Advertisement
ಮಂಗಳವಾರ ಇಲ್ಲಿನ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ, ಕರ್ನಾಟಕ ಜಾನಪದ ಪರಿಷತ್ತು ಜ್ಞಾನದೀಪ ಶಿಕ್ಷಣ ಸಂಸ್ಥೆ ಜಾವಳ್ಳಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಶಿವಮೊಗ್ಗ ಇವರ ಆಶ್ರಯದಲ್ಲಿ ಜ್ಞಾನದೀಪ ಶಾಲಾ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಶಿವಮೊಗ್ಗ ಜಿಲ್ಲಾ ಹದಿಮೂರನೆ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನವನ್ನು ತೆಂಗಿನಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
Related Articles
Advertisement
ಪ್ರತಿಭೆಯೂ ಪ್ರತಿಯೊಬ್ಬರಲ್ಲೂ ಇರುತ್ತದೆ. ಕವಿ ಹೃದಯದಿಂದ ಮಾತ್ರ ಸಹೃದಯ ಸಮಾಜವನ್ನು ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ. ಆಧುನಿಕತೆಗೆ ನಾವು ಬಲಿಯಾಗುತ್ತಿದ್ದೇವೆ. ಪುಸ್ತಕ ಓದುವ ಸಂಸ್ಕೃತಿ ದೂರವಾಗುತ್ತಿದೆ. ಯಾರು ಪುಸ್ತಕವನ್ನು ತಲೆ ತಗ್ಗಿಸಿ ಓದುತ್ತಾರೋ ಅವರನ್ನು ಸಮಾಜದಲ್ಲಿ ತಲೆ ಎತ್ತುವಂತೆ ಮಾಡುತ್ತದೆ ಎನ್ನುವುದನ್ನು ನಾವು ಮರೆತಿದ್ದೇವೆ. ಕನ್ನಡ ನಾಡಿನಲ್ಲಿ ಓದುವ ಶಾಲೆಗಳಲ್ಲಿ ದಂಡ ಹಾಕುವಂತಹ ದುರ್ದೈವ ಬಂದಿರುವುದು ವಿಷಾದದ ಸಂಗತಿಯಾಗಿದೆ.
ನಮ್ಮ ಕನ್ನಡ ನಾಡಿನಲ್ಲಿಯೇ ಹೀಗೆ ಆದರೆ ಕನ್ನಡ ಉಳಿಯುವುದೆಲ್ಲಿ ಎನ್ನುವ ಆತಂಕ ನಮ್ಮನ್ನು ಕಾಡುತ್ತಿದೆ. ಹೀಗಾದರೆ ನಮ್ಮ ಕನ್ನಡವನ್ನು ಉಳಿಸಿ ಬೆಳೆಸುವವರು ಯಾರು ಎಂದವರು ಪ್ರಶ್ನಿಸಿದರು.
ಕನ್ನಡ ನಾಡಿನಲ್ಲಿ ಕನ್ನಡ ಓದುವುದು ನಮ್ಮೆಲ್ಲರ ಹಕ್ಕಾಗಿದೆ. ಸರ್ಕಾರ ಕನ್ನಡ ಉಳಿಸುವಲ್ಲಿ ಪ್ರಮುಖವಾದ ಪಾತ್ರ ವಹಿಸಬೇಕಿದೆ. ಕನ್ನಡ ನಾಡಿನಲ್ಲಿ ತಲೆ ಎತ್ತಿದ ಯಾವುದೇ ಶಾಲೆಯಲ್ಲಿ ಕನ್ನಡ ಮೊದಲ ಪಠ್ಯವಾಗಬೇಕು. ಮಾತೃಭಾಷೆ ಮಾತ್ರ ಮಾತೃತ್ವವನ್ನು ಉಳಿಸಲು ಸಾಧ್ಯವಾಗುತ್ತದೆ. ಕನ್ನಡ ಅದೊಂದು ಭಾಷೆಯಲ್ಲ. ಅದೊಂದು ಸಂಸ್ಕೃತಿ, ಅದೊಂದು ಪರಂಪರೆ, ಅದೊಂದು ಜೀವನ ಕ್ರಮ. ಇಂತಹ ಕನ್ನಡ ಭಾಷಾ ಪರಂಪರೆಯನ್ನು ಉಳಿಸಿ ಬೆಳೆಸುವಲ್ಲಿ ಎಲ್ಲರ ಪಾತ್ರ ಇದೆ ಎಂದರು.
ಕನ್ನಡ ಸಾಹಿತ್ಯಕ್ಕೆ ತನ್ನದೇ ಆದ ಶ್ರೀಮಂತಿಕೆ ಇದೆ. ಸಾಹಿತ್ಯದಿಂದ ಮಾತ್ರ ಉತ್ತಮ ಸಮಾಜ ನಿರ್ಮಿಸಲು ಸಾಧ್ಯವಾಗುತ್ತದೆ. ಅದರಲ್ಲೂ ಕನ್ನಡ ಸಾಹಿತ್ಯಕ್ಕಿರುವ ಹಿರಿಮೆ ಬೇರಾವ ಭಾಷೆಗಳಿಗೂ ಇಲ್ಲ. ಅಂತಹ ಅಪರೂಪದ ಭಾಷಾ ಮಹತ್ವ ನಮ್ಮ ಕನ್ನಡಕ್ಕಿದೆ. ಎಲ್ಲರನ್ನೂ ಒಂದು ಮಾಡುವ ಶಕ್ತಿ ಸಾಹಿತ್ಯಕ್ಕಿದೆ. ನಾವು ಇಂದು ಮಾಹಿತಿ ಯುಗ ಹಾಗೂ ಜ್ಞಾನಯುಗದಲ್ಲಿದ್ದೇವೆ. ಇಂದಿನ ಮಾಹಿತಿ ತಂತ್ರಜ್ಞಾನ ಯುಗದಲ್ಲಿ ನಮ್ಮ ಯುವಕ- ಯುವತಿಯರು ಅನೇಕ ದುಷ್ಪರಿಣಾಮಗಳಿಗೆ ಒಳಗಾಗಿದ್ದಾರೆ. ಬಹುಮಾಧ್ಯಮಗಳ ಹಾವಳಿಯಿಂದಾಗಿ ನಮ್ಮ ಸಮಯ, ಕ್ರಿಯಾಶೀಲತೆ, ಕಲ್ಪನಾಶಕ್ತಿಗಳನ್ನು ಮಾಧ್ಯಮಗಳು ಕಸಿದುಕೊಂಡಿವೆ. ನಮ್ಮ ಆದುನಿಕತೆಯಿಂದಾಗಿ ಮನುಷ್ಯ ಸಂಬಂಧಗಳನ್ನೇ ಕಳೆದುಕೊಂಡಿದ್ದೇವೆ.ನಮ್ಮ ಸಂವಿಧಾನ ನಮಗೆ ಎಲ್ಲಾ ಹಕ್ಕು ಹಾಗೂ ಕರ್ತವ್ಯಗಳನ್ನು ನೀಡಿದೆ. ಅಂತಹ ಸಂವಿಧಾನದವನ್ನು ತಿರುಚುವ ಕಾರ್ಯಕ್ಕೆ ಮುಂದಾಗುತ್ತಿರುವುದು ವಿ‚ಷಾದನಿಯ ಸಂಗತಿ. ಇರುವ ಸಂವಿದಾನವನ್ನೇ ಬಲಪಡಿಸುವ ಕಾರ್ಯ ಆಗಬೇಕಿದೆ. ಮಕ್ಕಳಿಗೆ ತನ್ನದೇ ಆದ ಹಕ್ಕುಗಳಿವೆ ಅಂತಹ ಹಕ್ಕುಗಳನ್ನು ಕಸಿದುಕೊಳ್ಳುವ ಕೆಲಸವಾಗುತ್ತಿದೆ. ಮಕ್ಕಳಲ್ಲಿ ಸಾಕಷ್ಟು ಪ್ರತಿಭಾವಂತರಿದ್ದು ಅಂತಹ ಪ್ರತಿಭೆಗಳನ್ನು ಬೆಳೆಸುವಲ್ಲಿ ಇಂತಹ ಸಂಘ-ಸಂಸ್ಥೆಗಳು ಮುಂದಾಗಬೇಕಿದೆ. ಗ್ರಾಮೀಣ ಪ್ರದೇಶಗಳ ಪ್ರತಿಭೆಗಳಿಗೆ ವಿಶೇಷವಾದ ಆದ್ಯತೆ ನೀಡಬೇಕು ಎಂದರು.
ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಜಿಲ್ಲಾಧ್ಯಕ್ಷ ಡಿ. ಮಂಜುನಾಥ ಪ್ರಾಸ್ತಾವಿಕವಾಗಿ ಮಾತನಾಡಿ, ನಾವು ಬೆಳೆಸಬೇಕಾದ ಮಕ್ಕಳ ಮನಸ್ಸುಗಳನ್ನು ನಮ್ಮ ಸ್ವಾರ್ಥಕ್ಕಾಗಿ ಬಳಸಿಕೊಳ್ಳುತ್ತಿದ್ದೇವೆ. ನಾವು ಬರಿ ದೊಡ್ಡವರನ್ನು ದೊಡ್ಡವರನ್ನಾಗಿ ಮಾಡುವುದಲ್ಲ. ಮಕ್ಕಳನ್ನು ದೊಡ್ಡವರನ್ನಾಗಿ ಮಾಡಬೇಕಿದೆ. ಮಕ್ಕಳಲ್ಲಿ ಉತ್ತಮವಾದ ಸಾಂಸ್ಕೃತಿಕ ಚಿಂತನೆಗಳು ಬೆಳೆಸಬೇಕಾಗಿದೆ. ಮಕ್ಕಳ ಮನಸ್ಸನ್ನು ಸರಿಯಾಗಿ ಅರ್ಥ ಮಾಡಿಕೊಂಡು ಅವರಲ್ಲಿ ಸೃಜನಶೀಲತೆ ಬೆಳೆಸುವಲ್ಲಿ ನಾವೆಲ್ಲರೂ ಸಾಮೂಹಿಕವಾಗಿ ಮುಂದಾಗಬೇಕಿದೆ ಎಂದರು.
ಜ್ಞಾನದೀಪ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ವಿ. ದೇವೇಂದ್ರ ಶಾಸ್ತ್ರಿಗಳು ಧ್ವಜಾರೋಹಣ ನೆರವೇರಿಸಿ ಸಮ್ಮೇಳನ ಸರ್ವಾಧ್ಯಕ್ಷೆ ರಕ್ಷಿತಾ ಎಸ್.ಕೆ. ಅವರ “ಮಲೆನಾಡು ಕುಸುಮ’ ಕವನ ಸಂಕಲನವನ್ನು ಬಿಡುಗಡೆಗೊಳಿಸಿದರು. ರಾಮಕೃಷ್ಣ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಶೋಭಾ ವೆಂಕಟರಮಣ, ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಭದ್ರಾವತಿ ಶಾಖೆಯ ಅಧ್ಯಕ್ಷ ಕೋಗಲೂರು ತಿಪ್ಪೇಸ್ವಾಮಿ, ಸಾಗರದ ಪರಮೇಶ್ವರ ಕರೂರು, ರಿಪ್ಪನ್‌ಪೇಟೆಯ ಮಂಜುನಾಥ ಕಾಮತ್, ಕರ್ನಾಟಕ ಜಾನಪದ ಪರಿಷತ್ತು ಸಾಗರ ಶಾಖೆಯ ಅಧ್ಯಕ್ಷ ವಿ.ಟಿ. ಸ್ವಾಮಿ ಶಿಕಾರಿಪುರ ಘಟಕದ ಬಿ. ಪಾಪಯ್ಯ, ಸಾಗರ ತಾಲೂಕು ಮಕ್ಕಳ ಸಮ್ಮೇಳನ ಅಧ್ಯಕ್ಷೆ ಸ್ಫೂರ್ತಿ ವೈ.ಎಚ್., ಭದ್ರಾವತಿಯ ಆರ್. ವೀಣಾ, ಪ್ರಾಂಶುಪಾಲ ಶ್ರೀಕಾಂತ ಹೆಗಡೆ, ಉಪಪ್ರಾಚಾರ್ಯ ಡಾ| ರಿಜಿ ಜೋಸೆಫ್, ಮುಖ್ಯೋಪಾಧ್ಯಾಯಿನಿ ವಾಣಿ ಕೃಷ್ಣಪ್ರಸಾದ್ ಮತ್ತಿತರರು ಇದ್ದರು. ಜ್ಞಾನದೀಪ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ನಾಡಗೀತೆಯೊಂದಿಗೆ ಕಾರ್ಯಕ್ರಮ ಆರಂಭಿಸಲಾಯಿತು.
ಶ್ರೀಕಾಂತ ಗೋಸಾವಿ ಸ್ವಾಗತಿಸಿದರು. ಪ್ರಕಾಶ್ ಬಣಕಾರ್ ವಂದಿಸಿದರು. ಮಲ್ಲಿಕಾರ್ಜುನ ತುರವನೂರು ಕಾರ್ಯಕ್ರಮ ನಿರೂಪಿಸಿದರು.