Advertisement
ಮಂಗಳವಾರ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪೂರ್ವಸಿದ್ದತಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಕೊರೊನಾ ಹಿನ್ನೆಲೆಯಲ್ಲಿ ಕಳೆದ ಬಾರಿಯೂ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಗಿತ್ತು. ಈ ಬಾರಿಯೂ ಪರೀಕ್ಷೆ ನಡೆಸಲು ಎಲ್ಲ ಸಿದ್ಧತೆ ಕೈಗೊಳ್ಳಲಾಗಿದೆ. ಮಕ್ಕಳು ನಿರಾತಂಕವಾಗಿ ಪರೀಕ್ಷೆ ಎದುರಿಸುವ ವಾತಾವರಣ ನಿರ್ಮಿಸಲು ಮುಂದಾಗಲಾಗಿದೆ ಎಂದರು.
Related Articles
Advertisement
ಆರು ಅಡಿ ಅಂತರ ಕಡ್ಡಾಯ: ಪ್ರತಿ ಕೇಂದ್ರದಲ್ಲೂ ಆರು ಅಡಿ ಅಥವಾ 2 ಮೀಟರ್ ದೈಹಿಕ ಅಂತರ ಕಾಯ್ದುಕೊಳ್ಳಲು ಸೂಕ್ತ ವ್ಯವಸ್ಥೆ ಮಾಡುವಂತೆ ಬಿಇಒ ರವರಿಗೆ ಸೂಚಿಸಲಾಗಿದೆ. ಒಂದು ಡೆಸ್ಕ್ಗೆ ಒಬ್ಬ ವಿದ್ಯಾರ್ಥಿಯಂತೆ ಒಂದು ಕೊಠಡಿಯಲ್ಲಿ ಗರಿಷ್ಟ 12 ಮಕ್ಕಳು ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದ್ದು, ಗ್ರಾಮೀಣ ಭಾಗದ ವಿದ್ಯಾರ್ಥಿಗಳು ತಾಲೂಕು ಕೇಂದ್ರಕ್ಕೆ ಹೋಗದಂತೆ ಪರೀûಾ ಕೇಂದ್ರ ರಚಿಸಲು ಸೂಚಿಸಲಾಗಿದೆ.
ಮುಂಚಿತವಾಗಿ ಸೂಚನೆ: ಆಸನ ವ್ಯವಸ್ಥೆ ಬಗ್ಗೆ ಮುಂಚಿತವಾಗಿ ತಿಳಿಸುವುದರಿಂದ ಮಕ್ಕಳು ಸೂಚನಾ ಫಲಕದ ಮುಂದೆ ಗುಂಪುಗೂಡುವುದನ್ನು ತಡೆಗಟ್ಟಬಹುದಾಗಿದ್ದು, ಇದರ ವ್ಯವಸ್ಥೆ ಮಾಡಲಾಗಿದೆ. ಹಾಗೂ ಪರೀûಾ ವಿವರಗಳ ಸೂಚನೆಗಳನ್ನು ಕೇಂದ್ರದ ಎರಡು ಮೂರು ಕಡೆ ಪ್ರಕಟಿಸಲು ತಿಳಿಸಲಾಗಿದೆ. ವಿದ್ಯಾರ್ಥಿಗಳು ಮನೆಯಿಂದ ನೀರಿನ ಬಾಟಲಿ ಮತ್ತು ಅಪೇಕ್ಷೆ ಪಟ್ಟಲ್ಲಿ ಮನೆಯಿಂದ ಆಹಾರದ ಡಬ್ಬಿ ತರಲು ಅವಕಾಶವಿದೆ. ಕೇಂದ್ರಕ್ಕೆ ಬರಲು ಸಾರಿಗೆ ಸಂಪರ್ಕ ತೊಂದರೆ ಇರುವ ಮಕ್ಕಳನ್ನು ಗುರುತಿಸಿ ಕರೆತರಲು ವ್ಯವಸ್ಥೆ ಮಾಡುವಂತೆ ಬಿಇಒಗಳಿಗೆ ಸೂಚಿಸಿದರು.
ವಿಶೇಷ ಮತ್ತು ಕಾಯ್ದಿರಿಸಿದ ಕೇಂದ್ರ: ಕೆಮ್ಮು, ನೆಗಡಿ, ಜ್ವರ ಮೊದಲಾದ ಲಕ್ಷಣಗಳಿರುವ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ಕನಿಷ್ಟ ಎರಡು ಕೊಠಡಿಗಳನ್ನು ವಿಶೇಷ ಕೊಠಡಿಗಳೆಂದು ಹೆಸರಿಸಿ ಕಾಯ್ದಿರಿಸಲಾಗುವುದು. ಹಾಗೂ ತಾಲೂಕಿನ ಕೇಂದ್ರ ಸ್ಥಾನ ಮತ್ತು ಜಿಲ್ಲಾ ಕೇಂದ್ರ ಸ್ಥಾನಗಳಲ್ಲಿ ಕನಿಷ್ಟ ಎರಡು ಹೆಚ್ಚುವರಿ ಕೇಂದ್ರಗಳನ್ನು ಗುರುತಿಸಿ ಅವುಗಳನ್ನು “ಕಾಯ್ದಿರಿಸಿದ ಕೇಂದ್ರಗಳಾಗಿ ಇಡಲಾಗುವುದು. ಕೆಮ್ಮು ನೆಗಡಿ, ಜ್ವರ ಲಕ್ಷಣಗಳಿರುವ ವಿದ್ಯಾರ್ಥಿಗಳಿಗೆ ತಪಾಸಣೆಗೂ ಮುನ್ನ ಕಡ್ಡಾಯವಾಗಿ ಎನ್95 ಮಾಸ್ಕ್ ನೀಡಲಾಗುವುದು. ಪ್ರತಿ ತಾಲೂಕಿನಲ್ಲಿ ಒಂದು ಆ್ಯಂಬುಲೆನ್ಸ್ ಸೇವೆಗೆ ಸಜ್ಜಾಗಿಡುವಂತೆ ಡಿಎಚ್‌ಒ ಅವರಿಗೆ ಸೂಚನೆ ನೀಡಿದರು.
ಆಕ್ಸಿಜನ್ ಸ್ಯಾಚುರೇಷನ್ ಮಟ್ಟ ಶೇ.94 ಗಿಂತ ಕಡಿಮೆ ಇದ್ದಲ್ಲಿ ಅಂತಹ ವಿದ್ಯಾರ್ಥಿಗಳನ್ನು ಮುಂದಿನ ವೈದ್ಯಕೀಯ ಚಿಕಿತ್ಸೆಗೆ ಕಳುಹಿಸಲಾಗುವುದು. ಕೆಮ್ಮು ನೆಗಡಿ, ಜ್ವರ ಇದ್ದು ಆಕ್ಸಿಜನ್ ಸ್ಯಾಚುರೇಷನ್ ಶೇ.94 ಕ್ಕಿಂತ ಕಡಿಮೆ ಇದ್ದಲ್ಲಿ “ವಿಶೇಷ ಕೊಠಡಿ’ಯಲ್ಲಿ ಕೂಡ್ರಿಸಿ ಪರೀಕ್ಷೆ ನಡೆಸಲಾಗುವುದು. ಒಂದು ವೇಳೆ ವಿದ್ಯಾರ್ಥಿ ಈಗಾಗಲೇ ಕೋವಿಡ್ ಪಾಸಿಟಿವ್ ಇದ್ದು ಗೈರಾದಲ್ಲಿ ಅಂತಹ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಯಲ್ಲಿ ಬರೆಯಲು ಅವಕಾಶ ನೀಡಿ ಅದನ್ನು ಪ್ರಥಮ ಅವಕಾಶವೆಂದು ಪರಿಗಣಿಸಲಾಗುವುದು. ಮೇಲ್ವಿಚಾರಕರು ಕಡ್ಡಾಯವಾಗಿ ಮಾಸ್ಕ್ ಮತ್ತು ಫೇಸ್‌ಶೀಲ್ಡ್ ಹಾಕಿಕೊಳ್ಳಬೇಕು. ಮಕ್ಕಳಿಗೆ ನೀರು ಕುಡಿಯಲು ಬಳಸಿ ಬಿಸಾಡಬಹುದಾದ ಲೋಟಗಳ ವ್ಯವಸ್ಥೆ ಮಾಡಬೇಕು. ಶೌಚಾಲಯಲ್ಲಿ ಲಿಕ್ವಿಡ್ ಸೋಪ್ ಇಡಬೇಕು. ಹಾಗೂ ವಿಕಲಚೇತನ ಮಕ್ಕಳಿಗೆ ಉತ್ತಮ ಆಸನ ವ್ಯವಸ್ಥೆ ಮಾಡಬೇಕು.
ಕ್ಷೇತ್ರ ಶಿಕ್ಷಣಾಧಿಕಾರಿಗಳು ಎಲ್ಲಾ ಕೇಂದ್ರಗಳಿಗೆ ಭೇಟಿ ನೀಡಿ ವ್ಯವಸ್ಥೆಗಳ ಪರಿಶೀಲನೆ ನಡೆಸಬೇಕು ಎಂದರು. ಡಿಡಿಪಿಐ ಎನ್.ಎಂ. ರಮೇಶ್ ಮಾತನಾಡಿ, ಎಲ್ಲ ಪರೀûಾ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುವ ಮುಖ್ಯ ಅಧೀಕ್ಷಕರು, ಕೊಠಡಿ ಮೇಲ್ವಿಚಾರಕರು, ಸಿಬ್ಬಂದಿ, ಮಾರ್ಗಾಧಿ ಕಾರಿಗಳು, ಸ್ಥಾನಿಕ ಜಾಗೃತ ದಳದ ಅಧಿ ಕಾರಿಗಳು, ವೀಕ್ಷಕರು ಹಾಗೂ ಅಗತ್ಯ ಸಿಬ್ಬಂದಿ ನೇಮಕಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದರು.
ಲಸಿಕೆ ಮತ್ತು ಕೋವಿಡ್ ಪರೀಕ್ಷೆ ಕಡ್ಡಾಯ: ಕಾರ್ಯದಲ್ಲಿ ಪಾಲ್ಗೊಳ್ಳುವ ಅ ಧಿಕಾರಿಗಳು, ಶಿಕ್ಷಕರು ಮತ್ತು ಸಿಬ್ಬಂದಿ ಕನಿಷ್ಟ ಒಂದು ಡೋಸ್ ಲಸಿಕೆ ಪಡೆದಿರಬೇಕು ಹಾಗೂ ಆ ಸಂದರ್ಭಕ್ಕೆ ಅನುಗುಣವಾಗಿ ಆರ್.ಎ.ಟಿ ಅಥವಾ ಆರ್.ಟಿ.ಪಿ.ಸಿ.ಆರ್ ಟೆಸ್ಟ್ ಮಾಡಿಸಿಕೊಳ್ಳಬೇಕು. ಪಾಸಿಟಿವ್ ಬಂದರೆ ಅಂತಹವರು ಪರೀಕ್ಷೆ ವೇಳೆ ಕರ್ತವ್ಯಕ್ಕೆ ಹಾಜರಾಗುವಂತಿಲ್ಲ. ಬದಲಿ ವ್ಯವಸ್ಥೆ ಮಾಡಲಾಗುವುದು. ಪರೀûಾ ಕಾರ್ಯಕ್ಕೆ 3967 ಸಿಬ್ಬಂದಿಗಳನ್ನು ನಿಯೋಜಿಸಿದ್ದು ಇವರೆಲ್ಲರೂ ಪ್ರಥಮ ಡೋಸ್ ಲಸಿಕೆ ಪಡೆದಿದ್ದು ಈ ಪೈಕಿ 746 ಮಂದಿ ಎರಡನೇ ಡೋಸ್ ಸಹ ಪಡೆದಿದ್ದಾರೆ ಎಂದು ತಿಳಿಸಿದರು.
ಜುಲೈ 14 ಮತ್ತು 15 ರಂದು ಅಣಕು ಪರೀಕ್ಷೆ : ಸರ್ಕಾರ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜು.14 ಮತ್ತು 15 ರಂದು ಅಣಕು ಪರೀಕ್ಷೆ ನಡೆಸಲು ತಿಳಿಸಿದ್ದು, ಅಣಕು ಪರೀಕ್ಷೆ ಕಡ್ಡಾಯವಲ್ಲ ಎಂಬುದನ್ನೂ ಸೂಚಿಸಿದೆ. ಆದ್ದರಿಂದ ಸ್ವಯಂ ಆಸಕ್ತಿಯಿಂದ ಪರೀಕ್ಷೆ ಬರೆಯಲು ಮುಂದೆ ಬರುವ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಸಲಾಗುವುದು ಎಂದರು.
ಅಪರ ಜಿಲ್ಲಾ ಧಿಕಾರಿ ಅನುರಾಧಾ ಜಿ. ಮಾತನಾಡಿ, ಪ್ರತಿ ತಾಲೂಕು ಕೇಂದ್ರಕ್ಕೆ ಒಂದು ಕೋವಿಡ್ ಕೇರ್ ಸೆಂಟರ್ ಗುರುತಿಸಲಾಗಿದ್ದು, ಕೋವಿಡ್ ಪಾಸಿಟಿವ್ ಇರುವ ವಿದ್ಯಾರ್ಥಿಗಳಿಗೆ ಆಯಾ ತಾಲೂಕು ಕೋವಿಡ್ ಕೇರ್ ಸೆಂಟರ್‌ನಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗುವುದು ಎಂದರು.
ಡಿಎಚ್‌ಒ ಡಾ|ರಾಜೇಶ್ ಸುರಗಿಹಳ್ಳಿ ಮಾತನಾಡಿ, ಪ್ರತಿ ತಾಲೂಕುಗಳಲ್ಲಿ ಒಂದು ತುರ್ತು ಚಿಕಿತ್ಸಾ ವಾಹನ, ಪ್ರತಿ ಕೇಂದ್ರದಲ್ಲಿ ಸಿಬ್ಬಂದಿಯೊಂದಿಗೆ ಆರೋಗ್ಯ ತಪಾಸಣಾ ಕೌಂಟರ್ ತೆರೆದು ತಪಾಸಣೆ ನಡೆಸಲಾಗುವುದು. ತಾಲೂಕುಗಳಲ್ಲಿ ರ್ಯಾಪಿಡ್ ರೆಸ್ಪಾನ್ಸ್ ತಂಡ ಮತ್ತು ತಾಲೂಕು ವೈದ್ಯಾಧಿ ಕಾರಿಗಳೊಂದಿಗೆ ಬಿಇಒ ಸಂಪರ್ಕದಲ್ಲಿರಬೇಕು ಎಂದ ಅವರು ಶಿಕ್ಷಣ ಮತ್ತು ಆರೋಗ್ಯ ಇಲಾಖೆಗಳು ಒಟ್ಟುಗೂಡಿ ಪರೀಕ್ಷೆ ಯಶಸ್ವಿಗೊಳಿಸಲಾಗುವುದು ಎಂದರು. ಡಿವೈಎಸ್‌ಪಿ ಪ್ರಶಾಂತ್ ಮುನ್ನೋಳಿ ಮಾತನಾಡಿ, ಎಲ್ಲಾ ಕೇಂದ್ರಗಳಿಗೆ ಮಹಿಳಾ ಮತ್ತು ಪುರುಷ ಪೇದೆಗಳನ್ನು ನಿಯೋಜಿಸಲಾಗುವುದು. ಹಾಗೂ ಎಸ್‌ಓಪಿ ಪ್ರಕಾರ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಡಯಟ್ ಪ್ರಾಚಾರ್ಯರಾದ ಬಸವರಾಜಪ್ಪ, ಜಿಲ್ಲಾ ಖಜಾನಾ ಧಿಕಾರಿ ಎಚ್.ಎಸ್. ಸಾವಿತ್ರಿ, ಜಿಲ್ಲಾ ಶಿಕ್ಷಣಾ ಧಿಕಾರಿ ಹಾಗೂ ಎಸ್‌ಎಸ್‌ಎಲ್‌ಸಿ ನೋಡಲ್ ಅ ಧಿಕಾರಿ ಎಚ್.ಆರ್.ಕೃಷ್ಣಮೂರ್ತಿ ಇದ್ದರು.