Advertisement

ಈಶ್ವರಪ್ಪಗೆ ಆರೆಸ್ಸೆಸ್‌ ಮುಖಂಡರೇ ಬುದ್ಧಿ ಹೇಳಲಿ

06:39 PM Aug 12, 2021 | Shreeraj Acharya |

ಶಿವಮೊಗ್ಗ: ಪ್ರತಿಪಕ್ಷ ಕಾಂಗ್ರೆಸ್ಸಿನವರನ್ನು ಟೀಕಿಸುವ ಭರದಲ್ಲಿ ನಾಲಿಗೆ ಹಿಡಿತ ಕಳೆದುಕೊಂಡಿರುವ ಸಚಿವ ಈಶ್ವರಪ್ಪ ಅವರಿಗೆ ಆರ್‌ಎಸ್‌ಎಸ್‌ ಮುಖಂಡರೇ ಕಿವಿಹಿಂಡಿ ಬುದ್ಧಿ ಹೇಳಬೇಕು ಎಂದು ಕಾಂಗ್ರೆಸ್‌ ವಕ್ತಾರ ಹಾಗೂ ಮಾಜಿ ಶಾಸಕ ಬೇಳೂರು ಗೋಪಾಲಕçಷ್ಣ ಹೇಳಿದರು.

Advertisement

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈಶ್ವರಪ್ಪ ನವರಿಗೆ ಸಂಸ್ಕೃತಿ-ಸಂಸ್ಕಾರಗಳ ಅರಿವೇ ಇಲ್ಲ. ಈ ಹಿಂದೆಯೂ ಇದೇ ರೀತಿ ಹೇಳಿಕೆ ಕೊಟ್ಟಿದ್ದರು. ಹೊಡೆಯಿರಿ, ಬಡೆಯಿರಿ ಎನ್ನುವುದು ಅದ್ಯಾವ ಸಂಸ್ಕೃತಿಯೋ ನಮಗಂತು ಗೊತ್ತಿಲ್ಲ. ಈ ಕೆಟ್ಟ ವರ್ತನೆಯನ್ನು ಅವರು ಬಿಡದೇ ಹೋದರೆ ಮುದೊಂದು ದಿನ ಬಾರಿ ಬೆಲೆ ತೆರಬೇಕಾಗುತ್ತದೆ. ರಾಜ್ಯಪಾಲರು ಮಧ್ಯ ಪ್ರವೇಶಿಸಿ ಅವರ ಉದ್ದಟತನವನ್ನು ಕ್ಷಮಿಸದೇ ಸಂಪುಟದಿಂದ ಕೈ ಬಿಡಬೇಕು ಎಂದು ಹೇಳಿದರು. ಬಾಯಿಚಪಲಕ್ಕಾಗಿ ಮನಸ್ಸಿಗೆ ಬಂದಂತೆ ಈಶ್ವರಪ್ಪ ಮಾತನಾಡಿದ್ದಾರೆ.

ಇದೊಂದು ವಿವಾದಾತ್ಮಕ ಹೇಳಿಕೆ. ಪ್ರಮಾಣವಚನ ಸ್ವೀಕರಿಸುವಾಗ ದ್ವೇಷವಿಲ್ಲದೆ ನಡೆದುಕೊಳ್ಳುವೆ ಎಂದು ದೇವರ ಹೆಸರಲ್ಲಿ ಪ್ರಮಾಣ ಮಾಡಿದ ಈಶ್ವರಪ್ಪ ಇಂದು ಈ ರೀತಿ ಅಶ್ಲೀಲವಾಗಿ ಬೈಗುಳದ ಮಾತನಾಡುತ್ತಾರೆ ಎಂದರೆ ಭಾರತ ಮಾತೆಗೆ ಕೊಡುವ ಗೌರವ ಇದೆ ಏನು? ಮಾತು ಮಾತುಗೆ ಆರ್‌ ಎಸ್‌ಎಸ್‌ ಸಂಸ್ಕೃತಿಯಿಂದ ಬೆಳೆದು ಬಂದವನು ನಾನು ಎಂದು ಗರ್ವದಿಂದ ಹೇಳುವ ಈಶ್ವರಪ್ಪ ಅವರನ್ನು ಆರ್‌ ಎಸ್‌ಎಸ್‌ ಮುಖಂಡರೇ ಕಿವಿಹಿಂಡಿ ಬುದ್ಧಿ ಹೇಳಬೇಕು ಬೇಕಾಗಿದೆ ಎಂದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಮೀರ್‌ ಅಹಮ್ಮದ್‌ ಮನೆ ಮೇಲೆ ಇಡಿ ದಾಳಿ ನಡೆಸಿದ ಕ್ರಮವನ್ನು ಖಂಡಿಸಿದ ಅವರು, ಇದೊಂದು ರಾಜಕೀಯ ಪ್ರೇರಿತವಾಗಿದೆ. ಯಡಿಯೂರಪ್ಪನವರ ಮಕ್ಕಳ ಆಸ್ತಿಯ ವಿವರ ತನಿಖಾ ಸಂಸ್ಥೆಗಳಿಗೆ ಗೊತ್ತಿಲ್ಲವೇ. ಅವರ ಆಸ್ತಿ ಹೆಚ್ಚಾಗಿಲ್ಲವೆ. ಅವರೇನ್ನು ಶುಂಠಿ, ಭತ್ತ ಬೆಳೆದಿದ್ದಾರೆಯೇ ಎಂದು ತಿರುಗೇಟು ನೀಡಿದರು. ಕೋಟಾ ಶ್ರೀನಿವಾಸ ಪೂಜಾರಿ ಅವರು ಹರತಾಳು ಹಾಲಪ್ಪನವರಿಗೆ ಸಚಿವ ಪಟ್ಟವನ್ನು ತಪ್ಪಿಸಿದ್ದಾರೆ. ಒಂದು ಕಾಲದಲ್ಲಿ ನನಗೂ ಸಚಿವ ಪಟ್ಟವನ್ನು ತಪ್ಪಿಸಲಾಗಿತ್ತು. ಈಗ ಅದು ಸರಿಹೋಗಿದೆ. ಈ ಹಿಂದೆ ಸಿಗಂದೂರು ವಿಷಯಕ್ಕೆ ಬಂದರೆ ಮೂವರು ಅ ಧಿಕಾರ ಕಳೆದುಕೊಳ್ಳುತ್ತಾರೆ ಎಂದು ಬಹಿರಂಗವಾಗಿ ಹೇಳಿದ್ದೆ. ಆ ಮಾತು ಸತ್ಯವಾಗಿದೆ. ಒಬ್ಬರು ಈಗಾಗಲೇ ಅಧಿ ಕಾರ ಕಳೆದುಕೊಂಡಿದ್ದಾರೆ.

ಇನ್ನಿಬ್ಬರು ಬಾಕಿ ಉಳಿದಿದ್ದಾರೆ ಎಂದರು. ವಿದ್ಯುತ್‌ ಖಾಸಗೀಕರಣ ಮಾಡಲು ಹೊರಟ್ಟಿರುವ ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಿದ ಬೇಳೂರು, ಈ ಕಾಯಿದೆಯಿಂದ ರೈತರಿಗೆ ಮತ್ತು ಜನ ಸಾಮಾನ್ಯರಿಗೆ ಅನ್ಯಾಯವಾಗುತ್ತದೆ. ಕೂಡಲೇ ಇದನ್ನು ವಾಪಸ್ಸು ತೆಗೆದುಕೊಳ್ಳಬೇಕು ಮತ್ತು ಮಲೆನಾಡಿನಲ್ಲಿ ಇರುವ ನೆಟ್‌ವರ್ಕ್‌ ಸಮಸ್ಯೆ ಸರಿಪಡಿಸಬೇಕು ಎಂದು ಒತ್ತಾಯಿಸಿದರು. ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಕಾಶಿ ವಿಶ್ವನಾಥ್‌, ಜಿ.ಡಿ.ಮಂಜುನಾಥ್‌, ರಾಜಶೇಖರ್‌ ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next