Advertisement

ಪಲ್ಸ್‌ ಪೋಲಿಯೋ ಯಶಸ್ಸಿಗೆ ಮನವಿ

05:58 PM Jan 31, 2021 | Team Udayavani |

ಸಾಗರ: ಜ. 31ರಂದು ತಾಲೂಕಿನಾದ್ಯಂತ ನಡೆಯುವ ಪಲ್ಸ್‌ ಪೋಲಿಯೋ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಎಲ್ಲ ಇಲಾಖೆಯ ಅಧಿ ಕಾರಿ ನೌಕರರು ಕಾರ್ಯಪ್ರವೃತ್ತರಾಗಬೇಕು ಎಂದು ಸಾಗರ ಉಪ ವಿಭಾಗದ ಸಹಾಯಕ ಆಯುಕ್ತ ಡಾ| ನಾಗರಾಜ್‌
ಎಲ್‌. ತಿಳಿಸಿದರು.

Advertisement

ಇಲ್ಲಿನ ಉಪ ವಿಭಾಗಾಧಿ ಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ತಾಲೂಕು ಆಡಳಿತದ ವತಿಯಿಂದ ನಡೆಯಲಿರುವ ಪಲ್ಸ್‌ ಪೋಲಿಯೋ ಕಾರ್ಯಕ್ರಮದ ಅಂಗವಾಗಿ ಕರೆಯಲಾಗಿದ್ದ ತಾಲೂಕು ಚಾಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪಲ್ಸ್‌ ಪೋಲಿಯೋ
ನಡೆಸುವ ಎಲ್ಲ ಕೊಠಡಿಗಳನ್ನು ಸ್ವತ್ಛಗೊಳಿಸಿ ಸೂಕ್ತ ಸೌಲಭ್ಯ ಕಲ್ಪಿಸುವಂತೆ ಅ ಧಿಕಾರಿಗಳಿಗೆ ಸೂಚನೆ ನೀಡಿದರು.

ತಾಲೂಕು ಆರೋಗ್ಯಾ ಧಿಕಾರಿ ಡಾ| ಮೋಹನ್‌ ಕೆ.ಎಸ್‌. ಮಾತನಾಡಿ, ಪಲ್ಸ್‌ ಪೋಲಿಯೋ ಕಾರ್ಯಕ್ರಮದ ಯಶಸ್ಸಿಗೆ ಅಗತ್ಯ ಸಿದ್ದತೆ ಮಾಡಿಕೊಳ್ಳಲಾಗಿದೆ. ಪ್ರಮುಖವಾಗಿ ಕೆಮ್ಮು, ಶೀತ, ಜ್ವರ ಇರುವ ಮಕ್ಕಳಿಗೆ ಲಸಿಕೆ ಕೊಡುತ್ತಿಲ್ಲ. ಕೋವಿಡ್‌ ಪಾಸಿಟಿವ್‌ ಇದ್ದವರ ಮನೆಯ ಮಗುವಿಗೆ ಸಹ ಪೋಲಿಯೋ ಲಸಿಕೆ ಹಾಕುವುದಿಲ್ಲ. ಮಕ್ಕಳಿಗೆ ಡ್ರಾಪ್ಸ್‌ ಹಾಕುವಾಗ ಬಾಯಿಗೆ ತಾಗಿಸಬೇಡಿ ಎಂದು ಸೂಚನೆ ನೀಡಲಾಗಿದೆ.
ಈಗಾಗಲೇ ಆಶಾ ಕಾರ್ಯಕರ್ತೆಯರಿಗೆ ಈ ಕುರಿತು ತರಬೇತಿ ನೀಡಲಾಗಿದೆ ಎಂದು ಹೇಳಿದರು.

ತಹಶೀಲ್ದಾರ್‌ ಚಂದ್ರಶೇಖರ್‌ ನಾಯ್ಕ, ತಾಪಂ ಕಾರ್ಯನಿರ್ವಾಹಣಾಧಿಕಾರಿ ಪುಷ್ಪಾ ಎಂ ಕಮ್ಮಾರ್‌, ಸಿವಿಲ್‌ ಸರ್ಜನ್‌ ಡಾ| ಪ್ರಕಾಶ್‌ ಬೋಸ್ಲೆ, ಸಾರಿಗೆ ಅಧಿ ಕಾರಿ ಶಶಿಕಲಾ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಕಾಶಿನಾಥ್‌ ಒಂಟೇಕರ್‌, ಶಿಕ್ಷಣ ಇಲಾಖೆಯ ಚಂದ್ರಪ್ಪ, ಆರೋಗ್ಯ ಇಲಾಖೆಯ ಸುರೇಶ್‌ ಎ., ಸುಮ, ನಗರಸಭೆ ಹಿರಿಯ ಆರೋಗ್ಯ ನಿರೀಕ್ಷಕ ಶೈಲೇಶ್‌ ಇನ್ನಿತರರು ಇದ್ದರು.

ಓದಿ : ತ.ನಾಡಿನಲ್ಲಿ ಆನೆ ಹತ್ಯೆ ಖಂಡಿಸಿ ಮೈಸೂರು ಕನ್ನಡ ವೇದಿಕೆ ಧರಣಿ

Advertisement
Advertisement

Udayavani is now on Telegram. Click here to join our channel and stay updated with the latest news.

Next