Advertisement

ಅಪೂರ್ಣ ಕಾಮಗಾರಿ ಮಾಡಿದರೆ ಕ್ರಮ ಕೈಗೊಳ್ಳಿ

06:49 PM Apr 21, 2021 | Shreeraj Acharya |

ಶಿವಮೊಗ್ಗ: ನಿರಂತರ ಜ್ಯೋತಿ ಯೋಜನೆಯಡಿ ಮಾರ್ಗಸೂಚಿ ಪ್ರಕಾರ ಸರಿಯಾಗಿ ಕಾಮಗಾರಿ ನಿರ್ವಹಿಸದಿದ್ದರೆ, ಪಾವತಿ ಮಾಡಲಾಗಿರುವ ಮೊತ್ತವನ್ನು ಗುತ್ತಿಗೆದಾರರಿಂದ ವಸೂಲು ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್‌.ಈಶ್ವರಪ್ಪ ಅವರು ಅ ಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಿರಂತರ ಜ್ಯೋತಿ ಯೋಜನೆ ಅನುಷ್ಠಾನದಲ್ಲಿನ ಲೋಪಗಳ ಕುರಿತು ಪರಿಶೀಲನಾ ಸಭೆ ನಡೆಸಿದರು.

Advertisement

ಪೀಢರ್‌ ಬೇರ್ಪಡಿಸುವಿಕೆ ಕಾಮಗಾರಿಗೆ ಸಂಬಂ ಧಿಸಿದಂತೆ ಒಟ್ಟು 41 ಮಾರ್ಗಗಳ ಕಾಮಗಾರಿಗೆ 105 ಕೋಟಿ ರೂ. ಬಿಲ್‌ ಪಾಸು ಮಾಡಲಾಗಿದೆ. ಪ್ರಸ್ತುತ ಎಲ್ಲಾ ಮಾರ್ಗಗಳ ಕಾಮಗಾರಿ ಅನುಷ್ಠಾನದ ಗುಣಮಟ್ಟವನ್ನು ಪರಿಶೀಲಿಸಲಾಗುತ್ತಿದೆ. ಇದುವರೆಗೆ 28 ಮಾರ್ಗಗಳ ತಪಾಸಣೆ ಕಾರ್ಯ ಪೂರ್ಣಗೊಂಡಿದ್ದು, ಈ ಕಾಮಗಾರಿಗಳಿಗೆ ಸಂಬಂ  ಧಿಸಿದಂತೆ 71.55 ಕೋಟಿ ರೂ. ಬಿಲ್‌ ಪಾಸು ಮಾಡಲಾಗಿದೆ. ತಪಾಸಣೆಯಲ್ಲಿ ಸಾಮಗ್ರಿಗಳ ಖರೀದಿಯಲ್ಲಿ 4.80 ಕೋಟಿ ರೂ. ಹಾಗೂ ಕಂಬಗಳಿಗೆ ಮಾಡಲಾದ ಕಾಂಕ್ರೀಟ್‌ನಲ್ಲಿ 3.65ಕೋಟಿ ರೂ. ವ್ಯತ್ಯಾಸ ಕಂಡು ಬಂದಿದೆ. ಭದ್ರಾವತಿಯಲ್ಲಿ ಇನ್ನೂ 10 ಮಾರ್ಗಗಳ ತಪಾಸಣೆ ಕಾರ್ಯ ಬಾಕಿ ಇದ್ದು ಎಲ್ಲಾ ಮಾರ್ಗಗಳ ತಪಾಸಣೆ ಕಾರ್ಯವನ್ನು ಆದಷ್ಟು ಬೇಗ ಪೂರ್ಣಗೊಳಿಸುವಂತೆ ಸಚಿವರು ಕೆಪಿಟಿಸಿಎಲ್‌ ಅ ಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯಲ್ಲಿ 2017 ರಲ್ಲಿ ಕಾಮಗಾರಿ ಅನುಷ್ಠಾನ ಪ್ರಾರಂಭಿಸಲಾಗಿದ್ದು, 2020 ರ ಮಾರ್ಚ್‌ನಲ್ಲಿ ಎಲ್ಲಾ ಕಾಮಗಾರಿಗಳು ಪೂರ್ಣಗೊಳ್ಳಬೇಕಾಗಿತ್ತು. ವಿಳಂಬ ಕಾಮಗಾರಿ ನಿರ್ವಹಿಸಿರುವುದಕ್ಕೆ ದಂಡ ವಿ ಧಿಸಬೇಕು. ಕಾಮಗಾರಿ ಅನುಷ್ಠಾನ ಪರಿಶೀಲಿಸಲು ತಜ್ಞರ ತಂಡ ರಚಿಸಲಾಗುವುದು. ಈ ತಂಡ ನೀಡುವ ವರದಿ ಆಧಾರದಲ್ಲಿ ಮುಂದಿನ ಕ್ರಮಕ್ಕಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಅವರು ಹೇಳಿದರು.

ಯೋಜನೆ ಅನುಷ್ಠಾನದ ಪ್ರಮುಖ ಸ್ಥಳಗಳಲ್ಲಿ ಯೋಜನೆ ಕುರಿತಾಗಿ ಮಾಹಿತಿ ಬೋರ್ಡ್‌ ಅಳವಡಿಸಲಾಗುತ್ತಿದೆ. ಶಿವಮೊಗ್ಗ ವೃತ್ತದಲ್ಲಿ ಅವಾರ್ಡ್‌ ನೀಡಲಾದ ಪೂರ್ಣ ಮೊತ್ತಕ್ಕೆ ಇಂಡಿಮ್ನಿಟಿ ಬಾಂಡ್‌ ಪಡೆಯಲಾಗಿದೆ. ಕಂಬಗಳನ್ನು ನಿಗದಿಪಡಿಸಿದ ತಾಂತ್ರಿಕ ಗುಣಮಟ್ಟಕ್ಕೆ ಅನುಗುಣವಾಗಿ ಅಳವಡಿಸಲಾಗಿದೆಯೇ ಎಂಬುವುದನ್ನು ಪರಿಶೀಲಿಸಲು ತನಿಖಾ ತಂಡ ರಚಿಸಲಾಗಿದ್ದು, ಏಜೆನ್ಸಿಯವರಿಂದ ಪರಿಶೀಲನೆ ನಡೆಸಲಾಗುತ್ತಿದೆ. ಕಾಮಗಾರಿಯಲ್ಲಿ ಕಂಡು ಬಂದ ನ್ಯೂನ್ಯತೆಗಳನ್ನು ಸರಿಪಡಿಸಲು ಗುತ್ತಿಗೆದಾರರಿಗೆ ಸೂಚಿಸಲಾಗಿದ್ದು, ಸರಿಪಡಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ಕೆಪಿಟಿಸಿಎಲ್‌ ಅಕಾರಿಗಳು ಮಾಹಿತಿ ನೀಡಿದರು.

ಜಿಲ್ಲಾಧಿ ಕಾರಿ ಕೆ.ಬಿ.ಶಿವಕುಮಾರ್‌, ಕೆಪಿಟಿಸಿಎಲ್‌ ಮತ್ತು ಮೆಸ್ಕಾಂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next