ಶಿವಮೊಗ್ಗ: ಪ್ರಧಾನಮಂತ್ರಿ ಆದರ್ಶ ಗ್ರಾಮ ಯೋಜನೆಯಡಿ 2020-21 ನೇ ಸಾಲಿಗೆ ಆಯ್ಕೆಯಾದ ಗ್ರಾಮಗಳಲ್ಲಿ ಆಗಬೇಕಿರುವ ಅಭಿವೃದ್ಧಿ ಕಾಮಗಾರಿಗಳ ಕುರಿತು ಸರ್ವೇ ಕಾರ್ಯ ನಡೆಸುವುದರೊಂದಿಗೆ ಸಮಗ್ರ ಕ್ರಿಯಾ ಯೋಜನೆ ಸಿದ್ಧಪಡಿಸಿ ಅನುಮೋದನೆ ಪಡೆದು ಈ ವರ್ಷವೇ ಕೆಲಸ ಆರಂಭಿಸಬೇಕು ಎಂದು ಜಿಲ್ಲಾಧಿ ಕಾರಿ ಕೆ.ಬಿ. ಶಿವಕುಮಾರ್ ಅಧಿ ಕಾರಿಗಳಿಗೆ ಸೂಚಿಸಿದರು.
ಜಿಲ್ಲಾಡಳಿತ ಭವನದ ಕಚೇರಿ ಸಭಾಂಗಣದಲ್ಲಿ ಬುಧವಾರ ಪ್ರಧಾನ ಮಂತ್ರಿ ಆದರ್ಶ ಗ್ರಾಮ ಯೋಜನೆ ಅನುಷ್ಠಾನ ಸಂಬಂಧ ಏರ್ಪಡಿಸಲಾಗಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪಿಎಂಎಜಿವೈ ಯೋಜನೆಯಡಿ ಆಯ್ಕೆಯಾದ ಗ್ರಾಮಗಳಲ್ಲಿ ಅವಶ್ಯಕತೆ ಇರುವ ಮೂಲಸೌಕರ್ಯ ಒದಗಿಸುವ ಕಾಮಗಾರಿಗಳ ಕ್ರಿಯಾ ಯೋಜನೆಗೆ ಅನುಮೋದನೆ ಪಡೆದು ಕೆಲಸ ಆರಂಭಿಸಿ ಮುಂದಿನ ಆರ್ಥಿಕ ವರ್ಷದಲ್ಲಿ ಪೂರ್ಣಗೊಳ್ಳುವಂತೆ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಕೇಂದ್ರ ಸರಕಾರದ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಮಂತ್ರಾಲಯ ಇಲಾಖೆ ವತಿಯಿಂದ ಅನುಷ್ಠಾನಗೊಳಿಸುತ್ತಿರುವ ಕೇಂದ್ರ ಪುರಸ್ಕೃತ ಯೋಜನೆಯಾದ ಪ್ರಧಾನಮಂತ್ರಿ ಆದರ್ಶ ಗ್ರಾಮ ಯೋಜನೆಯಡಿ ಎಸ್‌ಸಿ, ಎಸ್‌ಟಿ ಜನಸಂಖ್ಯೆ ಹೆಚ್ಚಿರುವ ಗ್ರಾಮಗಳನ್ನು ಆಯ್ಕೆ ಮಾಡಿ ಅಲ್ಲಿ ಸಮಗ್ರ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಬೇಕು. ಈ ಯೋಜನೆಯಡಿ ಆಯ್ಕೆಯಾದ ಪ್ರತಿ ಗ್ರಾಮಕ್ಕೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದಿಂದ 40 ಲಕ್ಷ ರೂ.ಗಳನ್ನು ಅಭಿವೃದ್ಧಿ ಕಾಮಗಾರಿಗಾಗಿ ಹಾಗೂ 60 ಸಾವಿರ ರೂ.ಗಳನ್ನು ಆಡಳಿತಾತ್ಮಕ ವೆಚ್ಚಕ್ಕಾಗಿ ನೀಡಲಾಗುವುದು.
ಬಿಡುಗಡೆ ಮಾಡಲಾದ ಅನುದಾನಕ್ಕೆ ಅನುಗುಣವಾಗಿ ರಾಜ್ಯ ಸರ್ಕಾರ, ಇನ್ನಿತರೆ ಕೇಂದ್ರ ಪುರಸ್ಕೃತ ಯೋಜನೆಗಳು, ರಾಜ್ಯ ಯೋಜನೆಗಳಡಿ 3 ರಿಂದ 4 ಪಟ್ಟು ಅನುದಾನವನ್ನು (ಗ್ಯಾಪ್ μಲ್ಲಿಂಗ್ ಫಂಡ್) ಬಳಸಿಕೊಂಡು ಮೂಲ ಸೌಕರ್ಯ ಒದಗಿಸಬೇಕು ಎಂದರು. 2020-21 ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆಯಡಿ ಜಿಲ್ಲೆಯ 33 ಗ್ರಾಮಗಳನ್ನು ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಡಿ 1 ಗ್ರಾಮ ಈ ಯೋಜನೆಯಡಿ ಆಯ್ಕೆ ಮಾಡಲಾಗಿದೆ. ಆಯ್ಕೆಯಾದ ಗ್ರಾಮಗಳಲ್ಲಿ ಕುಡಿಯುವ ನೀರು ಮತ್ತು ನೈರ್ಮಲ್ಯ ಮೂಲ ಸೌಕರ್ಯ ಅಭಿವೃದ್ಧಿ, ಘನ ಮತ್ತು ದ್ರವ ತ್ಯಾಜ್ಯ ವಿಲೇವಾರಿ ವ್ಯವಸ್ಥೆ, ಶಾಲೆ ಮತ್ತು ಅಂಗನವಾಡಿಗಳ ಶೌಚಾಲಯ ಕಟ್ಟಡ ನಿರ್ಮಾಣ ಅಥವಾ ದುರಸ್ತಿ, ಅಂಗನವಾಡಿ ಕಟ್ಟಡಗಳ ನಿರ್ಮಾಣ, ರಸ್ತೆಗಳ ನಿರ್ಮಾಣ ಹಾಗೂ ಸೋಲಾರ್ ದೀಪ ಮತ್ತು ಬೀದಿ ದೀಪ ಅಳವಡಿಕೆ ಈ ಆರು ಕಾಮಗಾರಿಗಳಿಗೆ ಆದ್ಯತೆ ನೀಡಿ, ಈ ಕುರಿತು ಗ್ರಾಮಗಳಲ್ಲಿ ಸರ್ವೇ ಕಾರ್ಯ ನಡೆಸಿ ಕ್ರಿಯಾ ಯೋಜನೆ ಸಿದ್ಧಪಡಿಸಿ ಗ್ರಾಮ ಸಭೆಯಲ್ಲಿ ಅನುಮೋದನೆ ಪಡೆಯಬೇಕು.
ನಂತರ ಜಿಲ್ಲಾ ಮಟ್ಟದ ಕನ್ವರ್ಜೆನ್ಸ್ ಸಮಿತಿ ( ಡಿಎಲ್‌ಸಿಸಿ) ಅನುಮೋದನೆ ಪಡೆದು ಕಾರ್ಯಾರಂಭ ಮಾಡಬೇಕು ಎಂದರು. ಇನ್ನು 7 ರಿಂದ 10 ದಿನಗಳ ಒಳಗೆ ಇನ್ನೊಂದು ಸಭೆ ನಡೆಸಲಿದ್ದು ಆ ಸಭೆಯಲ್ಲಿಯೇ ಈ ಕ್ರಿಯಾ ಯೋಜನೆಗಳಿಗೆ ಅನುಮೋದನೆ ನೀಡಲಾಗುವುದು. ಆದ್ದರಿಂದ ಒಂದು ವಾರದೊಳಗೆ ಸರ್ವೇ ಜೊತೆಗೆ ಕ್ರಿಯಾ ಯೋಜನೆ ಸಿದ್ಧಪಡಿಸಿಕೊಂಡು ಸಭೆಗೆ ಆಗಮಿಸುವಂತೆ ಪಿಡಿಒ ಮತ್ತು ಇತರೆ ಅಧಿ ಕಾರಿಗಳಿಗೆ ಸೂಚನೆ ನೀಡಿದರು.
ಕೋವಿಡ್ ಹಿನ್ನೆಲೆಯಲ್ಲಿ 2019-20 ನೇ ಸಾಲಿಗೆ ಆಯ್ಕೆಯಾದ ಗ್ರಾಮಗಳಲ್ಲಿ ನಿಗದಿತ ಗುರಿಗೆ ಅನುಸಾರ ಪ್ರಗತಿ ಆಗಿಲ್ಲ. ಈ ಬಗ್ಗೆ ಹೆಚ್ಚಿನ ಒತ್ತು ನೀಡಿ ಕಾಮಗಾರಿಗಳನ್ನು ಪೂರ್ಣಗೊಳಿಸಲು ಕ್ರಮ ವಹಿಸುವಂತೆ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರು ಮತ್ತು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾ ಧಿಕಾರಿಗಳಿಗೆ ಸೂಚನೆ ನೀಡಿದರು. ಪಿಎಂಎಜಿವೈಯ ಮತ್ತು ಇತರೆ ಕೇಂದ್ರ ಅಥವಾ ರಾಜ್ಯ ಪುರಸ್ಕೃತ ಯೋಜನೆಯಡಿ ಗ್ಯಾಪ್ μಲ್ಲಿಂಗ್ ಅನುದಾನ ಬಳಸಿಕೊಂಡು 40:30 ಅನುಪಾತದಲ್ಲಿ ಕಾಮಗಾರಿಗಳಿಗೆ ಕ್ರಿಯಾ ಯೋಜನೆ ಸಿದ್ಧಪಡಿಸಲು ಸೂಚಿಸಿದ ಅವರು ಕೆಲ ಕಾಮಗಾರಿಗಳನ್ನು ಕನ್ವರ್ಜೆನ್ಸ್ ಇಲ್ಲದೆಯೂ ಪಿಎಂಎಜಿವೈ ಒಂದರಿಂದಲೇ ಕೈಗೊಳ್ಳಬಹುದು ಎಂದು ಮಾಹಿತಿ ನೀಡಿದರು.
ಜಿಲ್ಲಾ ಪಂಚಾಯತ್ ಸಿಇಒ ಎಂ.ಎಲ್. ವೈಶಾಲಿ ಮಾತನಾಡಿ, ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಪಂಚಾಯತ್ ರಾಜ್ ಇಲಾಖೆ ಸಹಯೋಗದಲ್ಲಿ ತಾಲೂಕು ಮಟ್ಟದಲ್ಲಿ ತಂಡ ರಚಿಸಿ ಗ್ರಾಮಗಳಲ್ಲಿ ಸರ್ವೇ ಕಾರ್ಯ ಮಾಡಿ. ಯಾವುದಾದರೂ ಗ್ರಾಮದ ಮಾದರಿ ಕ್ರಿಯಾ ಯೋಜನೆಯನ್ನು ತೆಗೆದುಕೊಂಡು ಇದರ ಆಧಾರದಲ್ಲಿ ಕ್ರಿಯಾ ಯೋಜನೆ ಸಿದ್ಧಪಡಿಸುವಂತೆ ತಿಳಿಸಿದರು.
ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ನಾಗರಾಜ್ ಹಾಗೂ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅ ಧಿಕಾರಿ ಅಜ್ಜಪ್ಪ ಎಚ್.ಇ, 2018-19 ನೇ ಸಾಲಿನಿಂದ 2020-21 ನೇ ಸಾಲಿನವರೆಗಿನ ಪ್ರಗತಿ ವರದಿ ಮಂಡಿಸಿದರು. ಸಭೆಯಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ, ಸಣ್ಣ ನೀರಾವರಿ ಸೇರಿದಂತೆ ಇತರೆ ಇಲಾಖೆ ಅ ಧಿಕಾರಿಗಳು, ಪಿಡಿಒಗಳು ಪಾಲ್ಗೊಂಡಿದ್ದರು.