Advertisement

ಗ್ರಾಮಾಭಿವೃದ್ಧಿ ಗ್ರಾಪಂಗಳ ಜವಾಬ್ದಾರಿ

10:12 PM Jul 11, 2021 | Shreeraj Acharya |

ಶಿವಮೊಗ್ಗ: ಗ್ರಾಮೀಣ ಪ್ರದೇಶಗಳಲ್ಲಿ ಮೂಲಸೌಲಭ್ಯಗಳನ್ನು ಕಲ್ಪಿಸಿ ಸ್ಥಳೀಯರಿಗೆ ಉದ್ಯೋಗ ನೀಡುವ ಜವಾಬ್ದಾರಿ ಆಯಾ ಗ್ರಾಮ ಪಂಚಾಯತ್‌ಗಳದ್ದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್‌.ಈಶ್ವರಪ್ಪ ಅವರು ತಿಳಿಸಿದರು.

Advertisement

ಇಲ್ಲಿನ ಪ್ರೇರಣಾ ಸಭಾಂಗಣದಲ್ಲಿ ಶನಿವಾರ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್‌ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಪಿಡಿಒಗಳಿಗೆ ಆಯೋಜಿಸಲಾಗಿದ್ದ ಒಂದು ದಿನದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ಗ್ರಾಮಗಳಲ್ಲಿ ಕೈಗೊಳ್ಳಬೇಕಾದ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಆಯಾ ಗ್ರಾಮ ಪಂಚಾಯತ್‌ ಜನಪ್ರತಿನಿ ಧಿಗಳು ಹಾಗೂ ಅಧಿ ಕಾರಿಗಳು ಕುಳಿತು ಚರ್ಚಿಸಿ ಅಂತಿಮಗೊಳಿಸಬೇಕು. ಗ್ರಾಮವನ್ನು ಕುಟುಂಬ ಎಂದು ಪರಿಗಣಿಸಿ ಅಭಿವೃದ್ಧಿ ಕಾರ್ಯಗಳ ಅನುಷ್ಠಾನಗೊಳಿಸಬೇಕು. ಗ್ರಾಮದಲ್ಲಿ ಕೆಲಸ ಕೇಳಿಕೊಂಡು ಬರುವ ಪ್ರತಿಯೊಬ್ಬರಿಗೂ ಮಹಾತ್ಮಾ ಗಾಂಧಿ  ಉದ್ಯೋಗ ಖಾತ್ರಿ ಯೋಜನೆಯಡಿ ಉದ್ಯೋಗ ಕಲ್ಪಿಸಬೇಕು ಎಂದು ಹೇಳಿದರು.

ಗ್ರಾಮದ ಕೆರೆ ಕಟ್ಟೆಗಳ ಅಭಿವೃದ್ಧಿ ಜವಾಬ್ದಾರಿಯನ್ನೂ ಇದೀಗ ಗ್ರಾಮ ಪಂಚಾಯತ್‌ಗಳಿಗೆ ನೇರವಾಗಿ ವಹಿಸಲಾಗಿದೆ. ಪ್ರತಿಯೊಂದು ಗ್ರಾಮ ಪಂಚಾಯತ್‌ ತಮ್ಮ ವ್ಯಾಪ್ತಿಯಲ್ಲಿರುವ ಕೆರೆಗಳನ್ನು ಗುರುತಿಸಿ ಅವುಗಳನ್ನು ಆದ್ಯತೆ ಮೇರೆಗೆ ಅಭಿವೃದ್ಧಿ ಪಡಿಸಬೇಕು. ಇದೀಗ ಪ್ರತಿ ಗ್ರಾಮ ಪಂಚಾಯತ್‌ಗಳ ವ್ಯಾಪ್ತಿಯಲ್ಲಿ ಘನತ್ಯಾಜ್ಯ ಘಟಕಗಳನ್ನು ನಿರ್ಮಿಸಲಾಗುತ್ತಿದೆ. ಕಸ ವಿಲೇವಾರಿಯನ್ನು ಸಮರ್ಪಕವಾಗಿ ಅನುಷ್ಟಾನಗೊಳಿಸುವುದು ಗ್ರಾಮ ಪಂಚಾಯತ್‌ಗಳ ಜವಾಬ್ದಾರಿ.

ಸ್ವತ್ಛ ಭಾರತ್‌ ಯೋಜನೆಯಡಿ ಎಸ್‌ಸಿ/ಎಸ್‌ಟಿ ಫಲಾನುಭವಿಗಳಿಗೆ ಶೌಚಾಲಯ ನಿರ್ಮಾಣಕ್ಕಾಗಿ ನೀಡುವ ಸಹಾಯಧನವನ್ನು 20 ಸಾವಿರ ರೂ. ಗಳಿಗೆ ಹೆಚ್ಚಿಸಲಾಗಿದೆ. ಇದರ ಸದುಪಯೋಗ ಪಡೆದುಕೊಳ್ಳುವಂತೆ ಅವರು ಮನವಿ ಮಾಡಿದರು. ಲೋಕಸಭಾ ಸದಸ್ಯ ಬಿ.ವೈ. ರಾಘವೇಂದ್ರ ಮಾತನಾಡಿ, ಕೇಂದ್ರ ಸರ್ಕಾರ ಗ್ರಾಮಗಳಲ್ಲಿ ರಸ್ತೆ, ಕುಡಿಯುವ ನೀರು ಸೇರಿದಂತೆ ಮೂಲಸೌಲಭ್ಯಗಳನ್ನು ಕಲ್ಪಿಸಲು ಸಾಕಷ್ಟು ಅನುದಾನ ಬಿಡುಗಡೆ ಮಾಡುತ್ತಿದೆ. ಉದ್ಯೋಗ ಖಾತ್ರಿ ಯೋಜನೆಯಡಿ ರಾಜ್ಯಕ್ಕೆ 2256 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಈ ರೀತಿಯ ಕಾರ್ಯಾಗಾರಗಳ ಮೂಲಕ ಯೋಜನೆಗಳ ಸಮರ್ಪಕ ಅನುಷ್ಟಾನ ಸಾಧ್ಯವಾಗಲಿದೆ ಎಂದು ಅವರು ಹೇಳಿದರು.

ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿ ಕಾರಿ ಎಂ.ಎಲ್‌. ವೈಶಾಲಿ ಅವರು ಸ್ವಾಗತಿಸಿ, ಜಿಲ್ಲೆಯ 271 ಗ್ರಾಮ ಪಂಚಾಯತ್‌ಗಳ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪಿಡಿಒಗಳಿಗೆ ಗ್ರಾ.ಪಂ. ಹಂತದಲ್ಲಿ ಅನುಷ್ಟಾನಗೊಳಿಸುವ ಯೋಜನೆಗಳ ಕುರಿತು ಕಾರ್ಯಾಗಾರದಲ್ಲಿ ಮಾಹಿತಿ ನೀಡಲಾಗುತ್ತಿದೆ ಎಂದರು.

Advertisement

ಶಾಸಕರಾದ ಹರತಾಳು ಹಾಲಪ್ಪ, ಆಯನೂರು ಮಂಜುನಾಥ್‌, ಪ್ರಸನ್ನ ಕುಮಾರ್‌, ರುದ್ರೇಗೌಡ, ಸೂಡಾ ಅಧ್ಯಕ್ಷ ಜ್ಯೋತಿ ಪ್ರಕಾಶ್‌, ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ ಮತ್ತಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next