Advertisement

Shivamogga; 20 ದಿನದೊಳಗೆ ಮತ್ತೊಂದು ಕೇಸ್‌: ಈಶ್ವರಪ್ಪಗೆ ಮತ್ತೆ ಸಂಕಷ್ಟ

06:26 PM Dec 05, 2024 | Vishnudas Patil |

ಶಿವಮೊಗ್ಗ: ಮಾಜಿ ಡಿಸಿಎಂ ಈಶ್ವರಪ್ಪ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದಲ್ಲಿ 20 ದಿನದ ಅಂತರದಲ್ಲಿ ಎರಡನೇ ಕೇಸ್‌ ದಾಖಲಾಗಿದೆ.

Advertisement

ಶಿವಮೊಗ್ಗದ ಕೋಟೆ ಪೊಲೀಸ್ ಠಾಣೆಯಲ್ಲಿ ಸುಮೊಟೋ ಪ್ರಕರಣ ದಾಖಲು ಮಾಡಲಾಗಿದೆ. ಚಿನ್ಮಯ ಕೃಷ್ಣದಾಸ್‌ ಬಂಧನ ಖಂಡಿಸಿ ನಡೆದಿದ್ದ ಪ್ರತಿಭಟನೆಯಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿರುವ ಆರೋಪದ ಮೇಲೆ ಕೇಸ್ ದಾಖಲು ಮಾಡಲಾಗಿದೆ.

ಶಿವಮೊಗ್ಗ ಮಥುರಾ ಪ್ಯಾರಡೈಸ್‌ ಮುಂಭಾಗದ ನಡೆದಿದ್ದ ಪ್ರತಿಭಟನಾ ಸಭೆಯಲ್ಲಿ ಅನ್ಯ ಧರ್ಮದ ವಿರುದ್ಧ ಕೋಮು ಭಾವನೆ ಕೆರಳಿಸುವ, ದ್ವೇಷ ಭಾವನೆ ಮೂಡುವಂತೆ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಪ್ರಕರಣ ದಾಖಲು ಮಾಡಲಾಗಿದೆ.

ಇಪತ್ತು ದಿನಗಳ ಹಿಂದೆ ಶಿವಮೊಗ್ಗದ ಜಯನಗರ ಪೊಲೀಸ್ ಠಾಣೆಯಲ್ಲಿ ಸುಮೋಟೋ ಕೇಸ್ ದಾಖಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next