Advertisement

ಕಾಂಗ್ರೆಸ್‌ನಿಂದ ರಸ್ತೆತಡೆ-ಪ್ರತಿಭಟನೆ

06:57 PM Jan 24, 2021 | Shreeraj Acharya |

ಶಿವಮೊಗ್ಗ: ಹುಣಸೋಡು ಗ್ರಾಮದಲ್ಲಿ ಕಲ್ಲು ಕ್ವಾರೆಯಲ್ಲಿ ನಡೆದ ಭೀಕರ ಸ್ಫೋಟಕ್ಕೆ ಅಮಾಯಕರ ಬಲಿಯಾಗಿದ್ದು, ಸರ್ಕಾರದ ನಿರ್ಲಕ್ಷ ಧೋರಣೆ ಮತ್ತು ಬಿಜೆಪಿ ಕೃಪಾಪೋಷಿತ ಕಲ್ಲುಕ್ವಾರಿ ಮಾಲೀಕರನ್ನು ರಕ್ಷಿಸಲು ಮಾಡುತ್ತಿರುವ ಸಂಚನ್ನು ಖಂಡಿಸಿ ಹಾಗೂ ಪ್ರಕರಣದ ತನಿಖೆಗೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್‌ ವತಿಯಿಂದ ಶನಿವಾರ ಪ್ರತಿಭಟನೆ ನಡೆಸಲಾಯಿತು.

Advertisement

ಓದಿ : ರಾಮ ಮಂದಿರ ನಿರ್ಮಾಣಕ್ಕೆ ನಿಧಿ ಸಂಗ್ರಹ

ಅಬ್ಬಲಗೆರೆ ಗ್ರಾಮ ಪಂಚಾಯತ್‌ ಎದುರು ಸವಳಂಗ ರಸ್ತೆಯಲ್ಲಿ 15 ನಿಮಿಷ ರಸ್ತೆ ತಡೆ ನಡೆಸಿದ ಪ್ರತಿಭಟನಾಕಾರರು ಬಿಜೆಪಿ ಹಠಾವೋ ದೇಶ್‌ ಬಚಾವೋ, ಅಕ್ರಮ ಗಣಿಗಾರಿಕೆಗೆ ಅವಕಾಶ ನೀಡಿದ ಬಿಜೆಪಿ ಸರ್ಕಾರಕ್ಕೆ ದಿಕ್ಕಾರ ಎಂದು ಘೋಷಣೆ ಕೂಗಿದರು.

ಘಟನೆಯ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹಾಗೂ ಜಿಲ್ಲಾ ಸಚಿವರಾದ ಕೆ.ಎಸ್‌. ಈಶ್ವರಪ್ಪ, ಸಂಸದ ಬಿ.ವೈ. ರಾಘವೇಂದ್ರ ತಕ್ಷಣ ರಾಜೀನಾಮೆ ನೀಡಬೇಕು. ಅಕ್ರಮ ಕಲ್ಲು ಗಣಿಗಾರಿಕೆ ಮಾಡುವ ಬಿಜೆಪಿ ಪ್ರಭಾವಿ ಮುಖಂಡರನ್ನು ಬಂಧಿಸಬೇಕೆಂದು
ಆಗ್ರಹಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಮಾತನಾಡಿ, ಬಿಜೆಪಿಯವರ ಬಂಡವಾಳ ಬಯಲಾಗಿದೆ. ಕಣ್ಣು, ಕಿವಿ, ಮೂಗು ಇಲ್ಲದ ಈ ಸರ್ಕಾರ ಬಡವರ ಬಾಳಿನ ಜೊತೆಗೆ ಚೆಲ್ಲಾಟವಾಡುತ್ತಿದ್ದು, ಇಡೀ ದೇಶದ ಗಮನ ಸೆಳೆದ ಈ ಪ್ರಕರಣವನ್ನು ಸ್ವತಃ ಪ್ರಧಾನಿಯವರೇ ಖಂಡಿಸಿದ್ದು, ಬಿಜೆಪಿ ರಾಜ್ಯ ನಾಯಕರಿಗೆ ಮುಂದಿನ ದಿನಗಳಲ್ಲಿ ಬಿಸಿ ತುಪ್ಪವಾಗಿ ಪರಿಣಮಿಸಲಿದೆ. ಕೂಡಲೇ ಈಶ್ವರಪ್ಪ ಸೇರಿದಂತೆ ಬಿಜೆಪಿ ನಾಯಕರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ರಸ್ತೆ ತಡೆ ನಡೆಸಿದ ಪರಿಣಾಮ ನೂರಾರು ವಾಹನಗಳು ರಸ್ತೆಯಲ್ಲಿ ಸಾಲಾಗಿ ನಿಂತಿದ್ದವು. ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿ
ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು. ಈ ಸಂದರ್ಭದಲ್ಲಿ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಎಚ್‌. ಎಸ್‌. ಸುಂದರೇಶ್‌, ಕಾಂಗ್ರೆಸ್‌ ಪದಾಧಿಕಾರಿಗಳಾದ ಡಾ| ಶ್ರೀನಿವಾಸ್‌, ರವಿಕುಮಾರ್‌, ರಮೇಶಗೌಡ, ನಾಗೇಂದ್ರಪ್ಪ, ವಿಜಯಲಕ್ಷ್ಮೀ ಪಾಟೀಲ್‌, ಶರತ್‌, ಎಸ್‌.ಪಿ. ಶೇಷಾದ್ರಿ, ಸೈಯದ್‌ ವಾಹಿದ್‌ ಅಡ್ಡು, ಸೌಗಂ ಧಿಕ, ಚೇತನ್‌ ಗೌಡ, ಮಧುಸೂಧನ್‌ ಮತ್ತಿತರರಿದ್ದರು.

Advertisement

ಓದಿ : ಸಾಹಿತ್ಯ ಸಮ್ಮೇಳನಾಧ್ಯಕ್ಷರಿಗೆ ಆಹ್ವಾನ

Advertisement

Udayavani is now on Telegram. Click here to join our channel and stay updated with the latest news.

Next