Advertisement

ಶೇ.50 ಹಾಸಿಗೆ ಸರಕಾರಿ ಕೋಟಾಕ್ಕೆ ಕೊಡಿ

06:17 PM Apr 20, 2021 | Shreeraj Acharya |

ಶಿವಮೊಗ್ಗ: ಸರ್ಕಾರದ ಆದೇಶದ ಪ್ರಕಾರ ಎಲ್ಲಾ ಖಾಸಗಿ ಆಸ್ಪತ್ರೆಗಳು ತಮ್ಮಲ್ಲಿರುವ ಶೇ.50 ರಷ್ಟು ಹಾಸಿಗೆಗಳನ್ನು ಸರ್ಕಾರಿ ಕೋಟಾದ ಅಡಿಯಲ್ಲಿ ಕಡ್ಡಾಯವಾಗಿ ಮೀಸಲಿರಿಸಬೇಕು ಎಂದು ಜಿಲ್ಲಾ ಧಿಕಾರಿ ಕೆ.ಬಿ. ಶಿವಕುಮಾರ್‌ ಅವರು ಸೂಚನೆ ನೀಡಿದರು. ಸೋಮವಾರ ಜಿಲ್ಲಾ ಧಿಕಾರಿ ಕಚೇರಿಯಲ್ಲಿ ನಗರದ ಖಾಸಗಿ ಆಸ್ಪತ್ರೆಗಳ ಪ್ರತಿನಿಧಿ ಗಳ ಸಭೆಯಲ್ಲಿ ಅವರು ಮಾತನಾಡಿದರು.

Advertisement

ಕೋವಿಡ್‌ ಎರಡನೇ ಅಲೆ ಎದುರಿಸಲು ಜಿಲ್ಲಾಡಳಿತ ಎಲ್ಲಾ ಸಿದ್ಧತೆ ಕೈಗೊಳ್ಳುತ್ತಿದೆ. ಕೋವಿಡ್‌ ಪಾಸಿಟಿವ್‌ ಸಂಖ್ಯೆ ಪ್ರತಿದಿನ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಖಾಸಗಿ ಆಸ್ಪತ್ರೆಗಳ ಸೌಲಭ್ಯವನ್ನು ಬಳಸಿಕೊಳ್ಳುವುದು ಅನಿವಾರ್ಯವಾಗಲಿದೆ. ಅಂತಹ ಪರಿಸ್ಥಿತಿಯನ್ನು ಎದುರಿಸಲು ಎಲ್ಲಾ ಆಸ್ಪತ್ರೆಗಳು ತಮ್ಮಲ್ಲಿನ ಜನರಲ್‌ ಹಾಸಿಗೆ, ಆಕ್ಸಿಜನ್‌ ಬೆಡ್‌, ಐಸಿಯು, ವೆಂಟಿರೇಟರ್‌ ಸೌಲಭ್ಯ ಹೊಂದಿರುವ ಬೆಡ್‌ಗಳ ಪೈಕಿ ಶೇ.50ರಷ್ಟನ್ನು ಸರ್ಕಾರದ ಕೋಟಾದ ಅಡಿ ನೀಡಬೇಕು. ಒಂದು ವೇಳೆ ಈ ಬೆಡ್‌ಗಳನ್ನು ಬಳಸುವುದಿದ್ದರೆ ಜಿಲ್ಲಾಡಳಿತದಿಂದ ಕಡ್ಡಾಯವಾಗಿ ಅನುಮತಿ ಪಡೆಯಬೇಕು. ಈ ನಿರ್ದೇಶನ ಉಲ್ಲಂಘಿಸುವ ಆಸ್ಪತ್ರೆಗಳ ವಿರುದ್ಧ ಈ ಬಾರಿ ಕ್ರಮ ಜರುಗಿಸುವುದು ಖಚಿತ ಎಂದು ಎಚ್ಚರಿಕೆ ನೀಡಿದರು.

ಖಾಸಗಿ ಆಸ್ಪತ್ರೆಗಳಿಗೆ ಚಿಕಿತ್ಸಾ ವೆಚ್ಚವನ್ನು ಸರ್ಕಾರ ಈ ಹಿಂದೆಯೇ ನಿಗದಿಪಡಿಸಿದೆ. ಅದರಂತೆ ಶುಲ್ಕ ವಿ ಧಿಸಲು ಅವಕಾಶವಿದೆ. ಹೆಚ್ಚುವರಿ ಶುಲ್ಕ ವಿಧಿ ಸುವ ಕುರಿತು ದೂರುಗಳು ಬಂದರೆ ಕ್ರಮ ಕೈಗೊಳ್ಳಲಾಗುವುದು ಎಂದರು. ವಿಡಿಯೋ ಕಾನ್ಫರೆನ್ಸ್‌: ಇದಕ್ಕೂ ಮೊದಲು ಜಿಲ್ಲಾ  ಧಿಕಾರಿ ಅವರು ಎಲ್ಲಾ ತಾಲೂಕು ಅಧಿ ಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್‌ ನಡೆಸಿ ಕೋವಿಡ್‌ ನಿರ್ವಹಣೆ ಕುರಿತು ಸೂಚನೆಗಳನ್ನು ನೀಡಿದರು.

ಪ್ರಸ್ತುತ ಗಾಜನೂರಿನಲ್ಲಿ ಕೋವಿಡ್‌ ಕೇರ್‌ ಸೆಂಟರ್‌ ಸಜ್ಜುಗೊಳಿಸಲಾಗಿದೆ. ಎಲ್ಲಾ ತಾಲೂಕುಗಳಲ್ಲಿ ಸಹ ಕೇರ್‌ ಸೆಂಟರ್‌ ಸಿದ್ಧಪಡಿಸಿ ಇಟ್ಟುಕೊಳ್ಳಬೇಕು. ಮನೆ ಆರೈಕೆಯಲ್ಲಿ ಇರುವ ಕೋವಿಡ್‌ ಪಾಸಿಟಿವ್‌ ವ್ಯಕ್ತಿಗಳ ಮಾಹಿತಿಯನ್ನು ಪ್ರತಿದಿನ ಪಡೆಯಲು ತಾಲೂಕು ಮಟ್ಟದಲ್ಲಿ ತಂಡ ರಚಿಸಬೇಕು. ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲು ತಾಲೂಕು ಕೇಂದ್ರಗಳಲ್ಲಿ ಕಂಟ್ರೋಲ್‌ ರೂಂ ಆರಂಭಿಸಬೇಕು. ಪ್ರತಿ ತಾಲೂಕಿನಲ್ಲಿ ಕನಿಷ್ಟ 50 ಆಕ್ಸಿಜನ್‌ ಬೆಡ್‌ ಸೌಲಭ್ಯ ಇರಬೇಕು. ವ್ಯಾಕ್ಸಿನೇಷನ್‌ ಲಭ್ಯತೆ ಬಗ್ಗೆ ಪ್ರತಿ ದಿನ ಮಾಹಿತಿ ನೀಡಬೇಕು. ಮಾಸ್ಕ್ ಧಾರಣೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಮುಂಜಾಗ್ರತಾ ಕ್ರಮಗಳ ಮೇಲುಸ್ತುವಾರಿಗೆ ಪೊಲೀಸ್‌ ಇಲಾಖೆ ನೇತೃತ್ವದಲ್ಲಿ ನೋಡಲ್‌ ಅ ಧಿಕಾರಿ ನೇಮಕ ಮಾಡಲಾಗುವುದು. ಆ್ಯಂಬುಲೆನ್ಸ್‌ ನಿರ್ವಹಣೆಗೆ ನೋಡಲ್‌ ಅಧಿ ಕಾರಿ ನೇಮಕ ಮಾಡಬೇಕು ಎಂದು ಹೇಳಿದರು.

ರೂಪಾಂತರಿ ಕೊರೊನಾ ಅತ್ಯಂತ ವೇಗವಾಗಿ ಹರಡುತ್ತಿದ್ದು, ಪ್ರಾಥಮಿಕ ಸೋಂಕಿತರಲ್ಲಿ ಶೇ.30ರಷ್ಟು ಮಂದಿಗೆ ಪಾಸಿಟಿವ್‌ ಕಂಡು ಬರುತ್ತಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾ  ಧಿಕಾರಿ ಡಾ| ರಾಜೇಶ ಸುರಗಿಹಳ್ಳಿ ಅವರು ಹೇಳಿದರು.

Advertisement

ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿ  ಕಾರಿ ವೈಶಾಲಿ ಎಂ.ಎಲ್‌, ಅಪರ ಪೊಲೀಸ್‌ ವರಿಷ್ಟಾ  ಧಿಕಾರಿ ಡಾ|ಶೇಖರ್‌ ಎಚ್‌.ಟಿ, ಅಪರ ಜಿಲ್ಲಾ ಧಿಕಾರಿ ಜಿ.ಅನುರಾಧ, ಶಿಮ್ಸ್‌ ನಿರ್ದೇಶಕ ಡಾ|ಸಿದ್ಧಪ್ಪ, ವಿವಿಧ ಖಾಸಗಿ ಆಸ್ಪತ್ರೆಗಳ ಪ್ರತಿನಿ ಧಿಗಳು, ಅ ಧಿಕಾರಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next