ಶಿವಮೊಗ್ಗ: ಜಿಲ್ಲೆಯಲ್ಲಿ ಸಂಚಾರ ದಟ್ಟಣೆ, ಮಾಲಿನ್ಯ ನಿಯಂತ್ರಣ ಹಾಗೂ ವಾಹನ ಅಪಘಾತಗಳ ನಿಯಂತ್ರಿಸುವಲ್ಲಿ ರಾಜ್ಯದ ಪ್ರತಿ ಜಿಲ್ಲೆಗಳಲ್ಲಿ ಟ್ರಕ್ ಟರ್ಮಿನಲ್ ನಿರ್ಮಿಸುವ ಅಗತ್ಯವಿದೆ ಎಂದು ಡಿ.ದೇವರಾಜ ಅರಸು ಟರ್ಮಿನಲ್‌ನ ಅಧ್ಯಕ್ಷ ಡಿ.ಎಸ್. ವೀರಯ್ಯ ಹೇಳಿದರು. ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿದ ನಂತರ ಮಾಧ್ಯಮ ಪ್ರತಿನಿ ಧಿಗಳಿಗೆ ಈ ಕುರಿತು ಅವರು ಮಾಹಿತಿ ನೀಡಿದರು.
ಬೆಂಗಳೂರು, ಮೈಸೂರು ಸೇರಿದಂತೆ ಈಗಾಗಲೇ ರಾಜ್ಯದ ಆಯ್ದ ನಾಲ್ಕು ಕಡೆಗಳಲ್ಲಿ ಸುಸಜ್ಜಿತ ಟ್ರಕ್‌ಟರ್ಮಿನಲ್‌ಗಳನ್ನು ನಿರ್ಮಿಸಿ. ಸಾರ್ವಜನಿಕ ಸೇವೆಗೆ ಮುಕ್ತಗೊಳಿಸಲಾಗಿದೆ. ಅಂತೆಯೇ ರಾಜ್ಯದ ಹಲವೆಡೆ ಟರ್ಮಿನಲ್ ನಿರ್ಮಾಣಕ್ಕಾಗಿ ನಿವೇಶನ ಗುರುತಿಸಲಾಗಿದೆ. ಶಿವಮೊಗ್ಗದಲ್ಲಿಯೂ ಸುಸಜ್ಜಿತ ಟರ್ಮಿನಲ್‌ನ್ನು ನಿರ್ಮಿಸುವ ಉದ್ದೇಶ ಹೊಂದಲಾಗಿದೆ ಎಂದರು. ಟ್ರಕ್‌ಟರ್ಮಿನಲ್‌ನ್ನು ನಿರ್ಮಿಸುವ ಉದ್ಧೇಶಕ್ಕಾಗಿ ನಗರಕ್ಕೆ ಹೊಂದಿಕೊಂಡಂತೆ ಸುಮಾರು 25-30ಎಕರೆ ಜಾಗದ ಅವಶ್ಯಕತೆ ಇದ್ದು, ಸ್ಥಳ ಗುರುತಿಸುವಂತೆ ಸಂಬಂಧಿ ತ ಇಲಾಖೆಗಳ ಅ ಧಿಕಾರಿಗಳಿಗೆ ಸೂಚಿಸಲಾಗಿದೆ.
ಗೋಮಾಳ, ಕಂದಾಯ ಭೂಮಿ ದೊರೆಯದಿದ್ದಲ್ಲಿ ಖಾಸಗಿ ವ್ಯಕ್ತಿಗಳಿಂದ ಭೂಮಿ ಖರೀದಿಸಿ, ಟರ್ಮಿನಲ್ ನ್ನು ನಿರ್ಮಿಸಲಾಗುವುದು. ಅವಕಾಶವಿದ್ದಲ್ಲಿ ಖಾಸಗಿ ಮಾಲೀಕರು ಅಥವಾ ಹೂಡಿಕೆದಾರರ ನಡುವೆ ಒಪ್ಪಂದ ಮಾಡಿಕೊಂಡು ಟರ್ಮಿನಲ್ ನಿರ್ಮಿಸಲು ಅವಕಾಶ ಒದಗಿಸಲಾಗುವುದು ಎಂದರು. ಟರ್ಮಿನಲ್‌ನಲ್ಲಿ ವಾಹನಗಳ ಮಾಲೀಕರಿಂದ ಕೇವಲ ಕರ ವಸೂಲು ಮಾಡುವುದು ಮಾತ್ರವಲ್ಲ ಟ್ರಕ್ ಟರ್ಮಿನಲ್‌ನಲ್ಲಿ ಬಹುಮುಖ್ಯವಾಗಿ ವಾಹನ ಚಾಲಕರ ವಿಶ್ರಾಂತಿ ಕೊಠಡಿ, ಏಜೆಂಟರಿಗೆ ಕೊಠಡಿ, ವೇಬ್ರಿಡ್ಜ್, ಕ್ಯಾಂಟೀನ್, ಆಟೋಮೊಬೈಲ್, ಶೌಚಾಲಯ, ಪೆಟ್ರೋಲ್ ಬಂಕ್, ಮೆಡಿಕಲ್ಸ್, ಲಾಜಿಸ್ಟಿಕ್ ಸೆಂಟರ್, ಥಿಯೇಟರ್ ಇತ್ಯಾದಿ ಸೌಲಭ್ಯಗಳನ್ನು ಕಲ್ಪಿಸಿ ಉತ್ತಮ ಸೌಲಭ್ಯ ನೀಡಲು ಆದ್ಯತೆ ನೀಡಲಾಗುವುದು ಎಂದರು.
ವಿಶ್ವದ ಬಹುತೇಕ ರಾಷ್ಟ್ರಗಳಲ್ಲಿ ಟ್ರಕ್ ಟರ್ಮಿನಲ್‌ಗಳ ನಿರ್ಮಾಣಕ್ಕೆ ಅವಕಾಶ ಕಲ್ಪಿಸಲಾಗಿದೆ. ಆದರೆ ಇಲ್ಲಿ ಈ ಕ್ಷೇತ್ರ ನಿರ್ಲಕ್ಷéಕ್ಕೆ ಒಳಗಾಗಿದೆ. ಈ ವಿಷಯದ ಮಹತ್ವದ ಕುರಿತು ಸರಕಾರಕ್ಕೆ ಮನವರಿಕೆ ಮಾಡಿಕೊಟ್ಟು, ಅದಕ್ಕಾಗಿ ಅನುದಾನ ಕಾಯ್ದಿರಿಸುವ ಅಗತ್ಯವಿದೆ. ಪ್ರಸ್ತುತ ಟರ್ಮಿನಲ್‌ಗಳಿಲ್ಲದೆ ವಾಹನಗಳನ್ನು ಎಲ್ಲೆಂದರಲ್ಲಿ ನಿಲ್ಲಿಸುವಂತಾಗಿದೆ ಅದನ್ನು ನಿಯಂತ್ರಿಸುವಲ್ಲಿ ಸೂಕ್ತ ಕಾನೂನನ್ನು ಜಾರಿಗೆ ತರುವ ಅಗತ್ಯವಿದೆ ಎಂದರು.
ಹಣಕಾಸಿನ ಲಭ್ಯತೆ ಕೊರತೆಯಿಂದ ಟರ್ಮಿನಲ್ಸ್ ಲಿ. ನಿಂದ ಟರ್ಮಿನಲ್‌ಗಳನ್ನು ನಿರ್ಮಿಸುವುದು ಸಾಧ್ಯವಾಗುತ್ತಿಲ್ಲ. ಮುಂದಿನ ದಿನಗಳಲ್ಲಿ ಸರ್ಕಾರದಿಂದಲೇ ಹಣ ಪಡೆದು ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದು. ಮುಂದಿನ 2-3ತಿಂಗಳಲ್ಲಿ ಶಿವಮೊಗ್ಗದಲ್ಲಿ ಟರ್ಮಿನಲ್‌ಗಳನ್ನು ನಿರ್ಮಿಸಲು ಅಗತ್ಯ ಕ್ರಮ ವಹಿಸಲಾಗುವುದು ಎಂದರು.
ಸಭೆಯಲ್ಲಿ ಸೂಡಾ ಅಧ್ಯಕ್ಷ ಜ್ಯೋತಿಪ್ರಕಾಶ್, ಅಪರ ಜಿಲ್ಲಾಧಿಕಾರಿ ಡಾ|ನಾಗೇಂದ್ರರಾವ್ ಎಫ್.ಹೊನ್ನಳ್ಳಿ, ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ಎಸ್.ವಟಾರೆ ಸೇರಿದಂತೆ ಸಂಬಂಧಿ ತ ಇಲಾಖೆಗಳ ಜಿಲ್ಲಾ ಮಟ್ಟದ ಅ ಧಿಕಾರಿಗಳು ಉಪಸ್ಥಿತರಿದ್ದರು.