Advertisement

Shivamogga: ಬೇಕರಿಯಲ್ಲಿ ಅಗ್ನಿ ಅವಘಡ… ಸ್ಫೋಟಗೊಂಡ ಸಿಲಿಂಡರ್, ದಿಕ್ಕಾಪಾಲಾಗಿ ಓಡಿದ ಜನ

04:56 PM Aug 21, 2024 | sudhir |

ಶಿವಮೊಗ್ಗ: ಇಲ್ಲಿನ ಬೇಕರಿಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿ ಸಿಲಿಂಡರ್ ಸ್ಫೋಟಗೊಂಡು ಇಡೀ ಅಂಗಡಿ ಸುಟ್ಟು ಕರಕಲಾದ ಘಟನೆ ಶಿವಮೊಗ್ಗ ತಾಲೂಕಿನ ಆಯನೂರಿನಲ್ಲಿ ಬುಧವಾರ ಸಂಭವಿಸಿದೆ.

Advertisement

ಆಯನೂರಿನ ಹಣಗೆರೆ ರಸ್ತೆಯಲ್ಲಿರುವ ಎಸ್‌ಎಲ್‌ವಿ ಐಯ್ಯಾಂಗಾರ್‌ ಬೇಕರಿಯಲ್ಲಿ ದಿಢೀರ್‌ ಬೆಂಕಿ ಕಾಣಿಸಿಕೊಂಡಿದೆ ಈ ವೇಳೆ ಅಂಗಡಿಯಲ್ಲಿದ್ದವರು ಅಂಗಡಿಯಿಂದ ಹೊರ ಓಡಿ ಬಂದಿದ್ದಾರೆ ಈ ವೇಳೆ ಬೇಕರಿಯೊಳಗೆ ಇದ್ದ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡಿದೆ. ಈ ವೇಳೆ ಅಕ್ಕಪಕ್ಕದ ಅಂಗಡಿಯಲ್ಲಿದ್ದ ಜನ ದಿಕ್ಕಾಪಾಲಾಗಿ ಓಡಿ ಹೋಗಿದ್ದಾರೆ.

ಬೆಂಕಿ ಅವಘಡ ಸಂಭವಿಸಿದ ಬೇಕರಿ ಪಕ್ಕದಲ್ಲೇ ಪೆಟ್ರೋಲ್ ಬಂಕ್ ಇದ್ದು ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿ ನಂದಿಸಿದ್ದು ದೊಡ್ಡ ಅನಾಹುತ ತಪ್ಪಿದಂತಾಗಿದೆ.

ಇದನ್ನೂ ಓದಿ: ತೈವಾನ್‌ ಕಂಪನಿಯಿಂದ 200 ಕೋಟಿ ಹೂಡಿಕೆ: ಎಂ.ಬಿ.ಪಾಟೀಲ್

Advertisement

Udayavani is now on Telegram. Click here to join our channel and stay updated with the latest news.