Advertisement

Shivamogga; ಚಕ್ರವರ್ತಿ ಸೂಲಿಬೆಲೆ ವಿರುದ್ದ ಕಾಂಗ್ರೆಸ್ ಪ್ರತಿಭಟನೆ

06:48 PM Aug 29, 2023 | Shreeram Nayak |

ಶಿವಮೊಗ್ಗ: ಮಹಿಳೆ ವಿರುದ್ದ ಚಕ್ರವರ್ತಿ ಸೂಲಿಬೆಲೆ ಅವಹೇಳನಕಾರಿ ಕಾಮೆಂಟ್​ ಹಿನ್ನಲೆ ಚಕ್ರವರ್ತಿ ಸೂಲಿಬೆಲೆ ವಿರುದ್ದ ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಯುತ್ತಿದೆ.

Advertisement

ಜಿಲ್ಲಾ ಕಾಂಗ್ರೆಸ್ ವತಿಯಿಂದ ಬಿ.ಹೆಚ್ ರಸ್ತೆಯ ಕರ್ನಾಟಕ ಸಂಘ ಬಳಿ ಪ್ರತಿಭಟನೆ ನಡೆಸಲಾಗುತ್ತಿದೆ.

ಸೂಲಿಬೆಲೆ ಅವರು ಫೇಸ್​ ಬುಕ್​ನಲ್ಲಿ ಅವಾಚ್ಯ ಶಬ್ದದಿಂದ ಕಾಮೆಂಟ್ ಮಾಡಿದ್ದರು. ಇದೀಗ ಕಾಮೆಂಟ್ ವಿರೋಧಿಸಿ, ಕೈಯಲ್ಲಿ ಪೊರಕೆ ಹಿಡಿದು ಚಕ್ರವರ್ತಿ ಸೂಲಿಬೆಲೆ ವಿರುದ್ದ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚಕ್ರವರ್ತಿ ಸೂಲಿಬೆಲೆ ಅವರನ್ನು ಬಂಧಿಸುವಂತೆ ಪ್ರತಿಭಟನಾಕಾರರ ಆಗ್ರಹಿಸಿದ್ದಾರೆ.

ಚಕ್ರವರ್ತಿ ಸೂಲಿಬೆಲೆ ಪರ ಘೋಷಣೆ
ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಕರೆದೊಯ್ಯುತ್ತಿದ್ದ ವೇಳೆ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರಿಂದ ಚಕ್ರವರ್ತಿ ಸೂಲಿಬೆಲೆ ಪರವಾಗಿ ಘೋಷಣೆ ಕೂಗಿದರು.

Advertisement

ಈ ವೇಳೆ ಮೋದಿ ಮೋದಿ ಎಂದು ಕೂಗಿದ ಬಿಜೆಪಿ ಹಾಗೂ ನಮೋ ಬ್ರಿಗೇಡ್ ಕಾರ್ಯಕರ್ತರು.

ಕಾಂಗ್ರೆಸ್ ನವರು ಪ್ರತಿಭಟನೆ ನಡೆಸಿದ ಸ್ಥಳವನ್ನು ಬಿಜೆಪಿ ಹಾಗೂ ನಮೋ ಬ್ರಿಗೇಡ್ ಕಾರ್ಯಕರ್ತರಿಂದ ಗೋಮೂತ್ರ ಸಿಂಪಡಿಸಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next