ಬೆಂಗಳೂರು: ಬಿಜೆಪಿ ರಾಜ್ಯ ಪ್ರಶಿಕ್ಷಣ ವರ್ಗವು ಶಿವಮೊಗ್ಗದ ಕಿಮ್ಮನೆ ಗಾಲ್ಫ್ ರೆಸಾರ್ಟ್‌ನಲ್ಲಿ ಶುಕ್ರವಾರದಿಂದ 3 ದಿನಗಳ ಕಾಲ ನಡೆಯಲಿದೆ ಎಂದು ಪಕ್ಷದ ರಾಜ್ಯ ಉಪಾಧ್ಯಕ್ಷ ನಿರ್ಮಲ ಕುಮಾರ್ ಸುರಾನಾ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲು ನೇತೃತ್ವದಲ್ಲಿ ನಡೆಯಲಿರುವ ಪ್ರಶಿಕ್ಷಣ ವರ್ಗದಲ್ಲಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭಾಗಿಯಾಗಲಿದ್ದಾರೆ. ಜತೆಗೆ ರಾಜ್ಯದ ಪದಾಧಿಕಾರಿಗಳು, ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರು, ಜಿಲ್ಲಾಧ್ಯಕ್ಷರು ಮತ್ತು ಜಿಲ್ಲಾ ಪ್ರಭಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.