Advertisement

Shivamogga; ತಳ್ಳುವ ಗಾಡಿಯವನ ಮೇಲೆ ಪೊಲೀಸ್ ಹಲ್ಲೆ ಆರೋಪ: ವರ್ತಕರ ಆಕ್ರೋಶ

10:26 PM Jul 08, 2024 | Vishnudas Patil |

ಶಿವಮೊಗ್ಗ: ನಗರದ ಗಾಂಧಿ ಬಜಾರ್ ನಲ್ಲಿ ತಳ್ಳುವ ಗಾಡಿಯವನ ಮೇಲೆ ಟ್ರಾಫಿಕ್ ಪೊಲೀಸ್ ಹಲ್ಲೆ ಮಾಡಿದ್ದಾರೆ ಎಂಬ ಆರೋಪದಲ್ಲಿ ಕ್ರಮ ಕೈಗೊಳ್ಳಲು ಆಗ್ರಹಿಸಿ ವರ್ತಕರು ಆಕ್ರೋಶ ಹೊರ ಹಾಕಿದ ಘಟನೆ ಸೋಮವಾರ ನಡೆದಿದೆ.

Advertisement

ಹಲ್ಲೆ ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದ ವರ್ತಕರು, ಹಲ್ಲೆ ಮಾಡಿರುವ ಪೊಲೀಸ್ ಪೇದೆ ಮೇಲೆ 302 ಕೆಸ್ ದಾಖಲಿಸಲು ಆಗ್ರಹಿಸಿದ್ದಾರೆ. ಸ್ಥಳಕ್ಕೆ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ ಮಿಥುನ್ ಕುಮಾರ್ ಭೇಟಿ ನೀಡಿದರು. ಎಸ್ ಪಿ ಮಿಥುನ್ ಕುಮಾರ್ ಪರಿಸ್ಥಿತಿ ತಿಳಿಗೊಳಿಸಿದರು.

ಮುನ್ನೆಚ್ಚರಿಕಾ ಕ್ರಮವಾಗಿ ಗಾಂಧಿ ಬಜಾರ್ ನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Advertisement

Udayavani is now on Telegram. Click here to join our channel and stay updated with the latest news.

Next