Advertisement

ನಿಗದಿತ ಅವಧಿಯಲಿ ಎಲ್ಲ ಕಾಮಗಾರಿ ಪೂರ್ಣಗೊಳಿಸಿ

09:56 PM Jun 13, 2021 | Team Udayavani |

ಶಿವಮೊಗ್ಗ: ಶಿವಮೊಗ್ಗ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದ್ದು, ನಗರದ ಸರ್ವಾಂಗೀಣ ವಿಕಾಸಕ್ಕೆ ಅಗತ್ಯ ಕ್ರಮ ಕೈಗೊಂಡು ರಾಜ್ಯದ ಮಾದರಿ ನಗರವಾಗಿ ರೂಪಿಸಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜ ಹೇಳಿದರು. ಶಿವಮೊಗ್ಗ ಮಹಾನಗರಪಾಲಿಕೆ ವ್ಯಾಪ್ತಿಗೊಳಪಡುವ ಎಲ್ಲಾ ವಾರ್ಡ್‌ಗಳಲ್ಲಿ ಕೈಗೊಂಡಿರುವ ರಸ್ತೆ, ಚರಂಡಿ, ಉದ್ಯಾನವನ ಹಾಗೂ ಇತರೆ ಕಾಮಗಾರಿಗಳ ಪ್ರಗತಿ ಪರಿಶೀಲಿಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು.

Advertisement

ಶಿವಮೊಗ್ಗ ಮಲೆನಾಡಿನ ಪ್ರದೇಶವಾಗಿದ್ದು, ಮಳೆಗಾಲದಲ್ಲಿ ಯೋಜನೆಗಳಿಗೆ ಅಡಚಣೆ ಆಗದಂತೆ ಕ್ರಮ ವಹಿಸಲಾಗುವುದು. ಸ್ಮಾರ್ಟ್‌ಸಿಟಿ ಯೋಜನೆಯಡಿ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಹಾಗೂ ನಗರಾಭಿವೃದ್ಧಿ ಇಲಾಖೆಯಿಂದ ವಿವಿಧ ಯೋಜನೆಗಳಡಿ ಜಿಲ್ಲೆಯಲ್ಲಿ ಕೈಗೊಂಡಿರುವ ಕಾಮಗಾರಿಗಳನ್ನು ನಿಗದಿ ತ ಕಾಲಮಿತಿಯಲ್ಲಿ ಪೂರ್ಣಗೊಳಿಸುವಂತೆ ಸಂಬಂಧಿಸಿದ ಅ ಧಿಕಾರಿಗಳಿಗೆ ಸೂಚಿಸಲಾಗಿದೆ. ಈಗಾಗಲೇ ಅನೇಕ ಕಾಮಗಾರಿಗಳು ಪೂರ್ಣಗೊಂಡಿವೆ. ಇನ್ನೂ ಕೆಲ ಕಾಮಗಾರಿಗಳು ಕೊರೊನಾ ಲಾಕ್‌ ಡೌನ್‌ ಹಿನ್ನೆಲೆಯಲ್ಲಿ ಮಂದಗತಿಯಲ್ಲಿ ಸಾಗಿವೆ. ಅವುಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಸೂಚಿಸಲಾಗಿದೆ ಎಂದರು.

ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಈಗಾಗಲೇ ಸುಮಾರು 150 ಕೋಟಿ ರೂ. ವೆಚ್ಚದಲ್ಲಿ ವಿವಿಧ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ನಗರದ ಬಹುಜನರ ಬೇಡಿಕೆಯಂತೆ ಗಾಂಧಿಧೀ ಪಾರ್ಕ್‌ನ ಪ್ರವೇಶದ್ವಾರದಲ್ಲಿ ಬಸವೇಶ್ವರ ಪುತ್ಥಳಿ ಅನಾವರಣಗೊಳಿಸಲು ಅಗತ್ಯ ಕ್ರಮಕ್ಕೆ ಮುಂದಾಗಿದ್ದು, ಶೀಘ್ರದಲ್ಲಿ ಮುಖ್ಯಮಂತ್ರಿಗಳಿಂದ ಉದ್ಘಾಟಿಸಲಾಗುವುದು ಎಂದರು.

ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಶಿಕಾರಿಪುರ ಪಟ್ಟಣದ ಒಳಚರಂಡಿ ಕಾಮಗಾರಿಗಳನ್ನು ಕೈಗೊಳ್ಳಲು ಸಲ್ಲಿಸಲಾಗಿದ್ದ 13ಕೋಟಿ ರೂ.ಗಳ ಕಾಮಗಾರಿಗಳ ಪ್ರಸ್ತಾವನೆಗೆ ಮುಖ್ಯಮಂತ್ರಿಗಳು ಅನುಮೋದನೆ ನೀಡಿದ್ದು, ಶೀಘ್ರದಲ್ಲಿ ಟೆಂಡರ್‌ ಪ್ರಕ್ರಿಯೆ ಪೂರ್ಣಗೊಳಿಸಿ, ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು ಎಂದರು. ಸಚಿವರೊಂದಿಗೆ ಕಾಮಗಾರಿ ಪ್ರಗತಿ ಪರಿಶಿಲಿಸಿದ ಗ್ರಾಮೀಣಾಭಿವೃದ್ಧಿ, ಪಂಚಾಯತ್‌ರಾಜ್‌ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್‌.ಈಶ್ವರಪ್ಪ ಮಾತನಾಡಿ, ಬಸವೇಶ್ವರ ಪುತ್ಥಳಿ ನಿರ್ಮಾಣಕ್ಕೆ ಇರುವ ಅಡತಡೆಗಳನ್ನು ಸರಿಪಡಿಸಿ, ಪುತ್ಥಳಿ ಅನಾವರಣಗೊಳಿಸಲಾಗುವುದು.

ಈ ಸಂಬಂಧ ಪ್ರಸಕ್ತ ಅ ಧಿವೇಶನದಲ್ಲಿ ಅನುಮೋದನೆ ಪಡೆದು ಕ್ರಮವಹಿಸಲಾಗುವುದು ಎಂದರು. ನಗರರಾಭಿವೃದ್ಧಿ ಇಲಾಖೆಯಿಂದ ಈ ಹಿಂದೆ ನಾಲ್ಕು ಕೋಟಿ ರೂ.ಗಳಿಗೂ ಹೆಚ್ಚಿನ ಅನುದಾನ ಬಿಡುಗಡೆಯಾಗಿದ್ದು, ಯೋಗಭವನ ಶೀಘ್ರದಲ್ಲಿ ಪೂರ್ಣಗೊಂಡು ಉದ್ಘಾಟನೆಗೊಳ್ಳಲಿದೆ. ಅಲ್ಲದೇ 2.25 ಕೋಟಿ ರೂ.ಗಳ ವೆಚ್ಚದಲ್ಲಿ ನಗರದ 15 ಉದ್ಯಾನವನಗಳ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದೆ ಎಂದರು. ಮಹಾನಗರಪಾಲಿಕೆ ಮೇಯರ್‌ ಸುನಿತಾ ಅಣ್ಣಪ್ಪ, ಸೂಡಾ ಅಧ್ಯಕ್ಷ ಜ್ಯೋತಿ ಪ್ರಕಾಶ್‌, ಮಹಾನಗರಪಾಲಿಕೆ ಆಯುಕ್ತ ಚಿದಾನಂದ ವಟಾರೆ, ಚನ್ನಬಸಪ್ಪ ಸೇರಿದಂತೆ ನಗರಪಾಲಿಕೆಯ ಅ ಧಿಕಾರಿ ಸಿಬ್ಬಂ ದಿ, ಗುತ್ತಿಗೆದಾರರು ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿ ಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next