ಶಿವಮೊಗ್ಗ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಬೆಲೆ ಏರಿಕೆ ವಿರೋ ಧಿಸಿ ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್‌ನಿಂದ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು.
ಅಡುಗೆ ಅನಿಲ ಸಿಲಿಂಡರ್, ಪೆಟ್ರೋಲ್, ಡೀಸೆಲ್, ಖಾಸಗಿ ಬಸ್ ಪ್ರಯಾಣ ದರ, ವಿದ್ಯುತ್ ಬೆಲೆಗಳು ಗಗನಕ್ಕೇರಿವೆ. ಜನಸಾಮಾನ್ಯರು ಜೀವನ ನಡೆಸುವುದೇ ಕಷ್ಟವಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈ ಬಗ್ಗೆ ತಲೆ ಕೆಡಿಸಿಕೊಳ್ಳುತ್ತಿಲ್ಲ.
ಆದ್ದರಿಂದ ಈ ಸರ್ಕಾರಗಳನ್ನು ವಜಾಗೊಳಿಸಿ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸಬೇಕೆಂದು ಟ್ರಸ್ಟ್ ಸದಸ್ಯರು ಒತ್ತಾಯಿಸಿದರು.
ಕೊರೊನಾ ನಿಯಂತ್ರಿಸುವಲ್ಲಿ ಕೂಡ ಕೇಂದ್ರ ಸರ್ಕಾರ ವಿಫಲವಾಗಿದೆ. ಪ್ರಾರಂಭದಲ್ಲಿ ಅವಶ್ಯಕತೆ ಇದ್ದರೂ ಸಹ ಲಸಿಕೆಯನ್ನು ಹೊರ ದೇಶಕ್ಕೆ ರಫ್ತು ಮಾಡಲಾಗಿತ್ತು. ಅಲ್ಲದೇ, ದುಡಿಯುವ ಕೈಗಳಿಗೆ ಲಾಕ್‌ಡೌನ್ ನಿಂದಾಗಿ ಕೆಲಸವೂ ಇರಲಿಲ್ಲ.
ಜೀವನ ನಡೆಸುವುದೇ ದುಸ್ತರವಾಗಿದ್ದು, ಈಗ ಬೆಲೆ ಏರಿಕೆ ಮಾಡಿ ಜನರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಿದೆ. ಆದ್ದರಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ವಜಾಗೊಳಿಸಬೇಕೆಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಟ್ರಸ್ಟ್ ನ ವ್ಯವಸ್ಥಾಪಕ ಟ್ರಸ್ಟಿ ಕಲ್ಲೂರು ಮೇಘರಾಜ್ ಪದಾ ಧಿಕಾರಿಗಳಾದ ಹೊಳೆಮಡಿಲು ವೆಂಕಟೇಶ್, ಎಚ್.ಎಂ. ಸಂಗಯ್ಯ, ಎಸ್.ವಿ. ರಾಜಮ್ಮ, ಶಂಕ್ರಾನಾಯ್ಕ, ಗೋಪಾಲಕೃಷ್ಣ, ಆದಿಶೇಷ, ಶ್ರೀಧರ್ ಸೇರಿದಂತೆ ಹಲವರಿದ್ದರು.