ಶಿವಮೊಗ್ಗ: ವಿದ್ಯಾರ್ಥಿಗಳಿಗಾಗಿ ವಿಶೇಷ ಲಸಿಕಾ ಅಭಿಯಾನವನ್ನು ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಜು.1 ರಿಂದ 3 ರ ವರೆಗೆ ಆಯೋಜಿಸಲಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಎಂಪಿಎಲ್ ನ್ಪೋರ್ಟ್ಸ್ ಫೌಂಡೇಷನ್, ಸೇವಾ ಭಾರತಿ ಕರ್ನಾಟಕ, ಪಿಇಎಸ್ ಶಿವಮೊಗ್ಗ, ಸಹ್ಯಾದ್ರಿ ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಹಯೋಗದಲ್ಲಿ ಜು. 1,2,3 ರಂದು ಶಿವಮೊಗ್ಗ ನಗರ ಹೊರತುಪಡಿಸಿ ಶಿವಮೊಗ್ಗ ಲೋಕಸಭೆ ಕ್ಷೇತ್ರದ ವ್ಯಾಪ್ತಿಯ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪಿಯು ಮತ್ತು ಪದವಿ ಕಾಲೇಜುಗಳಲ್ಲಿ 18 ವರ್ಷ ಮೇಲ್ಪಟ್ಟ ಸುಮಾರು 17 ಸಾವಿರಕ್ಕೂ ಅ ಧಿಕ ವಿದ್ಯಾರ್ಥಿಗಳಿಗೆ ಉಚಿತ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.
ಎಲ್ಲವನ್ನೂ ಸರ್ಕಾರವೇ ಮಾಡುವುದು ಕಷ್ಟಸಾಧ್ಯ. ಕೋವಿಡ್ ಸಂದರ್ಭದಲ್ಲಿ ಅನೇಕ ಸಂಘ-ಸಂಸ್ಥೆಗಳು ಅನೇಕ ರೀತಿಯ ಸಹಕಾರ ನೀಡಿವೆ. ಈಗ ಸೇವಾ ಭಾರತಿ ಹಾಗೂ ಪಿಇಎಸ್, ಎಂಪಿಎಲ್ ನ್ಪೋಟ್ Õì ಫೌಂಡೇಷನ್ ಸಹಯೋಗದಲ್ಲಿ ಅಭಿಯಾನ ನಡೆಯಲಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡಲು ತೀರ್ಮಾನಿಸಿದ್ದು, ಈಗಾಗಲೇ ಜಿಲ್ಲೆಯಲ್ಲಿ 4.48 ಲಕ್ಷ ಜನರಿಗೆ ಪ್ರಥಮ ಡೋಸ್ ನೀಡಲಾಗಿದೆ. 88,106 ಜನರಿಗೆ ಎರಡನೇ ಡೋಸ್ ನೀಡಲಾಗಿದೆ ಎಂದರು.
ಜು.1 ರಿಂದ ಮೂರು ದಿನಗಳ ಕಾಲ ಹಮ್ಮಿಕೊಂಡ ಈ ಲಸಿಕಾ ಅಭಿಯಾನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ವಿಡಿಯೋ ಕಾನ್ಫರೆನ್ಸ್ ಮೂಲಕ ಬೆಂಗಳೂರಿನಲ್ಲಿ ಚಾಲನೆ ನೀಡಲಿದ್ದು, ಪ್ರಾಯೋಜಿತ ಸಂಸ್ಥೆಯ ಎಲ್ಲರೂ ಉಪಸ್ಥಿತರಿರುವರು. ಎಲ್ಲಾ ಅನುದಾನಿತ, ಖಾಸಗಿ ಮತ್ತು ಸರ್ಕಾರಿ ಕಾಲೇಜುಗಳು ಈ ಅವಕಾಶ ಬಳಸಿಕೊಳ್ಳಬೇಕೆಂದು ತಿಳಿಸಿದರು.
ಪರಿಸರ ಹಾನಿ ಮಾಡಿ ಅಭಿವೃದ್ಧಿ ಇಲ್ಲ: ಇಎಸ್‌ಐ ಆಸ್ಪತ್ರೆ ಜಾಗದಲ್ಲಿ ಅಕ್ರಮವಾಗಿ ಮಣ್ಣು ಗಣಿಗಾರಿಕೆ ನಡೆದಿದೆ ಎಂಬ ಆರೋಪಕ್ಕೆ ಉತ್ತರಿಸಿದ ಅವರು, ಒಟ್ಟು 5 ಎಕರೆ ಜಾಗವನ್ನು ಇಎಸ್‌ಐ ಆಸ್ಪತ್ರೆಗೆ ಕಾಯ್ದಿರಿಸಿದ್ದು ಎರಡೂವರೆ ಎಕರೆಯಲ್ಲಿ ಕಟ್ಟಡಗಳ ನಿರ್ಮಾಣ ಮಾಡಲಾಗುತ್ತಿದೆ. ಪ್ಲಾÂನಿಂಗ್ ಪ್ರಕಾರ ಗುಡ್ಡದ ಬುಡಕ್ಕೆ ಯಾವುದೇ ರೀತಿಯ ಡ್ಯಾಮೇಜ್ ಆಗದ ರೀತಿಯಲ್ಲಿ ಆ್ಯಂಬುಲೆನ್ಸ್ ಓಡಾಡುವ ದೃಷ್ಟಿಯಿಂದ ಮಾತ್ರ ಸ್ವಲ್ಪ ಗುಡ್ಡವನ್ನು ಮೇಲ್ಭಾಗದಲ್ಲಿ ಕೊರೆದು ಸಮತಟ್ಟು ಮಾಡಲಾಗಿದ್ದು, ಪ್ರಕೃತಿ ಮತ್ತು ಪರಿಸರಕ್ಕೆ ಹಾನಿ ಮಾಡಿ ಯಾವುದೇ ಅಭಿವೃದ್ಧಿ ಕಾರ್ಯ ಮಾಡುವುದಿಲ್ಲ ಎಂದರು.
ಗೋಷ್ಠಿಯಲ್ಲಿ ಮೇಯರ್ ಸುನಿತಾ ಅಣ್ಣಪ್ಪ, ಉಪಮೇಯರ್ ಶಂಕರ್ ಗನ್ನಿ, ಪಿಇಎಸ್ ಕಾಲೇಜಿನ ಅ ಧಿಕಾರಿ ಆರ್. ನಾಗರಾಜ್, ಸಹ್ಯಾದ್ರಿ ನಾರಾಯಣ ಹೃದಯಾಲಯದ ಫ್ಯಾಕಲ್ಟಿ ಡೈರೆಕ್ಟರ್ ವರ್ಗೀಸ್, ಡಿಎಚ್‌ಒ ಡಾ| ರಾಜೇಶ್ ಸುರಗಿಹಳ್ಳಿ, ಪ್ರಮುಖರಾದ ಸುರೇಂದ್ರ, ಜಗದೀಶ್, ಸೇವಾ ಭಾರತಿಯ ಡಾ|ರವಿಕಿರಣ್, ಆರ್.ಎಸ್.ಎಸ್. ಮುಖಂಡ ಯಾದವ್ ಕೃಷ್ಣ, ಸಂತೋಷ್ ಬಳ್ಳೆಕೆರೆ ಮೊದಲಾದವರಿದ್ದರು.