Advertisement

Shivamogga; ಈಶ್ವರಪ್ಪ ನಿವೃತ್ತಿ ವಿರೋಧಿಸಿ, ಪಾಲಿಕೆ ಸದಸ್ಯರಿಂದ ಸಾಮೂಹಿಕ‌ ರಾಜೀನಾಮೆ

02:16 PM Apr 12, 2023 | Shreeram Nayak |

ಶಿವಮೊಗ್ಗ: ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಅವರು ನಿನ್ನೆಯಷ್ಟೇ  ಚುನಾವಣಾ ರಾಜಕೀಯ ನಿವೃತ್ತಿಯನ್ನು ಘೋಷಣೆ ಮಾಡಿದ್ದರು. ಆದರೆ ಈಗ ಅವರ ಈ ನಿರ್ಧಾರಕ್ಕೆ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದು,ಈ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂಬ ಒತ್ತಾಯ ಕೇಳಿಬಂದಿದೆ. ಅಲ್ಲದೆ, ಮೇಯರ್- ಉಪಮೇಯರ್ ಸೇರಿದಂತೆ ಎಲ್ಲಾ 19 ಮಂದಿ ಬಿಜೆಪಿ ಸದಸ್ಯರು  ರಾಜೀನಾಮೆ ಸಲ್ಲಿಸಿದ್ದಾರೆ.

Advertisement

ಅದೇ ರೀತಿ ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಸಹ ರಾಜೀನಾಮೆಗೆ ನಿರ್ಧಾರ ಮಾಡಿದ್ದಾರೆ.

ಬೆಂಗಳೂರಿಗೆ ತೆರಳಿ ಯಡಿಯೂರಪ್ಪ ಅವರನ್ನು ಭೇಟಿಯಾಗಲು ನಿರ್ಧಾರಿಸಿದ್ದಾರೆ.

ಈಶ್ವರಪ್ಪ ಅಭಿಮಾನಿಗಳು ಬಿಜೆಪಿ ಜಿಲ್ಲಾ ಕಚೇರಿ ಎದುರು ಬುಧವಾರ(ಎ.12) ಪ್ರತಿಭಟನೆ ನಡೆಸಿದ್ದಾರೆ. ಪಕ್ಷದ ಕಾರ್ಯಕರ್ತರು ರಸ್ತೆ ತಡೆ ನಡೆಸಿ ಆಕ್ರೋಶ ಹೊರಹಾಕಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next