Advertisement
ವಸತಿ ಸೌಲಭ್ಯಕ್ಕೆ ಮನವಿ: ದಮನಿತರು ಮತ್ತು ಲಿಂಗತ್ವ ಅಲ್ಪಸಂಖ್ಯಾತರಿಗೆ ಮನೆಗಳನ್ನು ಕಟ್ಟಿಕೊಳ್ಳಲು ಜಾಗ ನೀಡುವಂತೆ ನಿಗಮದ ವತಿಯಿಂದ ಪ್ರತಿ ಜಿಲ್ಲೆಯ ಜಿಲ್ಲಾಧಿ ಕಾರಿಗಳಿಗೆ ಪತ್ರ ಬರೆದು ಮನವಿ ಮಾಡಲಾಗಿದೆ. ಶಿವಮೊಗ್ಗ ಜಿಲ್ಲಾಧಿಕಾರಿಗಳು ಅತ್ಯಂತ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದು, 5 ಎಕರೆ ಜಾಗ ನೀಡಲು ಒಪ್ಪಿದ್ದಾರೆ. ಶಿವಮೊಗ್ಗ ನಗರದಲ್ಲಿ ಸುಮಾರು 300 ದಮನಿತ ಮಹಿಳೆಯರು ಮತ್ತು 600 ಲಿಂಗತ್ವ ಅಲ್ಪಸಂಖ್ಯಾತರಿದ್ದು, ಇವರು ಸ್ವಾವಲಂಬಿಗಳಾಗಿ ಮತ್ತು ಗೌರವಯುತವಾಗಿ ಜೀವಿಸಲು ಸರ್ಕಾರ ಅನೇಕ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದ್ದು, ಲಿಂಗತ್ವ ಅಲ್ಪಸಂಖ್ಯಾತರು ಇದರ ಪ್ರಯೋಜನ ಪಡೆದು ಭಿûಾಟನೆ ಮಾಡದಂತೆ ಮನವಿ ಮಾಡುತ್ತೇನೆ ಎಂದರು.
Related Articles
Advertisement
ಲೀಡ್ ಬ್ಯಾಂಕ್ ಮ್ಯಾನೇಜರ್‌ರವರ ಸಹಕಾರವೂ ಇದಕ್ಕೆ ಅಗತ್ಯವಾಗಿದ್ದು, ಶಾಸಕರಿಂದ ನಿಗದಿತ ಅವ ಧಿಯಲ್ಲಿ ಫಲಾನುಭವಿಗಳ ಆಯ್ಕೆಯ ಅನುಮೋದನೆ ಪಡೆದುಕೊಂಡು ಆಯಾ ಸಾಲಿನಲ್ಲೇ ಸೌಲಭ್ಯ ಸಿಗುವಂತೆ ಕ್ರಮ ಕೈಗೊಳ್ಳಬೇಕೆಂದು ಅ ಧಿಕಾರಿಗಳಿಗೆ ಸೂಚನೆ ನೀಡಿದರು. ಮಹಿಳಾ ಅಭಿವೃದ್ಧಿ ಇಲಾಖೆಯ ಕಾರ್ಯಕ್ರಮ ಅಧಿಕಾರಿ ಸುರೇಶ್ ಸಿ. ನಿಗಮದ ವಿವಿಧ ಯೋಜನೆಗಳ ಕುರಿತು ಪ್ರಗತಿ ವರದಿ ಹಾಗೂ ತಾಲೂಕುಗಳ ಸಿಡಿಪಿಒ ಗಳು ತಾಲೂಕುಗಳ ಪ್ರಗತಿ ವರದಿ ಸಲ್ಲಿಸಿದರು.
ಲಿಂಗತ್ವ ಅಲ್ಪಸಂಖ್ಯಾತರೋರ್ವರು ಮಾತನಾಡಿ, ತಮ್ಮ ಸಮುದಾಯದಲ್ಲಿ ಕೆಲವರು ಒಟ್ಟಾಗಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದೇವೆ. ವೈಯಕ್ತಿಕವಾಗಿ ವಸತಿ ಸೌಲಭ್ಯ ಒದಗಿಸುವಂತೆ ಕಳೆದ 15 ವರ್ಷಗಳಿಂದ ಜಿಲ್ಲಾ ಧಿಕಾರಿಗಳಿಗೆ ಮನವಿ ಮಾಡುತ್ತಾ ಬಂದಿದ್ದೇವೆ. ಇದುವರೆಗೆ ಸೌಲಭ್ಯ ದೊರೆತಿಲ್ಲ. ಹಾಗೂ ನಮಗೆ ಸರ್ಕಾರಿ ಕಚೇರಿಗಳಲ್ಲಿ ಕೆಲಸ ನೀಡಬೇಕು. ಟ್ರಾನ್ಸ್‌ಜೆಂಡರ್‌ಗಳಿಗೆ ಕಚೇರಿಗಳಲ್ಲಿ ಸಹಾಯಕರು ಅಥವಾ ಇತರೆ ಕೆಲಸಗಳನ್ನು ನೀಡಲು ಸರ್ಕಾರಿ ಕಚೇರಿಗಳ ಅ ಧಿಕಾರಿಗಳು ಆದ್ಯತೆ ನೀಡಬೇಕೆಂದು ಮನವಿ ಮಾಡಿದರು.
ಇದೇ ಸಂದರ್ಭದಲ್ಲಿ ಅಧ್ಯಕ್ಷರು ಲಿಂಗತ್ವ ಅಲ್ಪಸಂಖ್ಯಾತರು ಹಾಗೂ ದಮನಿತ ಮಹಿಳೆಯರಿಗೆ ಸಾಲ ಸೌಲಭ್ಯ ಪ್ರಮಾಣ ಪತ್ರ ವಿತರಿಸಿದರು. ಜಿಲ್ಲಾ ಪಂಚಾಯತ್ ಸಿಇಒ ಎಂ.ಎಲ್. ವೈಶಾಲಿ, ಉಪ ಕಾರ್ಯದರ್ಶಿ ಜಯಲಕೀ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಸುರೇಶ್.ಜಿ, ಲೀಡ್ ಬ್ಯಾಂಕ್ ಮ್ಯಾನೇಜರ್ ಯತೀಶ್ ಎಂ.ಡಿ ಸೇರಿದಂತೆ ವಿವಿಧ ಅಧಿಕಾರಿ, ಸಿಬ್ಬಂದಿ ಹಾಜರಿದ್ದರು.