ಶಿವಮೊಗ್ಗ: ರೈತರ ಟಿಸಿ ಸುಟ್ಟ 24 ಯೊಳಗೆ ಟಿಸಿಬದಲಾವಣೆ ಮಾಡುವಂತಹ ದಾಖಲೆಯ ನಿರ್ಧಾರಸೇರಿದಂತೆ ವಿವಿಧ ಹೊಸ ಯೋಜನೆಗಳ ಮೂಲಕರಾಜ್ಯದ ವಿದ್ಯುತ್ ಸರಬರಾಜಿನಲ್ಲಿ ಪ್ರಗತಿ ಸಾಧಿಸಲಾಗುತ್ತಿದೆ ಎಂದು ಇಂಧನ, ಕನ್ನಡ ಮತ್ತುಸಂಸ್ಕೃತಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿಸಚಿವ ವಿ. ಸುನಿಲ್‌ಕುಮಾರ್ ತಿಳಿಸಿದರು.
ಮಂಗಳೂರು ವಿದ್ಯುತ್ಛಕ್ತಿ ಸರಬರಾಜು ಕಂಪನಿನಿಯಮಿತದ ವತಿಯಿಂದ ನಗರದ ಮಂಡ್ಲಿಯಲ್ಲಿನೂತನವಾಗಿ ನಿರ್ಮಿಸಲಾಗಿರುವ ಮೆಸ್ಕಾಂ ನಗರವಿಭಾಗೀಯ ಕಚೇರಿ-2 ರ ಹಾಗೂ ಘಟಕ-6ರಕಟ್ಟಡದ ಉದ್ಘಾಟನೆಯನ್ನು ಶುಕ್ರವಾರ ನೆರವೇರಿಸಿಅವರು ಮಾತನಾಡಿದರು.ಅಭಿವೃದ್ಧಿ ಒಂದು ನಿರಂತರ ಪ್ರಕ್ರಿಯೆಯಾಗಿದ್ದುಇಂಧನ ಇಲಾಖೆಯಲ್ಲಿ ಅತ್ಯುತ್ತಮ ಸುಧಾರಣೆಗಳುಆಗಿವೆ.
ಗ್ರಾಮೀಣ ಭಾಗದಲ್ಲಿ ರೇಷನ್ ಕಾರ್ಡ್,ಆಧಾರ್ ಕಾರ್ಡ್ ಹೊಂದಿರುವವರಿಗೆ ಉಚಿತವಿದ್ಯುತ್ ನೀಡುವ “ಬೆಳಕು’ ಯೋಜನೆಯಡಿಕೇವಲ 100 ದಿನಗಳ ಅವ ಧಿಯಲ್ಲಿ 2 ಲಕ್ಷಕ್ಕೂ ಹೆಚ್ಚುಮನೆಗಳಿಗೆ ಉಚಿತ ವಿದ್ಯುತ್ ಸಂಪರ್ಕ ನೀಡಲಾಗಿದೆಎಂದರು.