Advertisement

ಕಟ್ಟು ನಿಟ್ಟಾಗಿ ಮಾರ್ಗಸೂಚಿ ಜಾರಿಗೆ ಕ್ರಮ

06:16 PM Apr 22, 2021 | Shreeraj Acharya |

ಶಿವಮೊಗ್ಗ: ಕೊರೊನಾ ಹರಡುವಿಕೆ ತಡೆಗಟ್ಟಲು ರಾಜ್ಯ ಸರ್ಕಾರ ಜಾರಿಗೊಳಿಸಿರುವ ಎಲ್ಲಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಲು ಕ್ರಮ ಕೈಗೊಳ್ಳಲಾಗಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್‌ ತಿಳಿಸಿದ್ದಾರೆ. ಬುಧವಾರದಿಂದ ರಾತ್ರಿ 9ಗಂಟೆಯಿಂದ ಬೆಳಗ್ಗೆ 6ಗಂಟೆಯವರೆಗೆ ರಾತ್ರಿ ಕರ್ಫ್ಯೂ ಆರಂಭವಾಗಲಿದ್ದು, ಈ ಅವ ಧಿಯಲ್ಲಿ ಯಾವುದೇ ಚಟುವಟಿಕಗಳಿಗೆ ಅವಕಾಶವಿರುವುದಿಲ್ಲ. ಶುಕ್ರವಾರ ರಾತ್ರಿ 9ಗಂಟೆಯಿಂದ ಸೋಮವಾರ ಬೆಳಿಗ್ಗೆ 6ಗಂಟೆಯವರೆಗೆ ಪೂರ್ಣ ಕಫೂ ಜಾರಿಯಾಗಲಿದ್ದು, ಇದನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸುವ ಕುರಿತು ಈಗಾಗಲೇ ಪೊಲೀಸ್‌ ಇಲಾಖೆಗೆ ಸೂಚನೆ ನೀಡಲಾಗಿದೆ.

Advertisement

ಜನರು ಮನೆಯ ಒಳಗೆ ಇದ್ದು, ಕೊರೊನಾ ನಿಯಂತ್ರಣದಲ್ಲಿ ಕೈಜೋಡಿಸಬೇಕು ಎಂದು ಮನವಿ ಮಾಡಿದರು. ಜನರು ಮನೆಯಿಂದ ಹೊರಗೆ ಬರುವಾಗ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸಾಮಾಜಿಕ ಅಂತರವನ್ನು ಪಾಲಿಸಬೇಕು. ಮಾರ್ಗಸೂಚಿಗಳನ್ನು ಕಟ್ಟುನಿಟ್ಟಿನಿಂದ ಅನುಷ್ಟಾನಗೊಳಿಸಲು ತಾಲೂಕು ಮಟ್ಟದಲ್ಲಿ ಕಣ್ಗಾವಲು ತಂಡಗಳನ್ನು ಈಗಾಗಲೇ ರಚಿಸಲಾಗಿದ್ದು, ತಹಶೀಲ್ದಾರ್‌ಗಳಿಗೆ ಸೂಚನೆಗಳನ್ನು ನೀಡಲಾಗಿದೆ. ಬಸ್‌ ನಿಲ್ದಾಣ, ರೈಲು ನಿಲ್ದಾಣಗಳಲ್ಲಿ ಪ್ರಯಾಣಿಕರ ದೇಹದ ತಾಪಮಾನವನ್ನು ಪರೀಕ್ಷಿಸಲು ವ್ಯವಸ್ಥೆ ಮಾಡಲಾಗಿದೆ. ಕರೋನಾ ನಿಯಂತ್ರಣಕ್ಕೆ ವ್ಯವಸ್ಥಿತ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಹಲವು ತಂಡಗಳನ್ನು ರಚಿಸಿ ನೋಡಲ್‌ ಅ ಕಾರಿಗಳ ನೇಮಕ ಮಾಡಲಾಗಿದೆ. ಈ ನೋಡಲ್‌ ಅ ಕಾರಿಗಳು ಪ್ರತಿ ದಿನ ಜಿಲ್ಲಾಡಳಿತಕ್ಕೆ ವರದಿ ನೀಡುತ್ತಿದ್ದು, ಅದರ ಆಧಾರದಲ್ಲಿ ವ್ಯವಸ್ಥೆಯನ್ನು ಸುಧಾರಿಸಲಾಗುತ್ತಿದೆ ಎಂದು ಹೇಳಿದರು,

ವ್ಯವಸ್ಥೆ ಸುಧಾರಣೆ: ಚಿಕಿತ್ಸೆ ಅಗತ್ಯವಿರುವ ಕರೋನಾ ಪಾಸಿಟಿವ್‌ ವ್ಯಕ್ತಿಗಳನ್ನು ಮೆಗ್ಗಾನ್‌ನಲ್ಲಿ ಅಡ್ಮಿಟ್‌ ಮಾಡಲಾಗುತ್ತಿದೆ. ವೈದ್ಯಕೀಯ ನಿಗಾ ಅಗತ್ಯವಿರುವ ವ್ಯಕ್ತಿಗಳಿಗಾಗಿ ಪ್ರಸ್ತುತ ಗಾಜನೂರಿನಲ್ಲಿ ಕೋವಿಡ್‌ ಕೇರ್‌ ಸೆಂಟರ್‌ ಆರಂಭಿಸಲಾಗಿದೆ. ಇಲ್ಲಿ ವೈದ್ಯರ ನೇತƒತ್ವದ ತಂಡ ರೋಗಿಗಳ ಆರೋಗ್ಯದ ಮೇಲೆ ನಿಗಾ ಇರಿಸಲಿದೆ. ಹೋಂ ಐಸೋಲೇಷನ್‌ನಲ್ಲಿರುವವರ ಮೇಲೆ ನಿಗಾ ಇರಿಸಲು ಯಾಂìಡಂಮ್‌ ಆಗಿ ಮನೆಗಳಿಗೆ ಭೇಟಿ ನೀಡಲು ಆರೋಗ್ಯ ಕಾರ್ಯಕರ್ತರ ತಂಡಗಳನ್ನು ರಚಿಸಲಾಗಿದೆ. ಪಾಸಿಟಿವ್‌ ವ್ಯಕ್ತಿಗಳ ತಪಾಸಣೆ ನಡೆಸಲು ಆಯುರ್ವೇದ ಮಹಾವಿದ್ಯಾಲಯ ಮಾತ್ರವಲ್ಲದೆ ಶಿಕಾರಿಪುರ, ತೀರ್ಥಹಳ್ಳಿ, ಭದ್ರಾವತಿ ಮತ್ತು ಸಾಗರದಲ್ಲಿ ಟ್ರಯಾಜ್‌ ಸೆಂಟರ್‌ಗಳನ್ನು ಆರಂಭಿಸಲಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಶೇ.50ರಷ್ಟು ಬೆಡ್‌ಗಳನ್ನು ಕಾಯ್ದಿರಿಸಲು ಸೂಚನೆ ನೀಡಲಾಗಿದ್ದು, ಪ್ರಸ್ತುತ ಸುಬ್ಬಯ್ಯ ಮೆಡಿಕಲ್‌ ಕಾಲೇಜಿನಲ್ಲಿ 80ಬೆಡ್‌ ಗಳ ಸೌಲಭ್ಯ ಬಳಸಿಕೊಳ್ಳಲಾಗುತ್ತಿದೆ ಎಂದರು.

ಚುನಾವಣಾ ಪ್ರಚಾರ: ತೀರ್ಥಹಳ್ಳಿ ಮತ್ತು ಭದ್ರಾವತಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಪ್ರಚಾರಕ್ಕೆ ಸಂಬಂಸಿದಂತೆ ಈಗಾಗಲೇ ಸೂಚನೆಗಳನ್ನು ನೀಡಲಾಗಿದೆ. ಮನೆ ಮನೆ ಪ್ರಚಾರಕ್ಕೆ ಮಾತ್ರ ಅವಕಾಶವಿದೆ. ಯಾವುದೇ ಕಾರಣಕ್ಕೂ ಗುಂಪು ಸೇರಲು ಅವಕಾಶವಿಲ್ಲ. ಕಫ್ರೂÂ ಅವ ಯಲ್ಲಿ ಯಾವುದೇ ರೀತಿಯ ಚಟುವಟಿಕೆಗಳಿಗೆ ಅವಕಾಶವಿರುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಪ್ರತಿ ದಿನ 3 ಸಾವಿರ ಮಂದಿಯ ಕೊರೊನಾ ತಪಾಸಣೆ ನಡೆಸಬೇಕು. ತಪಾಸಣಾ ವರದಿ ಗರಿಷ್ಠ 36 ಗಂಟೆಯ ಒಳಗಾಗಿ ಲಭಿಸುವಂತೆ ವ್ಯವಸ್ಥೆ ಮಾಡಬೇಕು ಎಂದು ಶಿಮ್ಸ್‌ ಹಿರಿಯ ಅ ಧಿಕಾರಿಗಳ ಸಭೆಯಲ್ಲಿ ಜಿಲ್ಲಾ ಧಿಕಾರಿ ಅವರು ಸೂಚನೆ ನೀಡಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next