಂದಿನ ಜೂನ್‌ ಒಳಗಾಗಿ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿಎಸ್‌.ಯಡಿಯೂರಪ್ಪ ತಿಳಿಸಿದರು.

Advertisement

ಶನಿವಾರ ಸೋಗಾನೆಯಲ್ಲಿ ನಡೆಯುತ್ತಿರುವ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಬೆಂಗಳೂರು ವಿಮಾನ ನಿಲ್ದಾಣದ ಬಳಿಕ ಶಿವಮೊಗ್ಗದಲ್ಲಿಯೇ ಅಂತಹ ಸುಸಜ್ಜಿತ ವಿಮಾನ ನಿಲ್ದಾಣ ನಿರ್ಮಾಣವಾಗಲಿದೆ. ಹಣಕಾಸಿನ ಅಡಚಣೆ ನಡುವೆಯೂ ಅನುದಾನ ಬಿಡುಗಡೆಗೊಳಿಸಿ ತ್ವರಿತಗತಿಯಲ್ಲಿ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗುತ್ತಿದೆ ಎಂದರು. ವಿಮಾನ ನಿಲ್ದಾಣ ನಿರ್ಮಾಣದಿಂದ ಮಧ್ಯ ಕರ್ನಾಟಕದ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಗತಿ ನಿರೀಕ್ಷಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ಸವಾಂìಗೀಣ ಪ್ರಗತಿ ಸಾಧ್ಯವಾಗಲಿದೆ.

ಹೆಚ್ಚಿನ ಕೈಗಾರಿಕೆಗಳು ಪ್ರಾರಂಭವಾಗಿ ಉದ್ಯೋಗಾವಕಾಶ ಸೃಷ್ಟಿಯಾಗಲಿದೆ ಎಂದರು. ರನ್‌ ವೇ ಕಾಮಗಾರಿ, ಸಂಪರ್ಕ ರಸ್ತೆ, ಪೆರಿಮೀಟರ್‌ ರಸ್ತೆ ಕಾಮಗಾರಿಗಳು ಪ್ರಗತಿಯಲ್ಲಿವೆ. ಕಾಂಪೌಂಡ್‌ ನಿರ್ಮಾಣ ಬಹುತೇಕ ಪೂರ್ಣಗೊಂಡಿದ್ದು, 15,900 ಮೀಟರ್‌ ಪೈಕಿ 11,500 ಮೀಟರ್‌ ಕಾಂಪೌಡ್‌ ನಿರ್ಮಾಣ ಪೂರ್ಣಗೊಳಿಸಲಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ವಿಮಾನ ನಿಲ್ದಾಣ ಕಟ್ಟಡದ ವಿನ್ಯಾಸ ಅನಾವರಣ ಮಾಡಿದರು. ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜು, ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಅಶೋಕ ನಾಯ್ಕ, ಅರಗ ಜ್ಞಾನೇಂದ್ರ, ರುದ್ರೇಗೌಡ, ಆರ್ಯವೈಶ್ಯ ನಿಗಮ ಅಧ್ಯಕ್ಷ ಡಿ.ಎಸ್‌. ಅರುಣ್‌, ಮೇಯರ್‌ ಸುನಿತಾ ಅಣ್ಣಪ್ಪ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೆಲ್ವಕುಮಾರ್‌, ಜಿಲ್ಲಾ ಧಿಕಾರಿ ಕೆ.ಬಿ. ಶಿವಕುಮಾರ್‌ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next