Advertisement

ಕಲೆ-ಸಂಸ್ಕೃತಿ- ಸಾಹಿತ್ಯದ ಅಭಿರುಚಿ ಮೂಡಿಸಿ

06:47 PM Feb 08, 2021 | Shreeraj Acharya |

ಶಿವಮೊಗ್ಗ: ವಿದ್ಯಾರ್ಥಿಗಳಲ್ಲಿ ನಮ್ಮ ನಾಡಿನ ಶ್ರೀಮಂತ ಕಲೆ, ಸಾಹಿತ್ಯದ ಬಗ್ಗೆ ಹೆಚ್ಚು ಅಭಿರುಚಿ ಮೂಡಿಸುವ ಕಾರ್ಯ ಆಗಬೇಕಿದೆ ಎಂದು ವಿಧಾನ ಪರಿಷತ್‌ ಮಾಜಿ ಸಭಾಧ್ಯಕ್ಷ ಡಿ.ಎಚ್‌. ಶಂಕರಮೂರ್ತಿ ಹೇಳಿದರು.

Advertisement

ಬುಧವಾರ ಶಿವಮೊಗ್ಗ ರಂಗಾಯಣದಲ್ಲಿ ಆಯೋಜಿಸಲಾಗಿದ್ದ ಶಿಲ್ಪಕಲಾ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
ನಮ್ಮ ನಾಡಿನ ಕಲೆ, ಸಂಸ್ಕೃತಿಗಳು ಶ್ರೀಮಂತವಾಗಿದ್ದು, ಕಾಲಾತೀತವಾಗಿವೆ. ಕಲೆಗಳು ನಮ್ಮ ಗತ ಇತಿಹಾಸದ ಬಗ್ಗೆ ಬೆಳಕು ಚೆಲ್ಲಿ ನಮ್ಮನ್ನು ಜಾಗೃತಗೊಳಿಸುತ್ತದೆ. ಇಂತಹ ಕಲೆ ಮತ್ತು ಸಂಸ್ಕೃತಿಯಿಂದ ನಮ್ಮ ಮಕ್ಕಳು ಪ್ರೇರಣೆ ಪಡೆಯಬೇಕಾಗಿದೆ. ಕುವೆಂಪು ಅವರಂತಹ ಮಹಾನ್‌ ವ್ಯಕ್ತಿತ್ವದ ಬಗ್ಗೆ ಯುವ ಸಮೂಹ ಹೆಚ್ಚೆಚ್ಚು ಅರಿತುಕೊಳ್ಳುವ ಅಗತ್ಯವಿದೆ. ರಂಗಾಯಣದಂತಹ ಸಂಸ್ಥೆಗಳು ಇದಕ್ಕೆ ವೇದಿಕೆ ಒದಗಿಸಿಕೊಡಬೇಕು ಎಂದು ಅವರು ಹೇಳಿದರು.

15 ದಿನ ನಡೆದ ಶಿಲ್ಪಕಲಾ ಶಿಬಿರದಲ್ಲಿ ಭಾಗವಹಿಸಿದ್ದ ಕಲಾವಿದರಿಗೆ ಗೌರವ ಸಮರ್ಪಿಸಿದ ಜಿಲ್ಲಾ ಧಿಕಾರಿ ಕೆ.ಬಿ. ಶಿವಕುಮಾರ್‌ ಮಾತನಾಡಿ, ಕಲೆ ಮೂಲಕ ಕರ್ನಾಟಕದ ಶ್ರೀಮಂತ ಸಂಸ್ಕೃತಿಯನ್ನು ಇಲ್ಲಿ ಕಲಾವಿದರು ಅನಾವರಣಗೊಳಿಸಿದ್ದಾರೆ. ಶಿಲ್ಪಿಗಳು ತಮ್ಮ ಕೈಚಳಕದ ಮೂಲಕ ಎಲ್ಲಾ ಶಿಲ್ಪಗಳಿಗೆ ಜೀವ ತುಂಬಿದ್ದಾರೆ. ನಾಡಿನ ಕಲೆ, ಸಂಸ್ಕೃತಿಯನ್ನು ಪ್ರತಿನಿಧಿಸುವ ಇಂತಹ ಕೆಲಸಗಳು ಹೆಚ್ಚಾಗಿ
ನಡೆಯಬೇಕು ಎಂದರು.

ಶಿವಮೊಗ್ಗ ರಂಗಾಯಣ ನಿರ್ದೇಶಕ ಸಂದೇಶ ಜವಳಿ ಸಮಾರೋಪ ಭಾಷಣ ಮಾಡಿದರು. ಕರ್ನಾಟಕ ಶಿಲ್ಪಕಲಾ ಅಕಾಡೆಮಿ ಅಧ್ಯಕ್ಷ ವೀರಣ್ಣ ಮಾ. ಅರ್ಕಸಾಲಿ ಅವರು ಅಧ್ಯಕ್ಷತೆ ವಹಿಸಿದ್ದರು. ಶಿಬಿರದ ನಿರ್ದೇಶಕ ಕೆ.ನಾರಾಯಣರಾವ್‌, ಸಂಚಾಲಕ ವಿಪಿನ್‌ ಭಧೌರಿಯಾ, ರಂಗಸಮಾಜ ಸದಸ್ಯ ಆರ್‌. ಎಸ್‌.ಹಾಲಸ್ವಾಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಉಮೇಶ್‌ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಗೌರವ ಸಮರ್ಪಣೆ: 72ನೇ ಗಣರಾಜ್ಯೋತ್ಸವ ಅಂಗವಾಗಿ ರಾಜಪಥದಲ್ಲಿ ನಡೆದ ಸಮಾರಂಭ ವೇಳೆ ಕರ್ನಾಟಕದ ಸ್ತಬ್ಧ ಚಿತ್ರದೊಂದಿಗೆ ಕಲಾವಿದರಾಗಿ ಭಾಗವಹಿಸಿದ್ದ ಶಿವಮೊಗ್ಗ ರಂಗಾಯಣದ ಎಲ್ಲಾ 12ಮಂದಿ ಕಲಾವಿದರಿಗೆ ಗೌರವ ಸ್ಮರಣಕೆ ನೀಡಿ ಡಿ.ಎಚ್‌.ಶಂಕರಮೂರ್ತಿ ಅವರು ಈ ಸಂದರ್ಭದಲ್ಲಿ ಸನ್ಮಾನಿಸಿದರು.

 

Advertisement

ಓದಿ:  ಪಾಲಿಕೆಯ ಕಡತಗಳನ್ನು ಕಚೇರಿಯಿಂದ ಹೊರಗೆ ಕೊಂಡು ಹೋದರೆ ಕ್ರಿಮಿನಲ್ ಕೇಸ್: BBMP ಆಯುಕ್ತ

 

Advertisement

Udayavani is now on Telegram. Click here to join our channel and stay updated with the latest news.

Next