Advertisement
ಸ್ಮಾರ್ಟ್ ಸಿಟಿ ಹೆಸರಿನಲ್ಲಿ ನಗರದ ಹಲವು ಕಡೆ ಕಾಂಕ್ರಿಟ್ ರಸ್ತೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ನಗರದೆಲ್ಲೆಡೆ ಈ ಸಿಮೆಂಟ್ ರಸ್ತೆಗಳನ್ನು ಮಾಡುವ ಅವಶ್ಯಕತೆ ಇಲ್ಲ. ಇದರಿಂದ ತಾಪಮಾನ ಮತ್ತು ಪರಿಸರದ ಮೇಲೆ ತೀವ್ರ ಪರಿಣಾಮವಾಗುತ್ತದೆ. ಕಾಂಕ್ರಿಟ್ ರಸ್ತೆಗಳನ್ನು ಅನಿವಾರ್ಯ ಸಂದರ್ಭಗಳಲ್ಲಿ ಮಾತ್ರ ಮಾಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಈಗಾಗಲೇ ನಗರದಲ್ಲಿ ತಾಪಮಾನ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದೆ. ಕಾಂಕ್ರಿಟ್ ರಸ್ತೆಗಳು ಹೆಚ್ಚಾದಷ್ಟು ತಾಪಮಾನ ಮತ್ತಷ್ಟು ಹೆಚ್ಚಲಿದೆ. ಇದರಿಂದ ದುಂದುವೆಚ್ಚ ಕೂಡಆಗುತ್ತದೆ. ಕಲ್ಲು, ಮರಳು ಮುಂತಾದ ಅ ಧಿಕ ಖರ್ಚು ತಗುಲುತ್ತದೆ. ಶಿವಮೊಗ್ಗ ನಗರಾದ್ಯಂತ ಸುಮಾರು 100 ಕೋಟಿಗೂ ಹೆಚ್ಚು ವೆಚ್ಚದಲ್ಲಿ
ಕಾಂಕ್ರಿಟ್ ರಸ್ತೆ ನಿರ್ಮಿಸಲಾಗುತ್ತಿದೆ. ಇದರಿಂದ ಗುಣಮಟ್ಟದ ರಸ್ತೆ ನಿರ್ಮಿಸಲು ಕೂಡ ಸಾಧ್ಯವಾಗುತ್ತಿಲ್ಲ. ಎಲ್ಲಾ ಇಲಾಖೆಯ ಇಂಜಿನಿಯರ್‌ಗಳು ಗುಣಮಟ್ಟದ ರಸ್ತೆ ಮಾಡಿಸುವಲ್ಲಿ ವಿಫಲರಾಗಿದ್ದಾರೆ. ಆದ್ದರಿಂದ ತಕ್ಷಣವೇ ಕಾಂಕ್ರೀಟ್ ರಸ್ತೆಗಳನ್ನು ನಿಲ್ಲಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ. ಈ ಸಂದರ್ಭದಲ್ಲಿ ಒಕ್ಕೂಟದ ಪ್ರಮುಖರಾದ ವಸಂತ್‌ಕುಮಾರ್, ಅಶೋಕ್ ಕುಮಾರ್, ನರಸಿಂಹ ಸೇರಿದಂತೆ ಹಲವರು ಇದ್ದರು.