Advertisement

ತುಂಗಾ ಡ್ಯಾಂನಿಂದ ನೀರು ಬಿಡುಗಡೆ

10:32 PM Jun 15, 2021 | Shreeraj Acharya

ಶಿವಮೊಗ್ಗ: ಮಲೆನಾಡಿನಲ್ಲಿ ನಿರಂತರ ಮಳೆಯಾಗುತ್ತಿದ್ದು, ಗಾಜನೂರು ತುಂಗಾ ಜಲಾಶಯದ 21 ಗೇಟ್‌ಗಳನ್ನು ತೆರೆದು ನೀರನ್ನು ಹೊರ ಬಿಡಲಾಗುತ್ತಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಜಲಾನಯನ ಪ್ರದೇಶದ ವ್ಯಾಪ್ತಿಯಲ್ಲಿ ಧಾರಾಕಾರ ಮಳೆಯಾಗುತ್ತಿರುವುದರಿಂದ ಜಲಾಶಯಕ್ಕೆ ಹರಿವಿನ ಪ್ರಮಾಣ ಹೆಚ್ಚಾಗಿದ್ದು, ಜಲಾಶಯದಲ್ಲಿರುವ 22 ಕ್ರೆಸ್ಟ್‌ ಗೇಟ್‌ಗಳಲ್ಲಿ 21 ಗೇಟ್‌ಗಳನ್ನು ತೆರೆದು ನೀರು ಹೊರಬಿಡಲಾಗುತ್ತಿದೆ.

Advertisement

ತುಂಗಾ ಜಲಾಶಯದಿಂದ ವಿದ್ಯುತ್‌ ಉತ್ಪಾದನೆಗೆ ಪವರ್‌ ಹೌಸ್‌ ಗೆ 1500 ಕ್ಯೂಸೆಕ್‌ ಮತ್ತು ನದಿಗೆ 1800 ಒಟ್ಟು 7300 ಕ್ಯೂಸೆಕ್‌ ನೀರನ್ನು ಹೊರಬಿಡಲಾಗುತ್ತಿದೆ. ತುಂಗಾ ಡ್ಯಾಂ 3.24 ಟಿಎಂಸಿ ಅಡಿ ಸಾಮರ್ಥ್ಯ ಹೊಂದಿದ್ದು 2.411 ಟಿಎಂಸಿ ಅಡಿ ನೀರಿದೆ.

3774 ಕ್ಯೂಸೆಕ್‌ ಒಳಹರಿವು ಇದೆ. ಡ್ಯಾಂಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ನೀರನ್ನು ಹೊರ ಬಿಡಲಾಗಿದೆ. ಮಧ್ಯಾಹ್ನದ ನಂತರ 9500 ಕ್ಯೂಸೆಕ್‌ ನಷ್ಟು ನೀರು ಹೊರಬಿಡಲಾಗುತ್ತಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next