Advertisement

ಅಕ್ರಮ ಮರಳು ವಹಿವಾಟು: ಎಚ್ಚೆತ್ತ ತಾಲೂಕಾಡಳಿತ

09:59 PM Jun 27, 2021 | Shreeraj Acharya |

ಹೊಸನಗರ: ಸುತ್ತಾ ಗ್ರಾಮದಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿರುವ ಬಗ್ಗೆ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಸ್ಥಳಕ್ಕೆ ತೆರಳಿ ಆಕ್ರೋಶ ವ್ಯಕ್ತಪಡಿಸಿದ ಬೆನ್ನಲ್ಲೇ ತಾಲೂಕು ಆಡಳಿತ ಕೂಡ ಎಚ್ಚೆತ್ತುಕೊಂಡಿದೆ. ತಹಶೀಲ್ದಾರ್‌ ವಿ.ಎಸ್‌. ರಾಜೀವ್‌ ಸ್ಥಳಕ್ಕೆ ದೌಡಾಯಿಸಿದ್ದು ಪರಿಶೀಲನೆ ನಡೆಸಿದರು.

Advertisement

ಅಕ್ರಮ ಮರಳು ದಾಸ್ತಾನು ಮತ್ತು ಸಾಗಾಟದ ಬಗ್ಗೆ ಇರುವ ಆರೋಪದ ಕುರಿತಂತೆ ಪರಿಶೀಲನೆ ನಡೆಸಲಾಗುತ್ತಿದೆ. ಈ ವೇಳೆ ಮರಳು ದಾಸ್ತಾನು ಇರುವುದು ಕಂಡು ಬಂದಿದ್ದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಪತ್ರ ಬರೆಯಲಾಗಿದೆ. ಅಲ್ಲದೆ ಮರಳಿನ ಸೂಕ್ತ ರಕ್ಷಣೆಗಾಗಿ ಪೊಲೀಸ್‌ ಇಲಾಖೆಗೂ ಸೂಚಿಸಲಾಗಿದೆ ಎಂದರು. ಮಳೆಗಾಲ ಆರಂಭಗೊಂಡ ಹಿನ್ನೆಲೆಯಲ್ಲಿ ಈಗಾಗಲೇ ಸ್ಟಾಕ್‌ ಮಾಡಿರುವ ಮರಳನ್ನು ಅಕ್ರಮವಾಗಿ ಸಾಗಿಸಲಾಗುತ್ತಿದೆ ಎಂಬ ದೂರುಗಳು ಬಂದಿವೆ.

ಮರಳು ಅಕ್ರಮದಲ್ಲಿ ಯಾರೇ ಭಾಗಿಯಾಗಿದ್ದರೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು. ಸರ್ಕಾರಿ ಬಳಕೆಗೆಂದು ತೆರಯಲಾಗಿರುವ ಮರಳು ಕ್ವಾರಿಯಲ್ಲಿ ರಾಜಾರೋಷವಾಗಿ ಅಕ್ರಮವಾಗಿ ಮರಳು ದಾಸ್ತಾನು ಮತ್ತು ಸಾಗಾಟ ದಂಧೆ ನಡೆಯುತ್ತಿದೆ ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಆರೋಪಿಸಿದ್ದರು.

ಸುಮಾರು 2 ಸಾವಿರ ಲೋಡು ಮರಳನ್ನು ಅಕ್ರಮವಾಗಿ ದಾಸ್ತಾನು ಮಾಡಲಾಗಿದೆ. ಸ್ಥಳದಲ್ಲಿ ಯಾವುದೇ ಸಿಸಿ ಕ್ಯಾಮೆರಾ, ಬೇಲಿ ಮೊದಲಾದ ವ್ಯವಸ್ಥೆಗಳಿಲ್ಲ. ಮಾನದಂಡಗಳನ್ನು ಮೀರಿ ಯಂತ್ರಗಳನ್ನು ಬಳಸಿ ಮರಳು ಸಂಗ್ರಹಿಸಲಾಗುತ್ತಿದೆ ಎಂದು ಆಕ್ರೋಶ ಹೊರಹಾಕಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next