Advertisement

ಶಿವಮೊಗ್ಗ: ಸಿಎಂ ಗೆ ಘೇರಾವ್ ಹಾಕಲು ಕಾಂಗ್ರೆಸ್ ಪ್ಲಾನ್ : 20ಕ್ಕೂ ಹೆಚ್ಚು ಕಾರ್ಯಕರ್ತರ ಬಂಧನ

07:09 PM Feb 28, 2021 | Team Udayavani |

ಶಿವಮೊಗ್ಗ : ಬೆಲೆ ಏರಿಕೆ, ಕೋವಿಡ್ ಎರಡನೇ ಅಲೆ ನಡುವೆ ಸನ್ಮಾನ ಕಾರ್ಯಕ್ರಮ ಆಯೋಜಿಸಿದ್ದಕ್ಕೆ ವಿರೋಧಿಸಿ ಶಿವಮೊಗ್ಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮುಖ್ಯಮಂತ್ರಿಗಳಿಗೆ ಘೇರಾವ್ ಹಾಕಲು ನಿರ್ಧರಿಸಿದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸೇರಿ ಸುಮಾರು ಇಪ್ಪತ್ತಕ್ಕೂ ಹೆಚ್ಚು ಮಂದಿ ಕಾರ್ಯಕರ್ತರನ್ನು ಬಂಧಿಸಿದ್ದಾರೆ.

Advertisement

ಶಿವಮೊಗ್ಗದಲ್ಲಿ ಸಿಎಂ ಬಿಎಸ್ ವೈ ನಮ್ಮೋಲುಮೆ ಸನ್ಮಾನ ಕಾರ್ಯಕ್ರಮಕ್ಕೆ ಭಾಗಿಯಾಗುವ ವಿಚಾರ ತಿಳಿದ ಕಾಂಗ್ರೆಸ್ ಕಾರ್ಯಕತರು ಕಾರ್ಯಕ್ರಮಕ್ಕೆ ತೆರಳುವ ವೇಳೆ ಕಾಂಗ್ರೆಸ್ ಕಚೇರಿ ಎದುರು ಘೇರಾವ್ ಹಾಕಲು ಯೋಜನೆ ರೂಪಿಸಿದ್ದರು ಇದನ್ನು ಮನಗಂಡ ಪೊಲೀಸ್ ಅಧಿಕಾರಿಗಳು ಮುಖ್ಯಮಂತ್ರಿಗಳು ಬರುವ ಮೊದಲೇ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್ ಸೇರಿದಂತೆ 20 ಕ್ಕೂ ಹೆಚ್ಚು ಕಾರ್ಯಕರ್ತರನ್ನು ಬಂಧಿಸಿದ್ದಾರೆ.

ಇದನ್ನೂ ಓದಿ : ಎಕ್ಸ್ ಕ್ಲ್ಯೂಸಿವ್ ಇಂಟರ್ ವೀವ್ – ‘ಭಾರತ ಸಂಗೀತ ಪ್ರಧಾನವಾದ ದೇಶ’ : ನಾಗೇಂದ್ರ ಪ್ರಸಾದ್

Advertisement

Udayavani is now on Telegram. Click here to join our channel and stay updated with the latest news.

Next