Advertisement

ಶಿವಮೊಗ್ಗದಲ್ಲಿ ಇಂದು ಮತ್ತೆ 9 ಜನರಲ್ಲಿ ಕೋವಿಡ್ ಪಾಸಿಟಿವ್

06:52 PM Jun 01, 2020 | sudhir |

ಶಿವಮೊಗ್ಗ : ಶಿವಮೊಗ್ಗದಲ್ಲಿ ಇಂದು ಮತ್ತೆ 9 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ ಇವರೆಲ್ಲರೂ ಬೆಂಗಳೂರಿನಿಂದ ಬಂದವರಾಗಿದ್ದಾರೆ.

Advertisement

P-1305 ರ ಸಂಪರ್ಕದಿಂದ 30 ವರ್ಷದ ಮಹಿಳೆಗೆ ಹಾಗೂ 52 ವರ್ಷದ ವ್ಯಕ್ತಿಯಲ್ಲಿ ಕೋವಿಡ್ ಸೋಂಕು ದೃಢ ಪಟ್ಟಿದ್ದು ಉಳಿದವರ ಸೋಂಕಿನ ಮೂಲಗಳನ್ನು ಪತ್ತೆ ಹಚ್ಚುವ ಕಾರ್ಯ ಜಿಲ್ಲಾಡಳಿತದಿಂದ ನಡೆಯುತ್ತಿದೆ.

ಸದ್ಯ ಸೋಂಕಿತರು ಜಿಲ್ಲೆಯ ನಿಗದಿತ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದರೊಂದಿಗೆ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 51ಕ್ಕೆ ಏರಿಕೆಯಾಗಿದ್ದು 26 ಜನ ಸೋಂಕಿತರು ಗುಣಮುಖರಾಗಿ ಮನೆಗೆ ತೆರಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next