ಶಿವಮೊಗ್ಗ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿಶೇಷ ಅನುದಾನದಲ್ಲಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಅನುದಾನ ಬಿಡುಗಡೆ ಸೇರಿದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು. ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜು.13ರಂದು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಹಿರಿಯ ಅ ಧಿಕಾರಿಗಳ ಸಭೆಯಲ್ಲಿ ಜಿಲ್ಲೆಯ ಅಭಿವೃದ್ಧಿಗೆ ಸಂಬಂ ಧಿಸಿದಂತೆ ಅನೇಕ ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿದೆ.
ಇದಕ್ಕಾಗಿ ಅನುದಾನವೂ ಬಿಡುಗಡೆಯಾಗಿದೆ. ನೀಲನಕ್ಷೆಯೂ ತಯಾರಾಗಿದೆ. ಕೆಲವು ಕಾಮಗಾರಿಗಳು ಮುಗಿದಿದ್ದು, ಇನ್ನು ಕೆಲವು ಪ್ರಗತಿಯಲ್ಲಿದೆ ಎಂದರು. ಆಯುರ್ವೇದ ವೈದ್ಯಕೀಯ ವಿಶ್ವವಿದ್ಯಾಲಯದ ಸ್ಥಾಪನೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಇದರಿಂದ ಆಯುರ್ವೇದ ವೈದ್ಯರನ್ನು ನೇಮಕ ಮಾಡಲು ಅನುಕೂಲವಾಗುವುದರ ಜೊತೆಗೆ ಪಶ್ವಿಮ ಘಟ್ಟದಲ್ಲಿ ಬೆಳೆಯುವ ಔಷ ಧ ಸಸ್ಯಗಳ ಸಂಶೋಧನೆ ಆಗಲಿದೆ. ಇದಕ್ಕಾಗಿ ಸೋಗಾನೆ ಬಳಿ ಅಗತ್ಯ ಭೂಮಿ ಮಂಜೂರು ಮಾಡಲಾಗಿದೆ ಎಂದರು.
ಸಾಗರ ತಾಲೂಕಿನ ಇರುವಕ್ಕಿಯ ಸುಮಾರು 750 ಎಕರೆ ಪ್ರದೇಶದಲ್ಲಿ 290 ಕೋ.ರೂ. ವೆಚ್ಚದಲ್ಲಿ ಕೃಷಿ ಮತ್ತು ತೋಟಗಾರಿಕೆ ವಿವಿ ಸ್ಥಾಪಿಸಲಾಗಿದೆ. ಇದಕ್ಕಾಗಿ ಹೆಚ್ಚುವರಿ ಹಣದ ಅವಶ್ಯಕತೆ ಇದ್ದು, ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ. ಸಿಬ್ಬಂದಿ ನೇಮಕ, ಸ್ನಾತಕೋತರ ವಿಭಾಗ, ಸಂಶೋಧನಾ ಕೇಂದ್ರಗಳು ಇಲ್ಲಿ ಸ್ಥಾಪಿತವಾಗಿವೆ ಎಂದರು. ಸಹ್ಯಾದ್ರಿ ಕಾಲೇಜಿನ ಅಭಿವೃದ್ಧಿಗಾಗಿ ಕ್ರಮ ಕೈಗೊಳ್ಳಲಾಗುವುದು. ಸುಮಾರು 15 ಕೋ.ರೂ. ವೆಚ್ಚದಲ್ಲಿ ಕಲಾ ಕಾಲೇಜು, ವಿದ್ಯಾರ್ಥಿ ನಿಲಯ, ಕಟ್ಟಡ ದುರಸ್ತಿ ಮಾಡಲಾಗುವುದು.
ಹಾಗೆಯೇ ಸುಮಾರು 12 ಕೋಟಿ ರೂ. ವೆಚ್ಚದಲ್ಲಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜನ್ನು ಅಭಿವೃದ್ಧಿಗೊಳಿಸಲಾಗುವುದು. ಇದರ ಜೊತೆಗೆ ಸಿಮ್ಸ್‌ನಲ್ಲಿ ಕಳೆದ 12 ವರ್ಷಗಳಿಂದ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿ ಖಾಯಂಗೊಳಿಸಲು ವಿಶೇಷ ನೇಮಕಾತಿ ನಿಯಮ ರೂಪಿಸಲು ಮುಖ್ಯಮಂತ್ರಿಗಳು ಈಗಾಗಲೇ ಅ ಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮೆಗ್ಗಾನ್ ಆಸ್ಪತ್ರೆಯ ಆವರಣದಲ್ಲಿ ಸುಮಾರು 5 ಎಕರೆ ಪ್ರದೇಶದಲ್ಲಿ 200 ಹಾಸಿಗೆಯ ಕ್ಯಾನ್ಸರ್ ಆಸ್ಪತ್ರೆಯನ್ನು 3 ಕೋ.ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದೆ ಎಂದರು.
ವಿಮಾನ ನಿಲ್ದಾಣದ ಕಾಮಗಾರಿ ಪ್ರಗತಿಯಲ್ಲಿದ್ದು, ಬರುವ ಏಪ್ರಿಲ್‌ನಲ್ಲಿ ಲೋಕಾರ್ಪಣೆಗೊಳ್ಳಲಿದೆ. ಶಿವಮೊಗ್ಗ, ಶಿಕಾರಿಪುರ, ಆನವಟ್ಟಿ ರಸ್ತೆಯ ವೈಜ್ಞಾನಿಕ ಅಭಿವೃದ್ಧಿಗೆ ಹಾಗೂ ಭೂ ಸ್ವಾಧಿಧೀನಕ್ಕಾಗಿ 29.53 ಕೋ.ರೂ.ಬಿಡುಗಡೆಯಾಗಿದೆ. ಇದರ ಜೊತೆಗೆ ಶಿವಮೊಗ್ಗದಲ್ಲಿ ಬಸವೇಶ್ವರ ಪುತ್ಥಳಿ ಸ್ಥಾಪಿಸಲು ಮುಖ್ಯಮಂತ್ರಿಗಳು ಕ್ರಮ ಕೈಗೊಂಡಿರುವುದು ಸ್ವಾಗತದ ವಿಷಯ ಎಂದರು.
ಇದೇ ಸಂದರ್ಭದಲ್ಲಿ ಸಂಸದರ ಅನುದಾನದಲ್ಲಿ ಕೋವಿಡ್ ಸಂಕಷ್ಟದ ನೆರವಿಗಾಗಿ 75ಲಕ್ಷ ರೂ. ಅನುದಾನದಲ್ಲಿ 3 ಸುಸಜ್ಜಿತ ಆಂಬ್ಯುಲೆನ್ಸ್‌ಗಳನ್ನು ಬಿಡುಗಡೆಗೊಳಿಲಾಯಿತು. ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್, ಮೇಯರ್ ಸುನೀತಾ ಅಣ್ಣಪ್ಪ, ಪ್ರಮುಖರಾದ ಎಸ್.ದತ್ತಾತ್ರಿ, ಗಿರೀಶ್ ಪಟೇಲ್, ಪವಿತ್ರರಾಮಯ್ಯ, ಬಿ.ಕೆ.ಶ್ರೀನಾಥ್, ಪ್ರಭಾಕರ್, ಕೆ.ವಿ. ಅಣ್ಣಪ್ಪ, ಮಾಲತೇಶ್, ಶಿವರಾಜ್ ಇನ್ನಿತರರು ಉಪಸ್ಥಿತರಿದ್ದರು.