Advertisement

ಫಸಲ್‌ ಬಿಮಾ ಯೋಜನೆ ಪ್ರಯೋಜನ ದೊರಕಿಸಿ

08:04 PM Feb 20, 2022 | Team Udayavani |

ಶಿವಮೊಗ್ಗ: ಜಿಲ್ಲೆಯಲ್ಲಿ ಪ್ರಧಾನ ಮಂತ್ರಿ ಫಸಲ್‌ ಬಿಮಾಯೋಜನೆಯಡಿ ಪ್ರಯೋಜನ ಪಡೆಯುತ್ತಿರುವರೈತರ ಸಂಖ್ಯೆ ಕಡಿಮೆಯಿದ್ದು, ಎಲ್ಲಾ ರೈತರು ಇದರಪ್ರಯೋಜನ ಪಡೆಯುವ ನಿಟ್ಟಿನಲ್ಲಿ ಅಧಿ ಕಾರಿಗಳುಕೆಲಸ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವಕೆ.ಸಿ.ನಾರಾಯಣ ಗೌಡ ತಿಳಿಸಿದರು.

Advertisement

ಶನಿವಾರ ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿತೈÅಮಾಸಿಕ ಕೆಡಿಪಿ ಸಭೆಯಲ್ಲಿ ವಿವಿಧ ಇಲಾಖೆಗಳಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು.ಜಿಲ್ಲೆಯಲ್ಲಿ ಸಹಕಾರ ಬ್ಯಾಂಕ್‌ನಲ್ಲಿ 96 ಸಾವಿರಕ್ಕೂಅ ಧಿಕ ರೈತರು ಖಾತೆ ಹೊಂದಿದ್ದರೂ, ಫಸಲ್‌ ಬಿಮಾಯೋಜನೆಯಡಿ ನೋಂದಾಯಿಸಿರುವ ರೈತರ ಸಂಖ್ಯೆಕೇವಲ 19 ಸಾವಿರ ಮಾತ್ರ. ಬೆಳೆ ಹಾನಿಯಾದಸಂದರ್ಭದಲ್ಲಿ ವಿಮಾ ಹಣ ನೀಡುವ ಈ ಮಹತ್ವದಯೋಜನೆ ಬಗ್ಗೆ ರೈತರಿಗೆ ಮಾಹಿತಿ ನೀಡಿ ಹೆಚ್ಚಿನ ರೈತರುಇದರ ಲಾಭ ಪಡೆಯುವಂತೆ ಮನವೊಲಿಸಬೇಕು.

ರೈತರಿಗೆ ನೀಡಲಾಗುತ್ತಿರುವ ಬೆಂಬಲ ಬೆಲೆಯಸಂಪೂರ್ಣ ಲಾಭ ರೈತರಿಗೆ ದೊರೆಯುವಂತೆನೋಡಿಕೊಳ್ಳಬೇಕು. ಮಧ್ಯವರ್ತಿ, ವ್ಯಾಪಾರಿಗಳುಇದರ ಲಾಭ ಪಡೆಯದಂತೆ ಎಚ್ಚರಿಕೆ ವಹಿಸಬೇಕು.ರೈತರು ಭತ್ತವನ್ನು ಪಕ್ಕದ ಜಿಲ್ಲೆಯ ಅಕ್ಕಿ ಗಿರಣಿಗಳಿಗೆಸಾಗಾಣಿಕೆ ಮಾಡಿದ್ದಲ್ಲಿ, ಅದಕ್ಕೆ ತಗಲುವ ವೆಚ್ಚವನ್ನುಸರ್ಕಾರದಿಂದ ಭರಿಸಲಾಗುತ್ತಿದ್ದು, ನೇರವಾಗಿ ರೈತರಖಾತೆಗೆ ಹಣ ಜಮಾ ಆಗುವಂತೆ ನೋಡಿಕೊಳ್ಳಬೇಕುಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next