Advertisement

ಕಳಪೆ ಕಾಮಗಾರಿ ಪರಿಶೀಲಿಸಲು ಸಮಿತಿ ರಚನೆ

10:42 PM Jul 06, 2021 | Shreeraj Acharya |

ಶಿವಮೊಗ್ಗ: ಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ ಬಳಿ ಕೈಗೊಳ್ಳಲಾಗಿರುವ ಕಾಮಗಾರಿ ಗುಣಮಟ್ಟದ ಬಗ್ಗೆ ಬಂದಿರುವ ಆರೋಪಗಳ ಬಗ್ಗೆ ಪರಿಶೀಲಿಸಿ ವರದಿ ಸಲ್ಲಿಸಲು ಮೂವರು ಸದಸ್ಯರ ಸಮಿತಿ ರಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ. ಎಸ್‌. ಈಶ್ವರಪ್ಪ ಹೇಳಿದರು.

Advertisement

ಸೋಮವಾರ ಭದ್ರಾ ಮೇಲ್ದಂಡೆ ಯೋಜನೆಯ ಕ್ರಸ್ಟ್‌ ಗ್ರೇಟ್‌ ಬಳಿ ಭೇಟಿ ನೀಡಿ ಸ್ಥಳ ಪರಿಶೀಲಿಸಿದ ಬಳಿಕ ಮಾತನಾಡಿದ ಅವರು, 2016-18 ನೇ ಸಾಲಿನಲ್ಲಿ 6.50 ಕೋಟಿ ರೂ. ವೆಚ್ಚದಲ್ಲಿ ದುರಸ್ತಿ ಕಾಮಗಾರಿ ಕೈಗೊಳ್ಳಲಾಗಿತ್ತು. 2018 ರಲ್ಲಿ ಡ್ಯಾಮ್‌ ನಿಂದ ನೀರು ಹೊರಬಿಟ್ಟಾಗ ಕಾಮಗಾರಿ ಮತ್ತೆ ದುರಸ್ತಿ ಹಂತ ತಲುಪಿತು.

ಈ ಕುರಿತು ಸ್ಥಳೀಯರು ಮತ್ತು ರೈತ ಸಂಘಟನೆಗಳು 2016ರ ಕಾಮಗಾರಿ ಕಳಪೆಯದಾಗಿದ್ದು, ಇದರಲ್ಲಿ ಭಾಗಿಯಾಗಿದ್ದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಈ ನಿಟ್ಟಿನಲ್ಲಿ ಮೂವರು ನಿವೃತ್ತ ಇಂಜಿನಿಯರುಗಳ ಸಮಿತಿ ರಚಿಸಲಾಗಿದ್ದು, ಅವರು ಪರಿಶೀಲಿಸಿ ಕಾಮಗಾರಿ ಕಳಪೆಯದೋ ಅಥವಾ ಇದೊಂದು ನೈಸರ್ಗಿಕ ಅವಘಡವೋ ಎಂದು ವರದಿ ನೀಡಲಿದ್ದಾರೆ. ಅನಂತರ ವರದಿ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಧಿಕಾರಿ ಕೆ.ಬಿ. ಶಿವಕುಮಾರ್‌, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕರು, ರೈತ ಸಂಘಟನೆಗಳ ಕಾರ್ಯಕರ್ತರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next