Advertisement

ಜನರ ಸಮಸ್ಯೆಗೆ ಎಲ್ಲಾ ಇಲಾಖೆಗಳು ಸ್ಪಂದಿಸಲಿ: ಡಿಸಿ

05:17 PM Feb 21, 2021 | Shreeraj Acharya |

ಶಿವಮೊಗ್ಗ: ಗ್ರಾಮೀಣ ಭಾಗದ ಜನರ ಸಮಸ್ಯೆಗಳನ್ನು ಅರಿಯಲು ಮತ್ತು ಬಗೆಹರಿಸಲು “ಜಿಲ್ಲಾ ಧಿಕಾರಿಗಳ ನಡೆ ಹಳ್ಳಿಯ ಕಡೆ’ ಕಾರ್ಯಕ್ರಮ ಉತ್ತಮ ಅವಕಾಶವಾಗಿದ್ದು, ಎಲ್ಲಾ ಇಲಾಖೆಗಳು ಸಮಸ್ಯೆಗಳಿಗೆ ಸ್ಪಂದಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಜಿಲ್ಲಾ ಧಿಕಾರಿ ಕೆ.ಬಿ. ಶಿವಕುಮಾರ್‌ ಹೇಳಿದರು.

Advertisement

ಶನಿವಾರ ಶಿಕಾರಿಪುರ ತಾಲೂಕಿನ ಉಡುಗಣಿ ಹೋಬಳಿಯ ತಡಸನಳ್ಳಿ ಗ್ರಾಮದಲ್ಲಿ ನಡೆದ ಗ್ರಾಮವಾಸ್ತವ್ಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಪ್ರತಿಯೊಬ್ಬರಿಗೂ ಸಾಮಾಜಿಕ ಭದ್ರತೆ ಒದಗಿಸುವುದು ಕಂದಾಯ ಇಲಾಖೆಯ ಮುಖ್ಯ ಜವಾಬ್ದಾರಿಯಾಗಿದೆ.
ಇದರೊಂದಿಗೆ ಪಂಚಾಯತ್‌ರಾಜ್‌ ಇಲಾಖೆ ಅಭಿವೃದ್ಧಿ ಕಾರ್ಯಕ್ರಮಗಳನ್ನು ಸಮನ್ವಯ ಮಾಡಿಕೊಂಡು ಗ್ರಾಮೀಣ ಭಾಗದ ಜನಜೀವನವನ್ನು ಉತ್ತಮಪಡಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಪ್ರತಿ ಹೋಬಳಿಯಲ್ಲಿರುವ ಗ್ರಾಮಗಳ ಸಮಸ್ಯೆಗಳು ಬಹುತೇಕ ಒಂದೇ ರೀತಿಯಾಗಿರುತ್ತವೆ. ಒಂದು ಹಳ್ಳಿಯಲ್ಲಿ ಗ್ರಾಮ ವಾಸ್ತವ್ಯ ಮಾಡಿದರೂ, ಆಯಾ ಹೋಬಳಿಯ ಸಮಸ್ಯೆಗಳನ್ನು ಅರಿಯಲು ಇದರಿಂದ ಸಾಧ್ಯವಾಗುತ್ತದೆ.

ಹೋಬಳಿ ಮಟ್ಟದ ಅ ಧಿಕಾರಿಗಳು ಗ್ರಾಮ ವಾಸ್ತವ್ಯ ಸಂದರ್ಭದಲ್ಲಿ ಹಾಜರಿರುವುದರಿಂದ ಸಂಬಂ ಧಿಸಿದ ಎಲ್ಲಾ ಗ್ರಾಮಗಳ ಸಮಸ್ಯೆಗಳ ಪರಿಹಾರ ಸಾಧ್ಯವಾಗಲಿದೆ ಎಂದು ಅವರು ಆಶಯ ವ್ಯಕ್ತಪಡಿಸಿದರು. ಸಂಸದ ಬಿ.ವೈ. ರಾಘವೇಂದ್ರ ಮಾತನಾಡಿ, ಶಿಕಾರಿಪುರ ತಾಲೂಕಿನ ಎಲ್ಲಾ ಶಾಲೆಗಳಿಗೆ ಅತ್ಯುತ್ತಮ ಮೂಲ ಸೌಕರ್ಯಗಳನ್ನು ಕಲ್ಪಿಸಲಾಗಿದೆ. ಶಿಕ್ಷಕರು ಕಲಿಕೆಯ ಗುಣಮಟ್ಟವನ್ನು ಹೆಚ್ಚಿಸಲು, ಆ ಮೂಲಕ ಎಸ್‌ ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಉತ್ತಮ ಫಲಿತಾಂಶ ತರಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಅರ್ಜಿಗಳನ್ನು ಪ್ರತಿಯೊಬ್ಬರೂ ಸಕಾಲದಲ್ಲಿ ತಮ್ಮ ಹಂತದಲ್ಲಿಯೇ ವಿಲೇವಾರಿ ಮಾಡಿದರೆ ಜಿಲ್ಲಾ ಧಿಕಾರಿಗಳು ಗ್ರಾಮ ಮಟ್ಟಕ್ಕೆ ಬಂದು ಅರ್ಜಿಗಳನ್ನು ಸ್ವೀಕರಿಸುವ ಪ್ರಶ್ನೆಯೇ ಬರುವುದಿಲ್ಲ ಎಂದರು.

ಓದಿ : ಬಯಲುಸೀಮೆ ಅಭಿವೃದ್ಧಿಯೇ ಹೆಗ್ಗುರಿ: ಜೀವನಮೂರ್ತಿ

Advertisement

Udayavani is now on Telegram. Click here to join our channel and stay updated with the latest news.

Next