Advertisement

ರೈತ ಸಂಘ- ಹಸಿರು ಸೇನೆಯಿಂದ ಸತ್ಯಾಗ್ರಹ

05:49 PM Jan 31, 2021 | Shreeraj Acharya |

ಶಿವಮೊಗ್ಗ: ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟ ಬೆಂಬಲಿಸಿ ಮಹಾತ್ಮ ಗಾಂ ಧೀಜಿ ಪುಣ್ಯತಿಥಿ ದಿನ ರಾಜ್ಯ ರೈತ ಸಂಘ ಹಸಿರು ಸೇನೆ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ನಗರದ ಗಾಂಧಿ ಪಾರ್ಕ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸಿದರು.

Advertisement

ನೇತೃತ್ವ ವಹಿಸಿದ್ದ ರಾಜ್ಯ ರೈತ ಸಂಘದ ನಾಯಕ ಎಚ್‌.ಆರ್‌. ಬಸವರಾಜಪ್ಪ ಮಾತನಾಡಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ತಿದ್ದುಪಡಿ ಕಾಯ್ದೆಗಳನ್ನು ರದ್ದುಗೊಳಿಸುವವರೆಗೂ ರೈತರ ಹೋರಾಟ ಮುಂದುವರೆಯಲಿದೆ ಎಂದು ಹೇಳಿದರು. ರೈತರಿಗೆ ಮಾರಕವಾದ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ನಿರಂತರವಾಗಿ ಹೋರಾಟ ನಡೆಸುತ್ತಿದ್ದರೂ ಸರ್ಕಾರ ಸರಿಯಾಗಿ ಸ್ಪಂದಿಸಿಲ್ಲ. ಹಿಂಸೆಗೆ ಪ್ರಚೋದಿಸಿದರೆ ಪ್ರತಿಭಟನೆಗೆ ಹತ್ತಿಕ್ಕಬಹುದು ಎಂಬ ಉದ್ದೇಶದಿಂದ ಗಣರಾಜ್ಯೋತ್ಸವದ ದಿನ ಟ್ರಾಕ್ಟರ್‌ ರ್ಯಾಲಿ ನಡೆಯುವಾಗ ಹಿಂಸಾಚಾರ ನಡೆಸಲಾಗಿದೆ ಎಂದು ದೂರಿದರು.

ರಾಜ್ಯ ಮತ್ತು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರೈತ ವಿರೋ ಧಿ ಕಾಯ್ದೆಗಳನ್ನು ಹಿಂಪಡೆಯುವಂತೆ ಹೋರಾಟ ಮುಂದುವರೆಸಲಾಗಿದೆ. ಚರ್ಚೆಗಾಗಿ ಹಲವು ಸಲ ಸಭೆ ನಡೆಸಿದ್ದರೂ ಸರ್ಕಾರ ಕಾಯ್ದೆ ಹಿಂಪಡೆಯಲು ಸಮ್ಮತಿಸಿಲ್ಲ. ಅಂಬಾನಿ ಅದಾನಿಯಂತಹ ಕಂಪನಿಗಳಿಗೆ ಅನುಕೂಲವಾಗುವಂತಹ ಕಾಯ್ದೆಗಳನ್ನು ರೂಪಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸತ್ಯಾಗ್ರಹದಲ್ಲಿ ಎನ್‌.ರಮೇಶ್‌, ಕೆ.ಎಲ್‌. ಅಶೋಕ್‌, ಟಿ.ಎಚ್‌. ಹಾಲೇಶಪ್ಪ, ಚಂದ್ರಪ್ಪ, ಶಿವಮೂರ್ತಿ, ಈಶಣ್ಣ, ಸೇರಿದಂತೆ ಹಲವರು ಹಾಜರಿದ್ದರು.

ಓದಿ : ಪೌರಕಾರ್ಮಿಕರಿಗೆ ಊಟ ಬಡಿಸಿದ ಸದಸ್ಯರು

Advertisement

Udayavani is now on Telegram. Click here to join our channel and stay updated with the latest news.

Next