Advertisement

ಶಿವಮೊಗ್ಗದಲ್ಲಿ ಹಿಂದೂ ಸಂಘಟನೆ ಯುವಕನ ಬರ್ಬರ ಹತ್ಯೆ

07:56 AM Feb 21, 2022 | Team Udayavani |

ಶಿವಮೊಗ್ಗ: ನಗರದ ಸೀಗೆಹಟ್ಟಿಯಲ್ಲಿ ಹಿಂದೂ ಪರ ಸಂಘಟನೆಯ ಯುವಕನೊಬ್ಬನನ್ನು ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿ ಪರಾರಿಯಾದ ಘಟನೆ ಭಾನುವಾರ ರಾತ್ರಿ 10 ಗಂಟೆ ಸುಮಾರಿಗೆ ನಡೆದಿದೆ. ಹರ್ಷ (25) ಕೊಲೆಯಾದ ಯುವಕ.

Advertisement

ದೊಡ್ಡಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಾತ್ರಿ 9.30ರ ಸುಮಾರಿಗೆ ಭಾರತಿ ಕಾಲೋನಿ ಬಳಿ ಚಹಾ ಕುಡಿಯುತ್ತಿದ್ದ ವೇಳೆ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಹತ್ಯೆ ಮಾಡಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಪರಿಸ್ಥಿತಿ ಉದ್ವಿಗ್ನಗೊಂಡ ಹಿನ್ನೆಲೆಯಲ್ಲಿ ಎರಡು ದಿನ ನಿಷೇಧಾಜ್ಞೆ ಘೋಷಿಸಲಾಗಿದ್ದು, ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ.

ಸೋಮವಾರ ಶಿವಮೊಗ್ಗ ನಗರವ್ಯಾಪ್ತಿಯ ಎಲ್ಲಾ ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next