Advertisement

ಮಾರ್ಚ್‌ ಒಳಗೆ ಕಾಮಗಾರಿ ಮುಗಿಸಿ: ಬಿ.ಎಸ್‌. ಯಡಿಯೂರಪ್ಪ

05:40 PM Feb 15, 2021 | Shreeraj Acharya |

ಶಿವಮೊಗ್ಗ: ಈ ಹಣಕಾಸು ಸಾಲಿನಲ್ಲಿ ಅನುಮೋದನೆಗೊಂಡಿರುವ ಎಲ್ಲಾ ಕಾಮಗಾರಿಗಳನ್ನು ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡದೆ, ಮಾರ್ಚ್‌ ಒಳಗಾಗಿ ಪೂರ್ಣಗೊಳಿಸ  ಬೇಕು ಎಂದು ಮುಖ್ಯಮಂತ್ತಿ ಬಿ.ಎಸ್‌. ಯಡಿಯೂರಪ್ಪ ಅವರು ಸೂಚನೆ ನೀಡಿದರು.

Advertisement

ಭಾನುವಾರ ತಮ್ಮ ಸ್ವಕೇತ್ರ ಶಿಕಾರಿಪುರ ತಾಲೂಕು ಕೆಡಿಪಿ ಸಭೆಯಲ್ಲಿ ವಿವಿಧ ಇಲಾಖೆ ಗಳ ಪ್ರಗತಿಪರಿಶೀಲನೆ ನಡೆಸಿ ಅವರು ಮಾತನಾಡಿದರು. ಲೋಕೋಪಯೋಗಿ ಇಲಾಖೆ ಕಾಮಗಾರಿ ಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡದೆ ಕಾಮಗಾರಿಗಳನ್ನು ಕೈಗೊಳ್ಳಬೇಕು. ಜಿಲ್ಲೆಯಲ್ಲಿ ತೋಟಗಾರಿಕಾ ಬೆಳೆಗಳನ್ನು ಹೆಚ್ಚು ಬೆಳೆಯಲು ರೈತರಿಗೆ ಪ್ರೋತ್ಸಾಹ
ನೀಡಬೇಕು. ಪ್ರತಿ ವರ್ಷ ತೋಟಗಾರಿಕಾ ಬೆಳೆಗಳ ಕ್ಷೇತ್ರ ಹೆಚ್ಚಳವಾಗಬೇಕು ಎಂದರು.

ರೈತರು ಮಿಶ್ರ ಬೆಳೆ ಬೆಳೆಯುವುದರಿಂದ ಹೆಚ್ಚಿನ ಆರ್ಥಿಕ ಲಾಭ ಪಡೆಯಲು ಸಾಧ್ಯವಿದೆ. ಒಂದೆರಡು ಎಕರೆ ಜಮೀನಿನಲ್ಲಿ ಮಾವು, ಬಾಳೆ, ಶುಂಠಿ, ತೆಂಗು ಮೊದಲಾದ ಮಿಶ್ರ ಬೆಳೆಗಳನ್ನು ಬೆಳೆದು ಲಕ್ಷಾಂತರ ರೂ. ಲಾಭ ಪಡೆಯಲು ಸಾಧ್ಯವಿದೆ ಎಂದರು. ಹನಿ
ನೀರಾವರಿಗೆ ಹೆಚ್ಚಿನ ಅನುದಾನ ಒದಗಿಸಲು ಕ್ರಮ ಕೈಗೊಳ್ಳಲಾಗುವುದು. ಹನಿ ನೀರಾವರಿ ಸೌಲಭ್ಯಕ್ಕಾಗಿ ಬಾಕಿ ಇರುವ ಅರ್ಜಿಗಳ ಮಾಹಿತಿ ಒದಗಿಸಬೇಕು. ಈಗಾಗಲೇ ಹನಿ ನೀರಾವರಿ ಅಳವಡಿಸಿರುವ ರೈತರ ಸಬ್ಸಿಡಿ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

ತಾಲೂಕಿನಲ್ಲಿ ಹೆಚ್ಚುವರಿಯಾಗಿ ಎರಡು ಪಶು ವೈದ್ಯ ಆಸ್ಪತ್ರೆ ಆರಂಭಿಸಲು ಅನುಮೋದನೆ ನೀಡಲಾಗುವುದು. ಈ ಬಾರಿ ಉತ್ತಮ ಮಳೆಯಾಗಿರುವ ಕಾರಣ ಎಲ್ಲಾ ಕೆರೆ ಕಟ್ಟೆಗಳು ತುಂಬಿವೆ. ಆದ್ದರಿಂದ ಕೆರೆ ಹೂಳು ತೆಗೆಯುವ ಕಾಮಗಾರಿಗಳನ್ನು ಸದ್ಯ ಕೈಗೆತ್ತಿಕೊಳ್ಳಬಾರದು. ಹೂಳೆತ್ತುವ ಕಾಮಗಾರಿಗಳಿಗೆ ಈಗಾಗಲೆ ಟೆಂಡರ್‌ ಆಗಿದ್ದರೂ, ನೀರು ಖಾಲಿಯಾದರೆ ಮಾತ್ರ ಕಾಮಗಾರಿ ಆರಂಭಿಸಿ. ಅನುದಾನ ದುರುಪಯೋಗಕ್ಕೆ ಯಾವುದೇ ಇಲಾಖೆಗಳು ಆಸ್ಪದ ನೀಡಬಾರದು ಎಂದು ಹೇಳಿದರು.

ಜಿಲ್ಲೆಯಲ್ಲಿ ಎಲ್ಲಾ ಹಳ್ಳಿಗಳಲ್ಲೂ ಸ್ಮಶಾನ ಜಾಗ ಗುರುತಿಸಬೇಕು. ಜಲಜೀವನ ಮಿಷನ್‌ ಯೋಜನೆಯಡಿ ಪ್ರತಿ ಫಲಾನುಭವಿ ಮನೆಯವರು
ನೀಡಬೇಕಾಗಿರುವ ಕಾಮಗಾರಿಯ ಶೇ.10 ರಷ್ಟು ಹಣವನ್ನು ಸರಕಾರದಿಂದ ನೇರವಾಗಿ ಪಾವತಿಸುವ ಕುರಿತು ಈ ಬಾರಿಯ ಬಜೆಟ್‌ ನಲ್ಲಿಕ್ರಮ ಕ್ರಮ ಕೈಗೊಳ್ಳಲಾಗುವುದು. ಜಲಜೀವನ್‌ ಮಿಷನ್‌ ಅಡಿ ಮನೆ ಮನೆಗೆ ನೀರು ಪೂರೈಕೆ ಮಾಡುವ ಯೋಜನೆಯನ್ನು ತ್ವರಿತವಾಗಿ
ಅನುಷ್ಠಾನಗೊಳಿಸಬೇಕು ಎಂದರು.
ಸಂಸದ ಬಿ.ವೈ. ರಾಘವೇಂದ್ರ, ಎಂಎಡಿಬಿ ಅಧ್ಯಕ್ಷ ಗುರುಮೂರ್ತಿ, ತಾಪಂ ಅಧ್ಯಕ್ಷ ಸುರೇಶ್‌ ನಾಯ್ಕ, ಜಿಲ್ಲಾ ಧಿಕಾರಿ ಶಿವಕುಮಾರ್‌,
ಜಿಪಂ ಸಿಇಒ ವೈಶಾಲಿ, ಎಸ್ಪಿ ಶಾಂತರಾಜು ಇದ್ದರು.

Advertisement

ಓದಿ : ಸಮಾನತೆ ಬಯಸುವುದೇ ಬಂಡಾಯ ಸಾಹಿತ್ಯದ ಧ್ಯೇಯ

Advertisement

Udayavani is now on Telegram. Click here to join our channel and stay updated with the latest news.

Next