Advertisement
ಮುಂಗಾರು ಮಳೆ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಮುಂಜಾಗರೂಕತಾ ಕ್ರಮಗಳ ಕುರಿತು ಶನಿವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ನಡೆಸಿದ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಜಿಲ್ಲೆಯಲ್ಲಿ ಅತಿವೃಷ್ಟಿ ಎದುರಿಸಲು ಕೈಗೊಂಡಿರುವ ಕ್ರಮಗಳ ಕುರಿತು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದರು.
Related Articles
Advertisement
ಪ್ರಸ್ತುತ ಸಾಲಿನಲ್ಲಿ ಮಳೆಯಿಂದ ಮೂವರು ಸಾವಿಗೀಡಾಗಿದ್ದು, ಅವರ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ ನೀಡಲಾಗಿದೆ. 2 ಜಾನುವಾರುಗಳು ಮೃತಪಟ್ಟಿದ್ದು 60 ಸಾವಿರ ರೂ. ನೀಡಲಾಗಿದೆ. 4 ಮನೆಗಳು ಶೇ.75ರಷ್ಟು ಹಾಗೂ 69 ಮನೆಗಳಿಗೆ ಸ್ವಲ್ಪಮಟ್ಟಿನ ಹಾನಿಯಾಗಿದ್ದು ಮಾರ್ಗಸೂಚಿ ಪ್ರಕಾರ ಪರಿಹಾರ ನೀಡಲಾಗುವುದು ಎಂದು ಜಿಲ್ಲಾ ಧಿಕಾರಿ ಅವರು ತಿಳಿಸಿದರು.
ಅಗತ್ಯ ಅನುದಾನ ಬಿಡುಗಡೆ: ಅತಿವೃಷ್ಟಿಯಿಂದ ಮಾನವ ಜೀವ ಹಾನಿ ಹಾಗೂ ಜಾನುವಾರುಗಳಿಗೆ ಹಾನಿಯಾಗದಂತೆ ಗರಿಷ್ಟ ಎಚ್ಚರಿಕೆ ವಹಿಸಬೇಕು. ಜಾನುವಾರುಗಳಿಗೆ ಸಾಕಷ್ಟು ಮೇವು ಲಭ್ಯವಾಗುವಂತೆ ನೋಡಿಕೊಳ್ಳಬೇಕು. ಅಗತ್ಯವಿರುವ ಕಡೆಗಳಲ್ಲಿ ಕಾಳಜಿ ಕೇಂದ್ರಗಳನ್ನು ಸ್ಥಾಪಿಸಲು ವ್ಯವಸ್ಥೆ ಮಾಡಬೇಕು. ಅತಿವೃಷ್ಟಿ ಪರಿಹಾರ ಕಾಮಗಾರಿಗಳಿಗೆ ಯಾವುದೇ ಅನುದಾನ ಕೊರತೆಯಾಗದಂತೆ ನೋಡಿಕೊಳ್ಳಲಾಗಿದ್ದು, ಈಗಾಗಲೇ ಎಲ್ಲಾ ಜಿಲ್ಲಾ ಧಿಕಾರಿಗಳ ಖಾತೆಗೆ ಅಗತ್ಯ ಅನುದಾನ ಬಿಡುಗಡೆ ಮಾಡಲಾಗಿದೆ. ಬಿತ್ತನೆ ಬೀಜ ಮತ್ತು ರಸಗೊಬ್ಬರಕ್ಕೆ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಬಿ.ಎಸ್ .ಯಡಿಯೂರಪ್ಪ ಅವರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.
ಪೊಲೀಸ್ ವರಿಷ್ಠಾ ಧಿಕಾರಿ ಲಕ್ಷಪ್ರಸಾದ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾ ಧಿಕಾರಿ ಎಂ.ಎಲ್. ವೈಶಾಲಿ, ಅಪರ ಜಿಲ್ಲಾ ಧಿಕಾರಿ ಜಿ.ಅನುರಾಧ, ವಿವಿಧ ಇಲಾಖೆಗಳ ಅ ಧಿಕಾರಿಗಳು ಉಪಸ್ಥಿತರಿದ್ದರು.