ಶಿವಮೊಗ್ಗ/ಮದುರೈ: ಹೋರಿ ಬೆದರಿಸುವ ಸ್ಪರ್ಧೆ ನೋಡಲು ಹೋಗಿ ಗಾಯಗೊಂಡಿದ್ದ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಜತೆಗೆ ತಮಿಳುನಾಡಿನ ಜಲ್ಲಿಕಟ್ಟು ಸ್ಪರ್ಧೆಯಲ್ಲೂ ಇಬ್ಬರು ಸಾವನ್ನಪ್ಪಿದ್ದಾರೆ.
ಕೂಲಿ ಕೆಲಸ ಮಾಡಿಕೊಂಡಿದ್ದ ಲೋಕೇಶ್ ರವಿವಾರ ಕೊನಗನವಳ್ಳಿ ಗ್ರಾಮದಲ್ಲಿ ನಡೆದ ಹೋರಿ ಬೆದರಿಸುವ ಸ್ಪರ್ಧೆ ನೋಡಲು ಹೋಗಿದ್ದ. ಈ ವೇಳೆ ಮುಂದಿನಿಂದ ಬಂದ ಹೋರಿ ಲೋಕೇಶ್ ಎದೆಗೆ ಗುದ್ದಿತು, ಸ್ಥಳದಲ್ಲಿ ಕುಸಿದು ಬಿದ್ದಿದ್ದ ಅವರನ್ನು ಆಯನೂರು ಆಸ್ಪತ್ರೆಗೆ ಬಳಿಕ ವೈದ್ಯರ ಸಲಹೆಯಂತೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದರು.
ಇನ್ನೊಂದು ಪ್ರಕರಣದಲ್ಲಿ ಶಿಕಾರಿಪುರ ತಾಲೂಕಿನ ಮಾಳೂರು ಗ್ರಾಮದಲ್ಲೂ ಹೋರಿ ಬೆದರಿಸುವ ಸ್ಪರ್ಧೆ ನೋಡಲು ಹೋದ ಮಾಳೂರು ನಿವಾಸಿ ರಂಗನಾಥ್ (23) ಅವರು ಮೃತಪಟ್ಟಿದ್ದಾರೆ. ಎರಡೂ ಪ್ರಕರಣಗಳಲ್ಲಿ ಮೃತರ ಸಂಬಂಧಿಕರು ದೂರು ದಾಖಲಿಸಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಮದುರೈಯಲ್ಲಿ ಇಬ್ಬರು ಸಾವು
ತಮಿಳುನಾಡಿನ ಮದುರೈ ಜಿಲ್ಲೆಯಲ್ಲಿನ 2 ಪ್ರತ್ಯೇಕ ಘಟನೆಗಳಲ್ಲಿ ಜಲ್ಲಿಕಟ್ಟುವಿನಲ್ಲಿ ಇಬ್ಬರು ಅಸುನೀಗಿದ್ದಾರೆ.